ಪ್ರಮಾಣ ವಚನ ಸ್ವೀಕಾರ: ಬಿಎಸ್‌ವೈ ಹುಟ್ಟೂರಲ್ಲಿ ಸಂಭ್ರಮ

By Web DeskFirst Published Jul 26, 2019, 3:39 PM IST
Highlights

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹುಟ್ಟೂರು ಬೂಕನಕೆರೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ ದೇವಾಲಯಗಳಲ್ಲಿಇಂದು ಸಂಜೆ ವಿಶೇಷ ಪೂಜೆ ನಡೆಯಲಿದೆ.

ಮಂಡ್ಯ(ಜು.26): ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಹುಟ್ಟೂರು ಬೂಕನಕೆರೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ ದೇವಾಲಯಗಳಲ್ಲಿಇಂದು ಸಂಜೆ ವಿಶೇಷ ಪೂಜೆ ನಡೆಯಲಿದೆ.

ಪ್ರಮಾಣ ವಚನ ಸ್ವೀಕರಿಸುವ ವೇಳೆಗೆ ಸರಿಯಾಗಿ ಪೂಜೆ ನೆರವೇರಿಸಲು ಗ್ರಾಮಸ್ಥರ ನಿರ್ಧಾರ ಮಾಡಿದ್ದಾರೆ. ಗೋಗಾಲಮ್ಮ, ಈಶ್ವರ-ಪಾರ್ವತಿ ದೇವಾಲಯ, ವೆಂಕಟರಮಣ ಸ್ವಾಮಿ ದೇಗುಲಗಳಲ್ಲಿ ಪೂಜೆ ಸಲ್ಲಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ದೇವರ ಮೂರ್ತಿಗಳಿಗೆ ವಿಶೇಷ ಅಲಂಕಾರ, ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆಯಲಿದೆ.

ಸಿಎಂ ಹುದ್ದೆಗೆ ಬಿಎಸ್‌ವೈ: ಶಿವಮೊಗ್ಗ ಕಾರ್ಯಕರ್ತರಿಂದ ರುದ್ರಾಭಿಷೇಕ

5 ಗಂಟೆಯಿಂದ ಪೂಜಾ ಕಾರ್ಯಕ್ರಮ ಆರಂಭ:

ಸಂಜೆ 5 ಗಂಟೆಯಿಂದ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ. ಇದೇ ವೇಳೆ ಸಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಬಿಎಸ್ ವೈ ಮನೆ ದೇವರಿಗೂ ವಿಶೇಷ ಪೂಜೆ ನಡೆಯಲಿದೆ. ಯಡಿಯೂರಪ್ಪ ಹೆಸರಿನಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಮನೆ ದೇವರು ಕೆ.ಆರ್.ಪೇಟೆ ತಾಲೂಕಿನ ಕಾಪನಹಳ್ಳಿ ಗವಿ ಮಠದ ಸ್ವತಂತ್ರ ಸಿದ್ದಲಿಂಗೇಶ್ವರ ದೇಗುಲದಲ್ಲಿ ಪೂಜೆ ನಡೆಯಲಿದೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗವಿ ಮಠದ ಪೀಠಾಧ್ಯಕ್ಷ ಸ್ವತಂತ್ರ ಚೆನ್ನವೀರಯ್ಯ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ನಡೆಯಲಿದೆ. ಯಾವುದೇ ಅಡೆ ತಡೆಗಳಿಲ್ಲದೇ ಅಧಿಕಾರ ನಿರ್ವಹಿಸಲೆಂದು ಪ್ರಾರ್ಥಿಸಿ ಪೂಜೆ ಸಲ್ಲಿಸಲಿದ್ದಾರೆ.

click me!