* ಹಿಂದಿ ದಿವಸ ಆಚರಣೆಗೆ ವಿರೋಧ
* ಹಿಂದಿ ದಿವಸ ಆಚರಣೆಯ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್
* ಬ್ಯಾನರ್ ಕಂಡು ಆಕ್ರೋಶ ವ್ಯಕ್ತಪಡಿಸಿದ ಪರಮೇಶ್ವರ ಕಾಳೆ
ಧಾರವಾಡ(ಸೆ.15): ಹಿಂದಿ ದಿವಸ್ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ದ ಅಧ್ಯಕ್ಷ ಪರಮೇಶ್ವರ ಕಾಳೆ ಎಂಬುವರು ಹಿಂದಿ ದಿವಸ ಆಚರಣೆಯ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್‌ನಲ್ಲಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇತರರ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಮಂಗಳವಾರ ನಡೆದಿದೆ.
ಹಿಂದಿ ದಿವಸ್ ನಿಮಿತ್ತ ಜಿಲ್ಲಾಧಿಕಾರಿ ಕಚೇರಿ ಬಳಿಯ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ಕಾರ್ಯಕ್ರಮದ ಶುಭಾಶಯ ಕೋರಿ ಬ್ಯಾನರ್ ಅಳವಡಿಸಲಾಗಿತ್ತು.
ಹಿಂದಿ ಹೇರಿಕೆ ವಿರುದ್ಧ ಗುಡುಗಿದ ಎಚ್‌ಡಿಕೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ
ಈ ಆಚರಣೆ ವಿರೋಧಿಸಿ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳುತ್ತಿದ್ದ ಪ್ರತಿಭಟನಕಾರರು ಬ್ಯಾನರ್ ಕಂಡು ಆಕ್ರೋಶ ವ್ಯಕ್ತಪಡಿಸಿದ ಪರಮೇಶ್ವರ ಕಾಳೆ, ಬ್ಯಾನರ್‌ನಲ್ಲಿ ಅಳವಡಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಹಿಂದಿ ಪ್ರಚಾರ ಸಭಾ ರಾಷ್ಟ್ರೀಯ ಅಧ್ಯಕ್ಷ ವಿ. ಮುರಳೀಧರನ್ ಭಾವಚಿತ್ರಕ್ಕೆ ಕಪ್ಪು ಮಸಿ ಎರಚಿ ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿದರು. ಪರಮೇಶ್ವರ ಕಾಳೆ ಕಾಂಗ್ರೆಸ್ ಮುಖಂಡರು ಹೌದು.