ಡಿ.28ಕ್ಕೆ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ: ಡಿಸಿ ಆರ್‌.ಲತಾ

By Govindaraj S  |  First Published Dec 3, 2022, 8:50 PM IST

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿ.24ರಿಂದ 28 ರವರೆಗೆ ಹಾಗೂ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಡಿ.28ರಂದು ನಡೆಯಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂ.ಗ್ರಾ. ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.


ದೊಡ್ಡಬಳ್ಳಾಪುರ (ಡಿ.03): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿ.24ರಿಂದ 28 ರವರೆಗೆ ಹಾಗೂ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಡಿ.28ರಂದು ನಡೆಯಲಿದ್ದು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂ.ಗ್ರಾ. ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಶ್ರೀಘಾಟಿ ಸುಬ್ರಹ್ಮಣ್ಯದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವ ಪ್ರಯುಕ್ತ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ನಂತರ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ಆಚರಿಸಲಾಗುತ್ತಿದೆ. ಘಾಟಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಸಾರ್ವಜನಿಕರು ಸ್ವ-ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.ದೇವಾಲಯದ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರೋಗ್ಯ ಶಿಬಿರ ಹಾಗೂ ಪ್ರಥಮ ಚಿಕಿತ್ಸಾ ಕ್ರಮಗಳ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

Latest Videos

undefined

Ramanagara: ಪಂಚ​ರತ್ನ ಯೋಜನೆ ಅನು​ಷ್ಠಾನದ ಗುರಿ: ನಿಖಿಲ್‌ ಕುಮಾ​ರ​ಸ್ವಾಮಿ

ಅಗತ್ಯ ಸಿದ್ಧತೆಗೆ ಸೂಚನೆ: ನೆರೆ ರಾಜ್ಯಗಳು ಹಾಗೂ ವಿವಿಧ ಜಿಲ್ಲೆಗಳಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ದರ್ಶನ ವ್ಯವಸ್ಥೆ, ಪ್ರಸಾದ, ಕುಡಿಯುವ ನೀರು, ಶೌಚಾಲಯ, ಪಾಕಿಂರ್‍ಗ್‌ ವ್ಯವಸ್ಥೆ, ಸಾರಿಗೆ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ಹಾಗೂ ಸುಗಮ ಸಂಗೀತ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲಾಖಾ ವಸ್ತು ಪ್ರದರ್ಶನ: ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಹಾಗೂ ಅಗತ್ಯ ಪೊಲೀಸ್‌ ಬಂದೋಬಸ್ತ್‌ ಮಾಡುವಂತೆ ಪೋಲಿಸ್‌ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಸರ್ಕಾರಿ ಯೋಜನೆಗಳ ಮಾಹಿತಿಯುಳ್ಳ ವಿವಿಧ ಇಲಾಖೆಗಳ ವಸ್ತುಪ್ರದರ್ಶನ ಹಾಗೂ ಸ್ವ-ಸಹಾಯ ಗುಂಪುಗಳು ಉತ್ಪಾದಿಸಿದ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯುವಂತೆ ತಿಳಿಸಿದರು ಹಾಗೂ ಯಾವುದೇ ಲೋಪವಾಗದಂತೆ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ನಿರ್ದೇಶಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ ಈ.ರವಿಕುಮಾರ್‌, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಘಾಟಿ ದೇವಾಲಯದ ಕಾರ್ಯ ನಿರ್ವಹಣಾ ಅಧಿಕಾರಿ ಹೇಮಾವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಪೇ​ಗೌ​ಡರಿಗೆ 'ಪ್ರತಿಮೆ' ಗೌರವ ಸಮರ್ಪಣೆ: ಸಚಿವ ಅಶ್ವತ್ಥ್‌ ನಾರಾಯಣ

ದನಗಳ ಜಾತ್ರೆ ರದ್ದು: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂ.ಗ್ರಾ. ಜಿಲ್ಲಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ ಸಾಗಾಣಿಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇದರಿಂದ ಡಿ.20ರಿಂದ ಆರಂಭಗೊಳ್ಳಬೇಕಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ಜಾತ್ರೆರದ್ದುಗೊಳಿಸಿ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಲತಾ ತಿಳಿಸಿದರು.

click me!