'ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ'

Kannadaprabha News   | Asianet News
Published : Sep 09, 2021, 08:03 AM ISTUpdated : Sep 09, 2021, 08:36 AM IST
'ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನ'

ಸಾರಾಂಶ

ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ

 ಬಂಟ್ವಾಳ (ಸೆ.09):  ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಪಡೆಯುವ ಮೂಲಕ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಬೊಮ್ಮಾಯಿ ನೇತೃತ್ವದ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕಲಬುರಗಿ ಪಾಲಿಕೆಯಲ್ಲಿ ದೋಸ್ತಿಗೆ ಜೆಡಿಎಸ್‌ ರೆಡಿ ಎಂದ ಎಚ್‌ಡಿಕೆ, ಯಾರ ಜೊತೆ?

ಇಡೀ ರಾಜ್ಯದಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಗೆ ಒತ್ತು ನೀಡಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಜನಪ್ರತಿನಿಧಿ ಹಾಗೂ ಕಾರ್ಯಕರ್ತರ ನಡುವೆ ಅಂತರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬೂತ್‌ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕ ಅನಾವರಣ ಮಾಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕರ್ತರ ಅಪೇಕ್ಷೆಗಳಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶ ಹೊಂದಿದೆ. ಬಿಜೆಪಿ ಕಾರ್ಯಕರ್ತರ ಆಧಾರಿತ ಪಾರ್ಟಿಯಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಗೆದ್ದಿದೆ ಎಂದರು.

ಬಿಜೆಪಿಯಲ್ಲಿ ಕಾರ್ಯಕರ್ತರು ಪರಿಶ್ರಮದ ಆಧಾರದ ಮೇಲೆ ನಾಯಕನಾದರೆ ಉಳಿದ ರಾಜಕೀಯ ಪಕ್ಷಗಳಲ್ಲಿ ಜಾತಿ, ಹಣದ, ಒತ್ತಡ, ಪ್ರಭಾವದ ಮೇಲೆ ನಾಯಕನಾಗುತ್ತಾನೆ. ಹಾಗಾಗಿ ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನ ಎಂದರು.

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ