ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಯ ಮೇಲೆ ಸ್ವಂತ ದೊಡ್ಡಪ್ಪನ ಮಗನೇ ಅತ್ಯಾಚಾರ ವೆಸಗಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೊಳ್ಳೇಗಾಲ(ಮೇ 19): ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಯ ಮೇಲೆ ಸ್ವಂತ ದೊಡ್ಡಪ್ಪನ ಮಗನೇ ಅತ್ಯಾಚಾರ ವೆಸಗಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ 14 ವರ್ಷದ ಬಾಲಕಿ ಸಂತ್ರಸ್ತೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದು, ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ, ಬಾಲಕಿಯ ಆರೋಗ್ಯ ಪರೀಕ್ಷೆ ಮಾಡಿಸಲಾಗಿದ್ದು, ಪರಾರಿಯಾಗಿರುವ ಅತ್ಯಾಚಾರಿಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಹಿಂದೂ ಅಂಗಡಿಯಲ್ಲಿ ಖರೀದಿಗೆ ಹೋದ ಮುಸ್ಲಿಂ ಮಹಿಳೆಗೆ ಬೆದರಿಕೆ: ರೇಣುಕಾಚಾರ್ಯ ಕೊಟ್ರು ಎಚ್ಚರಿಕೆ
ಲಾಕ್‌ಡೌನ್‌ನಿಂದಾಗಿ ಅಪರಾಧ ಕೃತ್ಯಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆಯಾದ ಮೇಲೆ ಅಪರಾಧ ಕೃತ್ಯಗಳು ನಡೆಯುತ್ತಿವೆ. ಸ್ವಂತ ಅಣ್ಣನೇ ತಂಗಿಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.