ಯುವತಿ ದುರಂತ ಸಾವಿಗೀಡಾದ ಬೆನ್ನಲ್ಲೇ ಯುವಕನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ನೊಂದು ಆತ್ಮಹತ್ಯೆ ಮಾಡಿಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ.
ಕೋಲಾರ (ಜ.31) : ಪ್ರೀತಿಸಿದ ಹುಡುಗಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾದ ಘಟನೆ ತಿಳಿದು ಪ್ರಿಯಕರನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪುಲಿಯೋಬಲ ರೆಡ್ಡಿಹಳ್ಳಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದ ಯುವಕ ಶ್ರೀನಿವಾಸ್ (27) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಉಸಿರುಗಟ್ಟಿ ಸತ್ತಳು ಪತ್ನಿ : ಪತಿಯೇ ಮಾಡಿ ಬೇರೆ ಕಥೆ ಹೇಳಿದ
ಮೃತ ಶ್ರೀನಿವಾಸ್ ಶಿಡ್ಲಘಟ್ಟ ಪಟ್ಟಣದ ಯುವತಿಯೋರ್ವಳನ್ನು ಪ್ರೀತಿ ಮಾಡುತ್ತಿದ್ದ. ಆಕೆ ಆತ್ಮಹತ್ಯೆಗೆ ಶರಣಾಗಿದ್ದರಿಂದ ನೊಂದ ಆತನವೂ ತನ್ನ ಪ್ರಾಣ ಕಳೆದುಕೊಂಡಿದ್ದಾನೆ. ಪ್ರೀತಿಸಿದ ಹುಡುಗಿಯನ್ನು ಮರೆಯಲಿ ಎಂದು ಆತನನ್ನು ಸಂಬಂಧಿಗಳ ಮನೆಯಲ್ಲಿ ಇರಿಸಲಾಗಿತ್ತು. ಪ್ರೀತಿಸಿದ ಹುಡುಗ ತನ್ನಿಂದ ದೂರವಾದ ಸುದ್ದಿ ತಿಳಿದು ಹುಡುಗಿ ಜ.28 ರಂದು ಶಿಡ್ಲಘಟ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಈ ವಿಚಾರ ತಿಳಿದ ಶ್ರೀನಿವಾಸ್ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ.
ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.