ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಒಮ್ಮೆ ಕುಮಾರಸ್ವಾಮಿಯವರ ಹೆಗಲ ಮೇಲೆ ಕೂತು ಅಧಿಕಾರಕ್ಕೆ ಬಂದರೆ ಇನ್ನೊಂದು ಸಲ ನಮ್ಮ ಹೆಗಲ ಮೇಲೆ ಕೂತುಕೊಳ್ಳುತ್ತಾರೆ. ಇವರ ಆಡಳಿತದಿಂದ ಜನ ಬೇಸತ್ತಿರುವುದರಿಂದ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ಬೆಳಗಾವಿ (ಆ.13) : ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಒಮ್ಮೆ ಕುಮಾರಸ್ವಾಮಿಯವರ ಹೆಗಲ ಮೇಲೆ ಕೂತು ಅಧಿಕಾರಕ್ಕೆ ಬಂದರೆ ಇನ್ನೊಂದು ಸಲ ನಮ್ಮ ಹೆಗಲ ಮೇಲೆ ಕೂತುಕೊಳ್ಳುತ್ತಾರೆ. ಇವರ ಆಡಳಿತದಿಂದ ಜನ ಬೇಸತ್ತಿರುವುದರಿಂದ ಬಿಜೆಪಿ ಮತ್ತೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಯನ್ನು ಈಡೇರಿಸುತ್ತಿದೆ. ಸರ್ಕಾರಕ್ಕೆ ಕೆಲಸ ಮಾಡಲು ಕಾಲಾವಕಾಶ ನೀಡಬೇಕು. ಅದನ್ನು ಬಿಟ್ಟು ಬಿಜೆಪಿ ಹಾಗೂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ನಿರಂತರ ಟೀಕೆ ಮಾಡುವುದರಲ್ಲಿ ಏನೂ ಅರ್ಥವಿಲ್ಲ ಎಂದು ಕಿಡಿಕಾರಿದರು.
undefined
ಮೈಸೂರು- ಕೊಡಗು ಲೋಕಸಭೆ ಸೀಟಿಗೆ ನಾನು ಆಕಾಂಕ್ಷಿ: ಎಚ್.ವಿಶ್ವನಾಥ್
ಬಿಜೆಪಿ ಮುಖಂಡ ಸಿ.ಟಿ.ರವಿ ಕಾಂಗ್ರೆಸ್ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಕಮಿಷನ್ ಆರೋಪ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಮಿಷನ್ ತೆಗೆದುಕೊಂಡವರು ಮನೆಗೆ ಹೋದರು. ಮನೆಗೆ ಹೋಗಿದ್ದು ಏಕೆ? ಏಕೆ ಗೆಲ್ಲಬಾರದು? ನಿಮ್ಮ ಪರ ಇರುವವರೇ ನೀವು ಏನು ಮತ್ತು ಎಷ್ಟುಭ್ರಷ್ಟಾಚಾರ ಮಾಡಿದ್ದೀರಿ ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ಬಿಜೆಪಿ ಸರ್ಕಾರ ಬೊಮ್ಮಾಯಿ ಒಂದೂವರೆ ಲಕ್ಷ ಕೋಟಿ ರೂಪಾಯಿ ಮೊತ್ತದ ಟೆಂಡರ್‌ಗಳಿಗೆ ಅನುಮೋದನೆ ನೀಡಿತ್ತು. ಈಗ ಆ ಮಸೂದೆಗಳನ್ನು ಯಾರು ಅನುಮೋದಿಸುತ್ತಾರೆ? ಒಬ್ಬರ ಮೇಲೊಬ್ಬರು ಕಳ್ಳರೆಂದು ಆರೋಪ ಮಾಡುವುದರಲ್ಲಿ ಅರ್ಥವೇನು? ಯಾರು ಕಳ್ಳ ಎಂಬುದನ್ನು ಜನರೇ ನಿರ್ಧರಿಸುತ್ತಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ(HD Kumaraswamy) ಪೆನ್‌ಡ್ರೈವ್ ಬಾಂಬ್ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಜಿಸಚಿವ ಎಚ್.ವಿಶ್ವನಾಥ, ರಾಜಕೀಯವಾಗಿ ಕುಮಾರಸ್ವಾಮಿ ಸ್ಥಾನವೇನು? ಅವರು ಎಲ್ಲಿ ಕುಳಿತಿದ್ದಾರೆ? ಅದರ ಬಗ್ಗೆ ಯೋಚಿಸಬೇಕು.
ದೇಶದಲ್ಲಿ ಪಕ್ಷ ರಾಜಕಾರಣ ಮುಗಿದು, ನಾಯಕ, ವ್ಯಕ್ತಿ ಕೇಂದ್ರಿತ ರಾಜಕಾರಣ ಆರಂಭವಾಗಿದೆ. ರಾಜಕೀಯ ಪಕ್ಷಗಳಲ್ಲಿ ಆಂತರಿಕ ಪ್ರಜಾಪ್ರಭುತ್ವ ಕೊನೆಗೊಂಡಿದೆ ಎಂದು ಇದೇ ವೇಳೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಿಂದ ಲೋಕಸಭೆಗೆ ಸ್ಪರ್ಧಿಸುತ್ತಾರಾ?ಎಂಬ ಪ್ರಶ್ನೆಗೆ ನಾನು ಕಾಂಗ್ರೆಸ್‌ನಿಂದ ಸಂಸದನಾಗಿದ್ದೇನೆ. 40 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ಅತಿ ಹೆಚ್ಚು ಕಾಲ ಕಾಂಗ್ರೆಸ್‌ನಲ್ಲಿದೆ. ಜೆಡಿಎಸ್ ಪಕ್ಷದ ಅಧ್ಯಕ್ಷನಾಗಿಯೂ ಕೆಲಸ ಮಾಡಿದ್ದೇನೆ. ನನ್ನ ಬಾವುಟ ಬದಲಾಗುತ್ತದೆ. ಆದರೆ, ಅಜೆಂಡಾ ಬದಲಾಗುವುದಿಲ್ಲ ಎಂದರು.
ರಮೇಶ ಇನ್ನಾದರೂ ಪಾಠ ಕಲಿಯಲಿ
ರಮೇಶ್ ಜಾರಕಿಹೊಳಿ ಅವರಿಗೆ ಏನು ಸಲಹೆ ನೀಡುತ್ತೀರಿ? ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಮೇಶ್ ನನ್ನ ಉತ್ತಮ ಸ್ನೇಹಿತ, ಮಾಜಿ ಮಂತ್ರಿ. ಕಾರಣಾಂತರಗಳಿಂದ ಅವರ ಸಚಿವ ಸ್ಥಾನ ಕೈತಪ್ಪಿತು. 17 ಮಂದಿಯನ್ನು ತೆಗೆದುಕೊಂಡು ಬಿಜೆಪಿಯನ್ನು ಅಧಿಕಾರಕ್ಕೆ ತಂದವರು ಅವರು. ಆಗ ಅವರಿಗೆ ಏನು ಸಿಕ್ಕಿತು? ಈಗ ಎಲ್ಲಿದ್ದಾರೆ ಎಂದು ಅವರು ಯೋಚಿಸಬೇಕು. ಅದರಿಂದ ಪಾಠ ಕಲಿಯಬೇಕು. ಬುದ್ಧಿವಂತಿಕೆ ಬಳಸಬೇಕು ಎಂದು ವಿಶ್ವನಾಥ ಸಲಹೆ ನೀಡಿದರು.
ಈ ಜನ್ಮದಲ್ಲಿ ಕುಮಾರಸ್ವಾಮಿ, ಬೊಮ್ಮಾಯಿ ಇಬ್ಬರೇ ಸತ್ಯ ಹರಿಶ್ಚಂದ್ರರು: ವಿಶ್ವನಾಥ್ ವ್ಯಂಗ್ಯ