ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ

Kannadaprabha News   | Asianet News
Published : Jun 17, 2020, 08:08 AM IST
ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ

ಸಾರಾಂಶ

ಅಣ್ಣ- ತಂಗಿ ಇಬ್ಬರು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.

ಮಂಗಳೂರು(ಜೂ.17) : ಅಣ್ಣ- ತಂಗಿ ಇಬ್ಬರು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ. ಬಂಟ್ವಾಳ ನಿವಾಸಿಗಳಾದ ನೀಲಯ್ಯ ಶೆಟ್ಟಿಗಾರ್‌(42), ಕೇಸರಿ (39) ಮೃತಪಟ್ಟದುರ್ದೈವಿಗಳು.

ಇಬ್ಬರೂ ಅವಿವಾಹಿತರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೈದಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು. ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.

ಉಪ್ಪಿನಂಗಡಿ ಯುವಕನಿಗೆ ಕೊರೋನಾ ಪಾಸಿಟಿವ್: ಮನೆಗಳು ಸೀಲ್‌ಡೌನ್..?

ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್‌ಐ ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯದಿಂದ ನಿಲ್ಲಿಸಿದ್ದರು. ಕೆಲವರ್ಷಗಳಿಂದ ಇವರು ಕೆಲಸ ಮಾಡದೆ ಮನೆಯಲ್ಲಿಯೇ ಇದ್ದರು.

ಮನೆಯಿಂದ ಹೊರಗೆ ಬರುತ್ತಿರಲಿಲ್ಲ. ಆದರೆ ಭಾನುವಾರ ಮನೆಯಿಂದ ಹೊರಬಂದು ಪೇಟೆಯ ಕಡೆಗೆ ನಡೆದುಕೊಂಡು ಹೋಗಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮನೆಯಿಂದ ಹೊರಗಡೆ ಬಂದವರು ಔಷಧಿ ಹಾಗೂ ಪೆಟ್ರೋಲ್‌ ತಂದು ದಾಸ್ತಾನು ಇರಿಸಿ ಸೋಮವಾರ ತಡರಾತ್ರಿ ಪೆಟ್ರೋಲ್‌ ಸುರಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇಸರಿ ಅವರು ಸುಮಾರು 30 ವರ್ಷಗಳಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

PREV
click me!

Recommended Stories

Railway Drug Mafia: ರೈಲುಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ.. ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ
ಮೆಟ್ರೋ ಗುಲಾಬಿ ಮಾರ್ಗದ ರೈಲು ಅನಾವರಣ: ಯಾವ್ಯಾವ ಮಾರ್ಗಕ್ಕೆ?