PM Modi Security Breach ಪ್ರಧಾನಿ ಮೋದಿಗಾಗಿ ಹುಬ್ಬಳ್ಳಿಯಲ್ಲಿ ಮೃತ್ಯುಂಜಯ ಹೋಮ

By Suvarna News  |  First Published Jan 7, 2022, 4:34 PM IST

ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣ
ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸ
ಹಲವೆಡೆ ಮೋದಿ ಅವರಿಗೆ ದೀರ್ಘಾಯುಷ್ಯ ಕೋರಿ ಬಿಜೆಪಿಯಿಂದ ಹೋಮ-ಹವನ


ಹುಬ್ಬಳ್ಳಿ, (ಜ.07): ಪಂಜಾಬ್ ಭದ್ರತಾ ಲೋಪ (Security Breach) ಘಟನೆ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ (narendra Modi) ಅವರಿಗೆ ದೀರ್ಘಾಯುಷ್ಯ ಕೋರಿ ಬಿಜೆಪಿ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ(Hubballi-Dharwad) ಕೇಂದ್ರ ಮಹಿಳಾ ಮೋರ್ಚಾ ಕಾರ್ಯಕರ್ತರು(BJP Workers) ಜಯನಗರದ ಈಶ್ವರ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಹೋಮ ಮಾಡಿಸಿದರು.

Tap to resize

Latest Videos

ಹೋಮ-ಹವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಸದಸ್ಯರು ಭಾಗಿಯಾಗಿದ್ದು, ಪ್ರಧಾನಿ ಮೋದಿ ಅವರಿಗೆ ಯಾವುದೇ ತೊಂದರೆಗಳು ಆಗದಿರಲಿ ಎಂದು ಸಾಮೂಹಿಕ ಜಪ ಮಾಡಿ ಮೋದಿ ದೀರ್ಘಾಯುಷಿಯಾಗಿ ಬಾಳಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

PM Modi Security Breach: ಎಲ್ಲಾ ದಾಖಲೆ ಸುರಕ್ಷಿತವಾಗಿಡಲು ಸುಪ್ರಿಂ ಆದೇಶ!

ನರೇಂದ್ರ ಮೋದಿಯವರ ವಾಹನ ಮೇಲ್ಸೇತುವೆ ಮೇಲೆ ಇಪ್ಪತ್ತು‌ ನಿಮಿಷ ಬಾಕಿಯಾಗುತ್ತಿದ್ದಂತೆಯೇ ಪ್ರಧಾನಿ ಮೋದಿಗೆ ಜೀವಕ್ಕೆ ಕಟಂಕದ ಬಗ್ಗೆ ಬಿಜೆಪಿ ಕಾರ್ಯಕರ್ತರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನಲೆಯಲ್ಲಿ ಮೋದಿಯವರ ಜೀವಕ್ಕೆ ಹಾನಿಯಾಗದಂತೆ ಕರ್ನಾಟದಲ್ಲೂ ಸಹ ವಿವಿದೆಡೆ ಹೋಮ-ಹವನ ಮಾಡಲಾಗಿದೆ.

ಪಂಜಾಬ್‌ನ ಮೇಲ್ಸೇತುವೆ ಮೇಲೆ ಪ್ರಧಾನಿ ನರೇಂದ್ರ ಮೋದಿಯವರ ಕಾರನ್ನು ಇಪ್ಪತ್ತು‌ ನಿಮಿಷ ತಡೆ ಹಿಡಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪ್ರಧಾನಿಯವರನ್ನು ಈ ರೀತಿ ಅಡ್ಡಗಟ್ಟಿಸಿರುವುದು ಭದ್ರತಾ ವೈಫಲ್ಯ ಅಂತಾ ಆಡಳಿತ ಪಕ್ಷ ಟೀಕಿಸಿದರೆ, ಕಾಂಗ್ರೆಸ್ ಮಾತ್ರ ಇದು ಚುನಾವಣಾ ಗಿಮಿಕ್, ಮೋದಿ, ಮೆರವಣಿಗೆಯಲ್ಲಿ ಜನ ಸೇರಲಿಲ್ಲ ಎಂಬ ಕಾರಣಕ್ಕಾಗಿ ಮೋದಿ ಈ ಹೈಡ್ರಾಮ ಮಾಡಿದ್ದಾರೆ ಅಂತಾ ಕಾಂಗ್ರೆಸ್ ಟೀಕಿಸಿದೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಯ ಜೀವಕ್ಕೆ ಕಟಂಕವಾಗುವ ರೀತಿ ಪಂಜಾಬ್ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ ಎಂದು ಟೀಕೆಗಳು ವ್ಯಕ್ತವಾಗಿವೆ.

ಮೋದಿ ಭದ್ರತಾ ಲೋಪ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ
 ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್​ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನ ಕಾಯ್ದಿರಿಸಿದೆ.

ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ​ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ. ಸದ್ಯಕ್ಕೆ ಯಾವುದೇ ಕ್ರಮ ಬೇಡ ​ರಿಜಿಸ್ಟರ್ ಜನರಲ್​ ಆಫ್​ ಪಂಜಾಬ್​ ಮತ್ತು ಹರಿಯಾಣ ಹೈಕೋರ್ಟ್​ ನೇಮಕ ಮಾಡಿ ಆದೇಶ ಹೊರಡಿಸಿದೆ.

ಇವರಿಗೆ ಮಾಹಿತಿ ನೀಡಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ ಮಾಡಿದೆ. ಚಂಡೀಗಢ ಪೊಲೀಸ್ ಡಿಜಿ, ಎನ್​​ಐಎ ಅಧಿಕಾರಿಗಳ ನೇಮಕ ಮಾಡಿದೆ. ಮಾತ್ರವಲ್ಲ ಸದ್ಯಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಪಂಜಾಬ್ ಸರ್ಕಾರ, ಕೇಂದ್ರ ಇಲಾಖೆಗಳಿಗೆ ಸುಪ್ರೀಂ ಸೂಚನೆ ನೀಡಿದೆ. ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಮುಂದಿನ ಆದೇಶ ನೀಡೋದಾಗಿ ಕೋರ್ಟ್​ ಹೇಳಿದೆ.

ಟ್ರಾವೆಲ್ ಮಾಹಿತಿ ದಾಖಲಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಟ್ರಾವೆಲ್​​ನ ಎಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಸುರಕ್ಷಿತವಾಗಿಡಿ. ಅದಕ್ಕೆ ಬೇಕಾಗುವ ಸಹಕಾರ ಹಾಗೂ ಹೆಚ್ಚಿನ ಮಾಹಿತಿಗಳನ್ನ ಪಂಜಾಬ್ ಪೊಲೀಸರು ಮತ್ತು ಎಸ್​ಪಿಜಿ ಘಟಕಗಳಿಂದ ಪಡೆದುಕೊಳ್ಳಿ ಎಂದು ಸುಪ್ರೀಂಕೋರ್ಟ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್​ ರಿಜಿಸ್ಟ್ರಾರ್ ಜನರಲ್​ಗೆ ತಿಳಿಸಿದೆ.
 

click me!