Bengaluru: ಇಂದಿನಿಂದ ಪೀಣ್ಯ ಇಂಡ್ರಸ್ಟಿ ಮತ್ತು ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ

Published : Aug 20, 2024, 09:35 AM IST
Bengaluru: ಇಂದಿನಿಂದ ಪೀಣ್ಯ ಇಂಡ್ರಸ್ಟಿ ಮತ್ತು ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಸಾರಾಂಶ

Bengaluru Metro Update ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಹಲವು ದಿನಗಳ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.  

ಬೆಂಗಳೂರು (ಆ.20): ಉದ್ಯಾನಗರಿಯ ಜನರಿಗೆ ಇಂದಿನಿಂದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಪೀಣ್ಯ ಇಂಡ್ರಸ್ಟಿ ಮತ್ತು ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ. ಆಗಸ್ಟ್‌ 20, 23 ಮತ್ತು 30 ರಂದು ಸಂಚಾರ ಸ್ಥಗಿತವಾಗಲಿದೆ. ಹಸಿರು ಮಾರ್ಗದಲ್ಲಿ ಸಿಗ್ನಲಿಂಗ್ ಪರೀಕ್ಷೆ ನಡೆಯಲಿರುವ ಕಾರಣ ಈ ವ್ಯತ್ಯಯವಾಗಲಿದ.ೆ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಹಿನ್ನಲೆ ಪೀಣ್ಯ ಹಾಗೂ ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಇಂದಿನಿಂದ ಕೆಲವೆಡೆ ಹಸಿರು ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ‌ ವ್ಯತ್ಯಯವಾಗಲಿದೆ. ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆ ಸಿಗೋದಿಲ್ಲ ಎಂದು ಬಿಎಂಆರ್‌ಸಿಎಲ್‌ ಹೇಳಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದಾವರ ನಡುವೆ ಸಿಗ್ನಲಿಂಗ್ ಸಂಬಂಧಿತ  ಪರೀಕ್ಷೆ ನಡೆಯುತ್ತಿದ್ದು, ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆ‌ ಆಗಲಿದೆ.

ಆಗಸ್ಟ್‌ ಮಾತ್ರವಲ್ಲದೆ, ಸೆಪ್ಟೆಂಬರ್‌ನ 6 ಮತ್ತು 11 ರಂದು ಪೂರ್ಣ ದಿನ ಸೇವೆ ಸ್ಥಗಿತವಾಗಲಿದೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಈ ವ್ಯತ್ಯಯ ಇರಲಿದೆ. ಆಗಸ್ಟ್ 24ರಂದು  ಕೊನೆಯ ರೈಲು ಸೇವೆಯು ರಾತ್ರಿ 11.05 ಕ್ಕೆ ಬದಲಾಗಿ 10.00ಕ್ಕೆ ಕೊನೆಗೊಳ್ಳಲಿದೆ. ಆಗಸ್ಟ್ 25ರಂದು  ಬೆಳಿಗ್ಗೆ 5.00 ಕ್ಕೆ ಬದಲಾಗಿ 07.00ಕ್ಕೆ ಮೆಟ್ರೋ ಸಂಚಾರ ಪ್ರಾರಂಭವಾಗಲಿದೆ. ಪೀಣ್ಯ  ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ ಆಗಸ್ಟ್ 24 ಕೊನೆಯ ರೈಲು ಸೇವೆ ರಾತ್ರಿ 11.12 ಕ್ಕೆ ಹೊರಡಲಿದೆ. ಆಗಸ್ಟ್ 25 ರಂದು ಮೊದಲ ರೈಲು ಸೇವೆ ಬೆಳಿಗ್ಗೆ 5 ಕ್ಕೆ ಬದಲಾಗಿ 6 ಕ್ಕೆ ಪ್ರಾರಂಭವಾಗಲಿದೆ. ನೇರಳ ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

ಗಮನಿಸಿ, ನಾಳೆಯಿಂದ ನಮ್ಮ ಮೆಟ್ರೋ ಈ ಮಾರ್ಗದಲ್ಲಿ ಸೇವೆ ವ್ಯತ್ಯಯ, ಕೆಲವು ನಿಲ್ದಾಣದಲ್ಲಿ ಸಂಚಾರವೇ ರದ್ದು

ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಿರುವ ಕಾರಣ ಪೀಣ್ಯ ಮೆಟ್ರೋ ಸ್ಟೇಷನ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಪೀಣ್ಯ ಮೆಟ್ರೋ ಸ್ಟೇಷನ್ ಒಂದೇ ಗೇಟ್ ಓಪನ್ ಮಾಡಿರೋದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯೂನಲ್ಲಿ ನಿಂತು ಮೆಟ್ರೋ ಒಳಹೋಗಲು ಪ್ರಯಾಣಿಕರು ಕಾಯುತ್ತಿದ್ದಾರೆ. ಇನ್ನೊಂದು ಗೇಟ್ ಓಪನ್ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ, ಇಂದಿನಿಂದ ನಾಗಸಂದ್ರ-ಮಾದವಾರ ಟ್ರಯಲ್ ರನ್‌

PREV
Read more Articles on
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!