ಕೆಂಗೇರಿಯಲ್ಲಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ ಕೇಸ್; ಓರ್ವ ಗಾಯಾಳು ದುರ್ಮರಣ

Published : Jun 08, 2025, 07:49 AM IST
BMTC

ಸಾರಾಂಶ

ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಬಿಎಂಟಿಸಿ ಬಸ್ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಗಾಯಗೊಂಡಿದ್ದ ಒಬ್ಬರು ಮೃತಪಟ್ಟು, 12 ಮಂದಿಗೆ ಚಿಕಿತ್ಸೆ ಮುಂದುವರೆದಿದೆ. ಬ್ರೇಕ್ ಮತ್ತು ಸ್ಟೇರಿಂಗ್ ವೈಫಲ್ಯದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

ಬೆಂಗಳೂರು (ಜೂನ್ 8): ಕೆಂಗೇರಿ ಸಮೀಪದ ಮೈಲಸಂದ್ರದಲ್ಲಿ ಭಯಾನಕ ಬಸ್ ಅಪಘಾತ ಸಂಭವಿಸಿತ್ತು. ಶುಕ್ರವಾರ ರಾತ್ರಿ 8.30ರ ವೇಳೆಗೆ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಘಟನೆಯಲ್ಲಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಉಳಿದಂತೆ, 12 ಮಂದಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ವ್ಯಕ್ತಿಯನ್ನು ಜಯರಾಮ್ (57) ಎಂದು ಗುರುತಿಸಲಾಗಿದೆ. ಅವರು ರಾಮನಗರ ಜಿಲ್ಲೆಯ ಬಿಡದಿ ಮೂಲದವರು. ಅಪಘಾತದ ನಂತರ ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜಯರಾಮ್ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಘಟನೆಯ ವಿವರಗಳ ಪ್ರಕಾರ, ಮಾರ್ಕೆಟ್‌ನಿಂದ ಬಿಡದಿಗೆ ಹೊರಟಿದ್ದ ಬಿಎಂಟಿಸಿ ಬಸ್ ನಿಂತನೀಯಂತ್ರಣ ಕಳೆದುಕೊಂಡಿದೆ. ಬ್ರೇಕ್ ಮತ್ತು ಸ್ಟೇರಿಂಗ್ ವೈಫಲ್ಯದ ಕಾರಣದಿಂದಾಗಿ ಬಸ್ ರಸ್ತೆದ ಒಡ್ಡಾಡಿ ನೇರವಾಗಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದು ನಿಂತಿದೆ.

ಅಪಘಾತದ ವೇಳೆ ಬಸ್‌ನಲ್ಲಿ ಡ್ರೈವರ್, ಕಂಡಕ್ಟರ್ ಸೇರಿ ಸುಮಾರು 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ್ದಾರೆ.

PREV
Read more Articles on
click me!

Recommended Stories

ಕುರ್ಚಿಗಾಗಿ ಕಿತ್ತಾಟ, ಅಭಿವೃದ್ಧಿ ಶೂನ್ಯ: ಸಿದ್ದರಾಮಯ್ಯ-ಡಿಕೆಶಿ ವಿರುದ್ಧ ಎನ್.ರವಿಕುಮಾರ್ ಟೀಕೆ
ಅಯ್ಯಯ್ಯೋ.. ದೆವ್ವ ಹಿಡಿದಿದೆಯೆಂದು ಗೃಹಿಣಿಯನ್ನು ಬೇವಿನ ಕಟ್ಟಿಗೆಯಿಂದ ಥಳಿಸಿ ಕೊಲೆ!