ಡಿಸಿಎಂ ಇದ್ದ ವೇದಿಕೆಯಲ್ಲೇ ಕುಸಿದು ಬಿದ್ದು ಬಿಜೆಪಿ ಮುಖಂಡ ಸಾವು

Kannadaprabha News   | Asianet News
Published : Dec 11, 2020, 07:30 AM ISTUpdated : Dec 11, 2020, 07:53 AM IST
ಡಿಸಿಎಂ ಇದ್ದ ವೇದಿಕೆಯಲ್ಲೇ ಕುಸಿದು ಬಿದ್ದು ಬಿಜೆಪಿ ಮುಖಂಡ ಸಾವು

ಸಾರಾಂಶ

ಬಿಜೆಪಿ  ಮುಖಂಡರೋರ್ವರು ಡಿಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 

ಮಾಗಡಿ (ಡಿ.11): ಬಿಜೆಪಿ ಕಾರ್ಯಕರ್ತರೊಬ್ಬರು ವೇದಿಕೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.

ಶಿವರಾಜು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾ​ಯಣ ಪಾಲ್ಗೊಂಡಿ​ದ್ದರು. 

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು ..

ಕಾರ್ಯಕ್ರಮ ಮುಗಿಸಿ, ಅಶ್ವ​ತ್ಥ​ನಾ​ರಾ​ಯಣ ತೆರಳಿದ ನಂತರ ಸುಮಾರು 10.30ರ ಸಮಯದಲ್ಲಿ ವೇದಿಕೆಯ ಮೇಲಿದ್ದ ಬಿಜೆಪಿ ಕಾರ್ಯ​ಕರ್ತ ಶಿವರಾಜು (48) ಕುಸಿದು ಬಿದ್ದಿದ್ದಾರೆ.

 ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಕೊನೆ​ಯು​ಸಿ​ರೆ​ಳೆ​ದಿ​ದ್ದಾ​ರೆ. ಮೃತ ಶಿವರಾಜು ತಿಪ್ಪಸಂದ್ರ ಹೋಬಳಿಯ ಹೆಬ್ಬಳಲು ಗ್ರಾಮದವರಾಗಿದ್ದು, ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು, ಇವರಿಗೆ ಕಳೆದ ವರ್ಷ ಹೃದಯ ಶಸ್ತ್ರಚಿಕಿತ್ಸೆಯಾಗಿತ್ತು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

PREV
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ