ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವ ಖಚಿತ : ಶ್ರೀನಿವಾಸಗೌಡ

Published : Jan 28, 2023, 07:07 AM IST
 ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವ ಖಚಿತ : ಶ್ರೀನಿವಾಸಗೌಡ

ಸಾರಾಂಶ

ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳ ಜನಪರ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿರುವ ದೇಶದ ಮತದಾರ ಬಂಧುಗಳು ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಪಕ್ಷವನ್ನು ಬೆಂಬಲಿಸಿ ಗೆಲುವಿನ ದಡ ಸೇರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಹೇಳಿದರು.

 ಕೆ.ಆರ್‌. ನಗರ :  ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರಗಳ ಜನಪರ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿರುವ ದೇಶದ ಮತದಾರ ಬಂಧುಗಳು ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಪಕ್ಷವನ್ನು ಬೆಂಬಲಿಸಿ ಗೆಲುವಿನ ದಡ ಸೇರಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡುವ ಭಿತ್ತಿಪತ್ರಗಳನ್ನು ವಿತರಿಸಿದ ಅವರು ಮಾತನಾಡಿದರು.

ದೇಶದ ಜನತೆಯ ದಶಕಗಳ ಕನಸನ್ನು ನನಸು ಮಾಡುತ್ತಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ವಿಶ್ವವೆ ಬೆರಗುಗಣ್ಣಿನಿಂದ ನೋಡುತ್ತಿದ್ದು, ಭವಿಷ್ಯದಲ್ಲಿ ಭಾರತ ಶಾಶ್ವತವಾಗಿ ವಿಶ್ವ ಗುರು ಸ್ಥಾನ ಪಡೆಯಲಿದೆ ಎಂದರು.

ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌ ಮಾತನಾಡಿದರು.

ಟಿಎಪಿಸಿಎಂಎಸ್‌ ಮಾಜಿ ಅಧ್ಯಕ್ಷ ಎಚ್‌.ಡಿ. ಪ್ರಭಾಕರ್‌ ಜೈನ್‌, ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್‌ ಎಚ್‌.ಪಿ. ಗೋಪಾಲ…, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಪುರಸಭೆ ಸದಸ್ಯರಾದ ವೀಣಾ ವೃಷಭೇಂದ್ರ, ಉಮಾಶಂಕರ್‌, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾರ್ಕಂಡೇಯಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಧರ್ಮ, ಮುಖಂಡರಾದ ಸ್ವಪ್ನಾನಾಗೇಶ್‌, ಶಿವರಾಮು, ಎಚ್‌.ವಿ. ಅನಿಲ…, ಮಧು ಇದ್ದರು.

ಬಿಜೆಪಿಯಲ್ಲಿ ಭೀನ್ನಮತ ಸ್ಫೋಟ

ಕಲಬುರಗಿ (ಜ.27) : ಕಲಬುರಗಿ ಉತ್ತರದಲ್ಲಿ ಎಂಎಲ್‌ಸಿ ಬಿಜಿ ಪಾಟೀಲರ ಪುತ್ರ, ಕ್ರೆಡಲ್‌ ಅಧ್ಯಕ್ಷ ಚಂದು ಪಾಟೀಲ್‌ ಮುಂಬರೋ ಅಸೆಂಬ್ಲಿ ಕದನದಲ್ಲಿ ಬಿಜೆಪಿ ಅಭ್ಯರ್ಥಿ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿಕೆ ಜಿಲ್ಲೆಯ ಬಿಜೆಪಿಯಲ್ಲಿ ಭಾರಿ ಭಿನ್ನಮತಕ್ಕೆ ಕಾರಣವಾಗಿದೆ.

ನಿರಾಣಿ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷ.. ನಮ್ಮಲ್ಲಿ ಕೋರ ಕಮಿಟಿಯಲ್ಲಿ ಟಿಕೆಟ್‌ ನಿರ್ಣಯ ಮಾಡಲಾಗುತ್ತದೆ. ಅದಕ್ಕೂ ಮುನ್ನವೇ ಇಲ್ಲಿ ಅಭ್ಯರ್ಥಿ ಘೋಷಣೆ ಮಾಡುವ ಅಧಿಕಾರ ನಿರಾಣಿಗೆ ನೀಡಿದವರು ಯಾರು? ಎಂದು ಮಾಲೀಕಯ್ಯಾ ಗುಡುಗಿದ್ದಾರೆ.

ಗಣರಾಜ್ಯೋತ್ಸವ ಸಮಾರಂಭ: ಸಚಿವ ಮುರುಗೇಶಿ ನಿರಾಣಿಯ ಹಳಸಲು ಭಾಷಣಕ್ಕೆ ಗೇಲಿ ಮಾಡಿದ ಜನರು!

ನಮ್ಮಲ್ಲಿ ಯಾರ ಟಿಕೆಟ್‌ ಸಹ ಇನ್ನೂ ನಿರ್ಣಯವಾಗಿಲ್ಲ, ಸ್ವತಃ ನಿರಾಣಿ ಅವರಿಗೇ ಟಿಕೆಟ್‌ ಸಿಗುತ್ತೋ ಇಲ್ಲವೋ ಎನ್ನುವುದು ಕನ್‌ಫಮ್‌ರ್‍ ಇಲ್ಲ, ಕುಟುಂಬ ರಾಜಕಾರಣಕ್ಕೆ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ. ಹೀಗಿರುವಾಗ ನಿರಾಣಿ ಅಭ್ಯರ್ಥಿ ಘೋಷಣೆ ಮಾಡಿದ್ದು ನಾನು ಖಂಡಿಸುತ್ತೇನೆ. ಇದರಿಂದ ಪಕ್ಷದಲ್ಲಿ ಗೊಂದಲ ಉಂಟಾಗುತ್ತದೆ. ಈ ವಿಚಾರ ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪಿಸುವೆ ಎಂದೂ ಮಾಲೀಕಯ್ಯಾ ಹೇಳಿದ್ದಾರೆ.

ಈ ಬೆಳವಣಿಗೆಯಿಂದಾಗಿ ಸಚಿವ ಮುರುಗೇಶ ನಿರಾಣಿ ವಿರುದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಆಕ್ರೋಶ ಬಹಿರಂಗವಾಗಿದೆ. ಇದರೊಂದಿಗೆ ಸ್ಥಳೀಯವಾಗಿಯೂ ಬಿಜೆಪಿಯಲ್ಲಿ ಭಾರಿ ಇರಿರಸು ಮುರುಇಸಿನ ವಾತಾವರಣ ಉಂಟಾಗಿದೆ.

ಟಿಕೆಟ್‌ ಘೋಷಣೆ ಹಕ್ಕು ನನಗಿಲ್ಲ:

ಕಲಬುರಗಿ ಉತ್ತರ ಕ್ಷೇತ್ರದಲ್ಲಿ ಚಂದು ಪಾಟೀಲ್‌ ಬಿಜೆಪಿ ಅಭ್ಯರ್ಥಿ ಎಂದು ಸಚಿವ ನಿರಾಣಿ ಘೋಷಣೆ ವಿಚಾರ ಸದ್ಯ ಕಲಬುರಗಿ ಬಿಜೆಪಿಯಲ್ಲಿ ಭಿನ್ನಮತದ ಸ್ಫೋಟಿಸುವಂತೆ ಮಾಡಿದೆ. ನಿರಾಣಿಗೆ ಅಧಿಕಾರ ಕೊಟ್ಟವರಾರು ? ನಿರಾಣಿಗೆ ತನ್ನ ಟಿಕೆಟೇ ಕನ್ಪಮ್‌ರ್‍ ಇಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ತಿರುಗೇಟು ನೀಡಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ನಿರಾಣಿ ಟಿಕೆಟ್‌ ಘೋಷಣೆಯ ರೈಟ್ಸ್‌ ನನಗೆ ಇಲ್ಲ ಎಂಬುದನ್ನು ಒಪ್ಪಿಕೊಂಡಿದ್ದಾರೆ.

PREV
Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!