ಗುಡ್‌ನ್ಯೂಸ್: ಖಾಸಗಿ ವೈದ್ಯ ಕಾಲೇಜು ಶುಲ್ಕ ಏರಿಕೆಗೆ ಬ್ರೇಕ್‌

By Kannadaprabha NewsFirst Published Feb 13, 2020, 12:00 PM IST
Highlights

ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡುತ್ತಿವೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದರ ಬಗ್ಗೆ ಗಂಭೀರವಾಗಿ ಪರಾಮರ್ಶಿಸಿ, ಹೆಚ್ಚುವರಿ ಶುಲ್ಕ ನಿಗದಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಬೆಂಗಳೂರು(ಫೆ.13): ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡುತ್ತಿವೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದರ ಬಗ್ಗೆ ಗಂಭೀರವಾಗಿ ಪರಾಮರ್ಶಿಸಿ, ಹೆಚ್ಚುವರಿ ಶುಲ್ಕ ನಿಗದಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ನೂತನವಾಗಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅವರು ಬುಧವಾರ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯ ಹಾಗೂ ರೋಗಿಗಳಿಗೆ ನೀಡುತ್ತಿರುವ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದರು.

'ದರಿದ್ರ ಸರ್ಕಾರ' ಸಿದ್ದರಾಮಯ್ಯ ಸರ್ಕಾರಕ್ಕೆ ಅನ್ವಯಿಸುತ್ತೆ..'!.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನನ್ನ ಮೇಲೆ ನಂಬಿಕೆ ಇಟ್ಟು ವೈದ್ಯಕೀಯ ಶಿಕ್ಷಣ ಇಲಾಖೆಯಂತಹ ಮಹತ್ವದ ಖಾತೆ ನೀಡಿದ್ದಾರೆ. ಶಿಕ್ಷಣ ಹಾಗೂ ಆರೋಗ್ಯ ಸಮಾಜದ ಎರಡು ಕಣ್ಣುಗಳಿದ್ದಂತೆ. ರಾಜ್ಯದಲ್ಲಿ ಈಗಾಗಲೇ ಇರುವ ಕಾಲೇಜುಗಳ ಜತೆಗೆ 17-18 ನೂತನ ವೈದ್ಯಕೀಯ ಕಾಲೇಜುಗಳು ಸೇರ್ಪಡೆಯಾಗುತ್ತಿವೆ. ಖಾಸಗಿ ವೈದ್ಯಕೀಯ ಕಾಲೇಜು ಸಂಸ್ಥೆಗಳವರು ಪ್ರವೇಶ ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸುತ್ತಾರೆ. ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಶುಲ್ಕ ನಿಗದಿಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಆರೋಗ್ಯಕ್ಕೆ ಬಹಳ ಪ್ರಾಮುಖ್ಯತೆ ನೀಡಬೇಕಿದೆ. ನಾನು ಕೂಡ ವೈದ್ಯ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಹೀಗಾಗಿ ಬೆಳಗ್ಗೆ ಎಲ್ಲಾ ಆಸ್ಪತ್ರೆ ಮುಖ್ಯಸ್ಥರು ಹಾಗೂ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಇನ್ನಷ್ಟುನೂತನ ವೈದ್ಯಕೀಯ ಕಾಲೇಜು ಮಾಡಬೇಕಿರುವುದರಿಂದ ಬೌರಿಂಗ್‌ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನೂ ಪರಿಶೀಲನೆ ನಡೆಸಿದ್ದೇನೆ ಎಂದರು.

ಮಾರ್ಚ್ 9ರಿಂದ 7ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಆರಂಭ

ರಾಮನಗರ ಜಿಲ್ಲೆಗೆ ವೈದ್ಯಕೀಯ ಕಾಲೇಜು ನೀಡುವ ಬಗ್ಗೆ ಸ್ಪಂದಿಸಿದ ಅವರು, ರಾಮನಗರಕ್ಕೆ ಈಗಾಗಲೇ ಆರೋಗ್ಯ ವಿಶ್ವವಿದ್ಯಾಲಯ ನೀಡಬೇಕು ಎಂದು ಕೇಳಿದ್ದಾರೆ. ರಾಜೀವ್‌ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಜಾಗವಿದ್ದರೂ ನ್ಯಾಯಾಲಯದಲ್ಲಿ ತಕರಾರು ಇರುವುದರಿಂದ ಮೊದಲು ಅದನ್ನು ಬಗೆಹರಿಸಬೇಕು. ಬಳಿಕ ಆದಷ್ಟುಶೀಘ್ರ ಪ್ರಾರಂಭ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಚಿಕಿತ್ಸೆಗಾಗಿ ಕಣ್ಣೀರಿಟ್ಟಮಹಿಳೆ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬೌರಿಂಗ್‌ ಆಸ್ಪತ್ರೆ ಪರಿಶೀಲನೆ ವೇಳೆ ಮಹಿಳೆಯೊಬ್ಬರು ತಮ್ಮ ಕುಟುಂಬದ ಸದಸ್ಯರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಕಾಲಿಗೆ ಬಿದ್ದು ಕಣ್ಣೀರಿಟ್ಟಘಟನೆ ನಡೆಯಿತು.

ನಮ್ಮ ಕುಟುಂಬದ ಸದಸ್ಯರು ನ್ಯುಮೋನಿಯಾ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ಆಸ್ಪತ್ರೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿಲ್ಲ ಎಂದು ಮಹಿಳೆ ದೂರಿದರು. ಕೂಡಲೇ ಸ್ಪಂದಿಸಿದ ಸುಧಾಕರ್‌, ರೋಗಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿದರು. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಾಗಿ ಸಿಗುತ್ತಿದೆಯೇ? ಆಸ್ಪತ್ರೆಗೆ ಬಂದ ಕೂಡಲೇ ಸರಿಯಾಗಿ ಸ್ಪಂದಿಸುತ್ತಾರೆಯೇ ಎಂದು ವಿಚಾರಿಸಿದರು.

click me!