ಹಳೆ ಮೈಸೂರಲ್ಲಿ ಬಿಜೆಪಿ ಬೆಂಬಲಿತರಿಗೆ ಭರ್ಜರಿ ಗೆಲುವು

By Kannadaprabha NewsFirst Published Dec 7, 2020, 8:49 AM IST
Highlights

ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದೆ. ಚುನಾವಣೆ ಅಬ್ಬರವೂ ಜೋರಾಗಿದ್ದು ಇದೇ ವೇಳೆ ಹಳೆ ಮೈಸೂರು ಭಾಗದಲ್ಲಿ ಜಯಭೇರಿ ಬಗ್ಗೆ ಭವಿಷ್ಯ ನುಡಿಯಲಾಗಿದೆ

ಬೆಂಗಳೂರು (ಡಿ.07):  ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಕಾವೇರಿ ಕೊಳ್ಳದ ಪ್ರಾಂತ್ಯ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಮೈಸೂರು ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ಭಾನುವಾರ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌ ಅವರನ್ನು ಭೇಟಿ ಮಾಡಿದ ಅವರು ಗ್ರಾಮ ಸ್ವರಾಜ್ಯ ಸಮಾವೇಶದ ಕುರಿತು ಮಾಹಿತಿ ನೀಡಿದರು.

ಬಿಗ್ ಟ್ವಿಸ್ಟ್; ಒಂದಿಷ್ಟು ಶಾಸಕರಿಗೆ ದೆಹಲಿಗೆ ಬರಲು ತಿಳಿಸಿದ ಅರುಣ್ ಸಿಂಗ್! ..

ಈ ಸಮಾವೇಶಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರಲಿದ್ದಾರೆ. ನ.28ರಿಂದ ಡಿ.2ರವರೆಗೆ ಮೈಸೂರು ಭಾಗದ ಐದು ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕಾಗಿ ಪ್ರವಾಸ ಮಾಡಿದ್ದೇವೆ. 

9 ಸಮಾವೇಶಗಳನ್ನು ನಡೆಸಿದ್ದು 40 ಮಂಡಲಗಳು ಭಾಗಿಯಾಗಿವೆ. 3946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಪಾಲ್ಗೊಂಡಿದ್ದರು. ಹೀಗೆ ಸುಮಾರು 1210 ಕಿ.ಮೀ ದೂರವನ್ನು ಕ್ರಮಿಸಿ ಗ್ರಾಮಸ್ವರಾಜ್‌ ಯಶಸ್ವಿ ಕಾರ್ಯಕ್ರಮ ಮಾಡಿದ್ದೇವೆ ಎಂದು ಹೇಳಿದರು.

click me!