ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ವಿಶ್ವಾಸ : ಕೋಟಾ

By Kannadaprabha News  |  First Published Nov 17, 2021, 11:00 AM IST
  • ಸ್ಥಳೀಯ ಸಂಸ್ಥೆಗಳಲ್ಲಿಯೂ ಸಾಕಷ್ಟು ಸಂಖ್ಯೆಯ ಪಕ್ಷದ ಹಾಗೂ ಪಕ್ಷದ ಬೆಂಬಲಿತ ಸದಸ್ಯರು
  • ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ನಿಚ್ಚಳವಾಗಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ
  • ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

ಬಂಟ್ವಾಳ (ನ.17):  ಅವಿಭಜಿತ  ದಕ್ಷಿಣ ಕನ್ನಡ (Dakshina  Kannada) ಜಿಲ್ಲೆಯ 13 ಕ್ಷೇತ್ರಗಳಲ್ಲಿ ಬಿಜೆಪಿ (BJP) 12 ವಿಧಾನ ಸಭಾ ಕ್ಷೇತ್ರಗಳಲ್ಲಿ (Assembly Constituency) ಶಾಸಕರನ್ನು ಹೊಂದಿದೆ. ಎರಡು ಸಂಸದರಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿಯೂ ಸಾಕಷ್ಟು ಸಂಖ್ಯೆಯ ಪಕ್ಷದ ಹಾಗೂ ಪಕ್ಷದ ಬೆಂಬಲಿತ ಸದಸ್ಯರು ಇರುವುದರಿಂದ ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಪಕ್ಷದ ಅಭ್ಯರ್ಥಿ ನಿಚ್ಚಳವಾಗಿ ಗೆಲುವು ಸಾಧಿಸುವಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota shrinivas poojary) ಭರವಸೆ ವ್ಯಕ್ತಪಡಿಸಿದ್ದಾರೆ.

ಇಲ್ಲಿಗೆ ಸಮೀಪದ ಹೆಮ್ಮಾಡಿಯಲ್ಲಿ ಮಂಗಳವಾರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಪಕ್ಷದ ಹಾಗೂ ಪಕ್ಷದ ಪ್ರಮುಖರು ತೆಗೆದುಕೊಳ್ಳುತ್ತಾರೆ ಎಂದರು.

Latest Videos

undefined

ಸ್ವಾಭಾವಿಕವಾಗಿ ಹಂಸಲೇಖ (Hamsalekha) ಒಬ್ಬ ಕಲಾವಿದರು. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಯಾರಾದರೂ ಸಾಧು-ಸಂತರು, ಅಸ್ಪ್ರಶ್ಯತೆ ನಿವಾರಣೆಗಾಗಿ, ಅಸ್ಪ್ರಶ್ಯತೆ ಇರುವ ಕೇರಿಗಳಲ್ಲಿ ಸಂಚಾರ ಮಾಡಿ, ಅವರಿಗೆ ಕೈ ಮುಟ್ಟಿಪ್ರಸಾದವನ್ನು ನೀಡಿ, ಹಿಂದೂ ಧರ್ಮ ಒಂದು ಎನ್ನುವ ಸಂದೇಶವನ್ನು ಜಗತ್ತಿಗೆ ಸಾರಿದವರು ಹಿರಿಯ ಪೇಜಾವರ ಶ್ರೀಗಳು. ಅವರ ಬಗ್ಗೆ ಹಂಸಲೇಖ ಲಘುವಾಗಿ ಮಾತನಾಡಿದ್ದು, ಅವರ ಭಕ್ತರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ನೋವಾಗಿದೆ. ಅವರು ಈ ಕುರಿತು ಕ್ಷಮೆ ಕೇಳಿರುವುದು ನನಗೆ ಗೊತ್ತಿಲ್ಲ, ಆದರೆ ಹಂಸಲೇಖ ಅವರು ಸ್ವಾಮೀಜಿಯವರ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ಸಚಿವ ಕೋಟ ಆಕ್ಷೇಪ ವ್ಯಕ್ತಪಡಿಸಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್‌ ಕುಮಾರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬು ಹೆಗ್ಡೆ ತಗ್ಗರ್ಸೆ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಸದಾನಂದ ಉಪ್ಪಿನಕುದ್ರು, ಕರಣ್‌ ಪೂಜಾರಿ ತಲ್ಲೂರ್‌ ಇದ್ದರು.

ಲಿಸ್ಟ್ ಫೈನಲ್ :    ಪರಿಷತ್ ಚುನಾವಣೆಗೆ (MLC Election) ರಾಜ್ಯದ 25 ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪೈನಲ್ ಆಗಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ (KS Eshwaeappa) ಹೇಳಿದ್ದರು. ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆಯ (Karnataka Legislative Council) ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.  

 ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದು,  ಅಭ್ಯರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ.  ಅಭ್ಯರ್ಥಿಗಳ ಆಯ್ಕೆ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ನಡೆದಿರುವ ಚರ್ಚೆಯ ಬಗ್ಗೆಯೂ ನಡ್ಡಾ ಅವರಿಗೆ ಬೊಮ್ಮಾಯಿ ವಿವರಿಸಿದ್ದರು. 

25 ಸ್ಥಾನಗಳಲ್ಲಿ 15 ಸ್ಥಾನ ಗೆಲ್ಲುವ ವಿಶ್ವಾಸ
ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿರುವ ಮೇಲ್ಮನೆ ಚುನಾವಣೆಯ 25 ಸ್ಥಾನಗಳಲ್ಲಿ ಬಿಜೆಪಿಯು 15 ಸ್ಥಾನ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ವಿಶ್ವಾಸ ವ್ಯಕ್ತಪಡಿಸಿದರು.

  ನ. 20 ರಂದು ಬಿಎಸ್ ವೈ ನೇತೃತ್ವದಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಸಮಾವೇಶ ನಡೆಯಲಿದೆ. ಗ್ರಾ.ಪಂ‌. ಸದಸ್ಯರಿಂದ ಸಂಸದರವರೆಗೂ ಮತದಾನ ಅರ್ಹತೆ ಇರುವ ಬಹುತೇಕ ಸದಸ್ಯರು ಬಿಜೆಪಿ ಪಕ್ಷದವರೇ ಇದ್ದು, ಇತರರೂ ಬೆಂಬಲ ನೀಡಲಿದ್ದಾರೆ. ಹೀಗಾಗಿ ಗೆಲುವು ಸುಲಭವಾಗಲಿದೆ ಎಂದರು.

ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯಲ್ಲಿ ದ್ವಿಸದಸ್ಯತ್ವ ಕ್ಷೇತ್ರಗಳಿದ್ದು, ಒಂದು ಸ್ಥಾನಕ್ಕೆ ಮಾತ್ರ ಅಭ್ಯರ್ಥಿ ಹಾಕುವ ಬಗ್ಗೆ ಚರ್ಚೆ ನಡೆದಿದೆ. ಈ ಬಗ್ಗೆ ಇಂದು ಅಥವಾ ನಾಳೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು

click me!