BMTC ಉಚಿತ ಪಾಸ್ ಅರ್ಜಿ ಆಹ್ವಾನ

Published : Jul 09, 2019, 08:20 AM IST
BMTC ಉಚಿತ ಪಾಸ್ ಅರ್ಜಿ ಆಹ್ವಾನ

ಸಾರಾಂಶ

ಬೆಂಗಳೂರು ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಬೆಂಗಳೂರು [ಜು.09]: ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಮತ್ತು ರಿಯಾಯಿತಿ ಬಸ್ ಪಾಸ್‌ಗಳಿಗೆ ಶೀಘ್ರದಲ್ಲಿ ಅರ್ಜಿ ಸಲ್ಲಿಸಿ ಪಾಸ್ ಪಡೆಯುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ. 2019 - 20 ನೇ ಸಾಲಿನ ಪದವಿ, ವೃತ್ತಿಪರ ಮತ್ತು ಸಂಜೆ ಕಾಲೇಜು ವಿದ್ಯಾರ್ಥಿಗಳು ಸೇರಿ ಇತರ ಶಾಲೆ,ಕಾಲೇಜು ವಿದ್ಯಾರ್ಥಿಗಳು ಪಾಸ್‌ಗಾಗಿ ಬಿಎಂಟಿಸಿ ವೆಬ್‌ಸೈಟ್ www.mybmtc.com  ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. 

ಕಳೆದ ತಿಂಗಳಿನಿಂದಲೇ ಅರ್ಜಿ ಸ್ವೀಕಾರ ಮತ್ತು ಪಾಸ್ ವಿತರಣೆ ಕಾರ್ಯ ಆರಂಭಿಸಲಾಗಿದೆ. ಆದರೆ, ಈವರೆಗೆ ಪಾಸ್ ವಿತರಣೆ ಕಾರ್ಯ ಪೂರ್ಣ ಗೊಂಡಿಲ್ಲ. 

ಇನ್ನು, ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅದರ ಜತೆಗೆ ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಯನ್ನು ಶಿಕ್ಷಣ ಸಂಸ್ಥೆಗಳು ಅನುಮೋದಿಸಬೇಕಿದ್ದು, ಅದಕ್ಕಾಗಿ ಬಿಎಂಟಿಸಿ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ.

PREV
click me!

Recommended Stories

ಗೃಹ ಲಕ್ಷ್ಮೀ ಅಡಿ 1.24 ಕೋಟಿ ಸ್ತ್ರೀಯರಿಗೆ ₹1.54 ಕೋಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಹೊಸ ಮಾರ್ಗಗಳಿಗೆ ಬರಲಿವೆ ಚಾಲಕ ರಹಿತ ರೈಲು