ಹುಬ್ಬಳ್ಳಿಯಲ್ಲಿ ಬ್ಲ್ಯಾಕ್‌ ಫಂಗಸ್‌ಗೆ ಮೊದಲ ಬಲಿ

By Kannadaprabha News  |  First Published May 23, 2021, 7:22 AM IST

* ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್‌ ಫಂಗಸ್‌ ಸೋಂಕಿತ ವ್ಯಕ್ತಿ
* ಚಿಕಿತ್ಸೆ ಫಲಿಕಾರಿಯಾಗದೆ ಸಾವು
* ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ 78 ಬ್ಲ್ಯಾಕ್‌ ಫಂಗಸ್‌ ಸೋಂಕಿತರು 
 


ಹುಬ್ಬಳ್ಳಿ(ಮೇ.23): ಇಲ್ಲಿನ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್‌ ಫಂಗಸ್‌ ಸೋಂಕಿನ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದು, ಈ ಸಾಂಕ್ರಾಮಿಕಕ್ಕೆ ಕಿಮ್ಸ್‌ನಲ್ಲಿ ಮೊದಲ ಸಾವು ಸಂಭವಿಸಿದಂತಾಗಿದೆ.

ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಗೆ ಕಳೆದ ಕೆಲವು ದಿನಗಳ ಹಿಂದೆ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿತ್ತು. ಕಿಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ ಎಂದು ಕಿಮ್ಸ್‌ ಮೂಲಗಳು ತಿಳಿಸಿವೆ.

Latest Videos

undefined

ಬ್ಲ್ಯಾಕ್‌ ಫಂಗಸ್‌ ಸೋಂಕಿತರಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ: ಸಚಿವ ಸುಧಾಕರ್‌

ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಕಿಮ್ಸ್‌ನಲ್ಲಿ ಒಟ್ಟು 78 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಒಬ್ಬ ಮೃತಪಟ್ಟಿದ್ದಾನೆ ಎಂದು ಕಿಮ್ಸ್‌ ವೈದ್ಯರು ತಿಳಿಸಿದ್ದಾರೆ. ವಿವಿಧ ಜಿಲ್ಲೆಗಳ 78 ಜನರಿಗೆ ಚಿಕಿತ್ಸೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
 

click me!