ಕೊರಟಗೆರೆಯಲ್ಲಿ ಬಿಜೆಪಿ ಗೆಲುವು ಖಚಿತ: ರವಿಶಂಕರ್‌

By Kannadaprabha News  |  First Published Apr 10, 2023, 6:22 AM IST

ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಚ್‌.ಅನಿಲ್‌ಕುಮಾರ್‌ ತಳಮಟ್ಟದಿಂದ ಕೊರಟಗೆರೆ ಕ್ಷೇತ್ರದಲ್ಲಿ ಸಂಘಟನೆ ಮಾಡುತ್ತಿದ್ದಾರೆ. 2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ತಾರೆ. ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಆಗುವುದು ಖಚಿತ ಎಂದು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್‌ ವಿಶ್ವಾಸ ವ್ಯಕ್ತಪಡಿಸಿದರು.


 ಕೊರಟಗೆರೆ :  ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಚ್‌.ಅನಿಲ್‌ಕುಮಾರ್‌ ತಳಮಟ್ಟದಿಂದ ಕೊರಟಗೆರೆ ಕ್ಷೇತ್ರದಲ್ಲಿ ಸಂಘಟನೆ ಮಾಡುತ್ತಿದ್ದಾರೆ. 2023ಕ್ಕೆ ಕೊರಟಗೆರೆ ಕ್ಷೇತ್ರದಲ್ಲಿ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ ಗೆದ್ದೇ ಗೆಲ್ತಾರೆ. ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಆಗುವುದು ಖಚಿತ ಎಂದು ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್‌ ವಿಶ್ವಾಸ ವ್ಯಕ್ತಪಡಿಸಿದರು.

ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ವೀರಶೈವ ಸಮುದಾಯದ ವತಿಯಿಂದ ಭಾನುವಾರ ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿಯ ಯೋಜನೆಗಳೇ ಶ್ರೀರಕ್ಷೆ ಆಗಲಿವೆ. ವೀರಶೈವ ಲಿಂಗಾಯಿತ ಸಮಾಜಕ್ಕೆ ಬಸವರಾಜು ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಮೀಸಲು ಹೆಚ್ಚಳ ಮಾಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯ ಬಿಜೆಪಿ ಪಕ್ಷದ ಪರವಾಗಿದೆ ಎಂಬುದನ್ನು ನಾವೆಲ್ಲರೂ ಒಟ್ಟಾಗಿ ಕರ್ನಾಟಕ ರಾಜ್ಯಕ್ಕೆ ತೋರಿಸಬೇಕಿದೆ ಎಂದು ತಿಳಿಸಿದರು.

ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯದರ್ಶಿ ವಿನಯ್‌ ಬಿದರೆ ಮಾತನಾಡಿ, ಜಗತ್ತಿನಲ್ಲಿ ಸೇವೆ ಮಾಡುವ ಪುಣ್ಯಭೂಮಿ ಸಿದ್ಧಗಂಗಾ ಕ್ಷೇತ್ರ. ನಾವೆಲ್ಲರೂ ಕೇವಲ ಪಕ್ಷದ ಪರವಾಗಿ ಪ್ರಚಾರ ಮಾಡುವುದೇ ಅಲ್ಲ. ಬದಲಾಗಿ ದೇಶದ ಸಂಸ್ಕೃತಿ ಮತ್ತು ಧರ್ಮದ ರಕ್ಷಣೆಯೇ ನಮ್ಮ ಪ್ರಮುಖ ಗುರಿ ಆಗಬೇಕಿದೆ ಎಂದರು.

ಕೊರಟಗೆರೆ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಬಿ.ಎಚ್‌.ಅನಿಲ್‌ಕುಮಾರ್‌ ಮಾತನಾಡಿ, 75 ವರ್ಷದಿಂದ ಯಾವ ಪಕ್ಷವು ಮಾಡದಿರುವ ಮೀಸಲಾತಿ ಹೆಚ್ಚಳದ ಕೆಲಸವನ್ನು ಬೊಮ್ಮಾಯಿ ಸರ್ಕಾರ ಮಾಡಿದೆ. ಕೇಂದ್ರ ಮತ್ತು ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರದ ಜೊತೆ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದರೇ ಮಾತ್ರ ಅಭಿವೃದ್ಧಿ ತಾನಾಗಿಯೇ ಆಗಲಿದೆ. ಕೊರಟಗೆರೆ ಕ್ಷೇತ್ರ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ರಾಜ್ಯ ಯುವಮೋರ್ಚ ಕಾರ್ಯಕಾರಣಿ ಸದಸ್ಯ ರುದ್ರೇಶ್‌, ಜಿಲ್ಲಾಮೋರ್ಚ ರೈತಮೋರ್ಚ ಅಧ್ಯಕ್ಷ ವಿಶ್ವನಾಥ ಅಪ್ಪಾಜಪ್ಪ, ಕೊರಟಗೆರೆ ಮಂಡಲ ಅಧ್ಯಕ್ಷ ಪವನಕುಮಾರ್‌, ಪಪಂ ಸದಸ್ಯ ಪ್ರದೀಪಕುಮಾರ್‌, ಗ್ರಾಪಂ ಉಪಾಧ್ಯಕ್ಷ ಉಮೇಶ್‌ಚಂದ್ರ, ಮುಖಂಡರಾದ ಎನ್‌.ಮಹೇಶ್‌, ರವಿಕುಮಾರ್‌, ಶಿವರುದ್ರಯ್ಯ, ಮುಕ್ಕಣ್ಣಯ್ಯ, ಯಶಸ್‌, ಚಂದ್ರಪ್ಪ, ನಟರಾಜು, ದಯಾನಂದ, ನಂಜಾರಾಧ್ಯ, ಬಸವರಾಜು, ಶಿವಕುಮಾರ್‌ ಸೇರಿದಂತೆ ಇತರರು ಇದ್ದರು.

ಕೊರಟಗೆರೆ ಅಭಿವೃದ್ಧಿಗೆ ಅನುದಾನ ನೀಡಿದ್ದು, ಬಿಜೆಪಿ ನೇತೃತ್ವದ ಬೊಮ್ಮಾಯಿ ಸರ್ಕಾರ. ಶಾಸಕ ಡಾ.ಜಿ.ಪರಮೇಶ್ವರ್‌ ಏನು ಅವರ ಮನೆಯಿಂದ ತಂದು ಕೊಟ್ಟಿಲ್ಲ. ಅಭಿವೃದ್ಧಿಯೇ ಮಾಡದೇ ಕೇವಲ ಪ್ರಚಾರ ಪಡೆಯುವ ಶಾಸಕ ಪರಮೇಶ್ವರ್‌ರನ್ನು ಸೋಲಿಸಬೇಕಿದೆ. ಗ್ರಾಮೀಣ ಭಾಗದ ಬಡಮಕ್ಕಳ ಶಿಕ್ಷಣಕ್ಕೆ ಬಸ್ಸಿನ ವ್ಯವಸ್ಥೆ ಮತ್ತು ಸಮರ್ಪಕ ರಸ್ತೆಯು ಇಲ್ಲ. ಕೊರಟಗೆರೆ ಕ್ಷೇತ್ರದ ಜನತೆ ಪ್ರತಿನಿತ್ಯ ಮೂಲಸೌಲಭ್ಯಕ್ಕೆ ಪರದಾಡುವ ಪರಿಸ್ಥಿತಿ ಇದೆ.

ಬಿ.ಎಚ್‌.ಅನಿಲ್‌ಕುಮಾರ್‌ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ, ಕೊರಟಗೆರೆ 

click me!