ಶಿವಮೊಗ್ಗ: ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರಸೇನಾನಿ: ಬಿಎ​ಸ್‌​ವೈ

Published : Mar 10, 2023, 07:49 AM IST
ಶಿವಮೊಗ್ಗ:  ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರಸೇನಾನಿ: ಬಿಎ​ಸ್‌​ವೈ

ಸಾರಾಂಶ

ಸಂಗೊಳ್ಳಿ ರಾಯಣ್ಣ ದೇಶ ಕಂಡ ಅಪ್ರತಿಮ ವೀರ ಸೇನಾನಿ. ದೇಶದ ಚರಿತ್ರೆಯಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರು ಅಜರಾಮರ. ಚರಿತ್ರೆಯಲ್ಲಿ ಶಾಶ್ವತ ಸ್ಥಾನ ಗಳಿಸಿದ ಸಂಗೊಳ್ಳಿ ರಾಯಣ್ಣನ ಹೆಸರನ್ನು ಪಟ್ಟಣದ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣಕ್ಕೆ ನಾಮಕರಣಗೊಳಿಸಲು ಮುಖ್ಯಮಂತ್ರಿ ಅವ​ರಿಗೆ ಶಿಫಾರಸು ಮಾಡಲಾಗುವುದು ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿ​ದರು.

ಶಿಕಾರಿಪುರ (ಮಾ.10) : ಸಂಗೊಳ್ಳಿ ರಾಯಣ್ಣ ದೇಶ ಕಂಡ ಅಪ್ರತಿಮ ವೀರ ಸೇನಾನಿ. ದೇಶದ ಚರಿತ್ರೆಯಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರು ಅಜರಾಮರ. ಚರಿತ್ರೆಯಲ್ಲಿ ಶಾಶ್ವತ ಸ್ಥಾನ ಗಳಿಸಿದ ಸಂಗೊಳ್ಳಿ ರಾಯಣ್ಣನ ಹೆಸರನ್ನು ಪಟ್ಟಣದ ಕೆಎಸ್‌ಆರ್‌ಟಿಸಿ ನೂತನ ಬಸ್‌ ನಿಲ್ದಾಣಕ್ಕೆ ನಾಮಕರಣಗೊಳಿಸಲು ಮುಖ್ಯಮಂತ್ರಿ ಅವ​ರಿಗೆ ಶಿಫಾರಸು ಮಾಡಲಾಗುವುದು ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ(BS Yadiyurappa) ಹೇಳಿ​ದರು.

ಪಟ್ಟಣದ ಶ್ರೀ ಮಾರಿಕಾಂಬಾ ದೇವಸ್ಥಾನ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ(Kranti veera sangolli rayanna statue) ಕಂಚಿನ ಪುತ್ಥಳಿಯನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಮಹಾಪುರುಷರ ತ್ಯಾಗದಿಂದ ಭಾರತ ಸಂಸ್ಕೃತಿ, ಸಂಸ್ಕಾರ ವಿಶ್ವಮಾನ್ಯ: ಈಶ್ವರಪ್ಪ

ತಾಲೂಕಿನ ಜನತೆಯ ಆಶೀರ್ವಾದದಿಂದ 4 ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಜನತೆಯ ಸೇವೆ ಸಲ್ಲಿಸುವ ಅವಕಾಶ ಲಭ್ಯವಾಯಿತು. ಈ ಅವಧಿಯಲ್ಲಿ ತಾಲೂಕಿನ ರೈತರ ಹೊಲಕ್ಕೆ ನೀರು, ಬೇಸಿಗೆ ಯಲ್ಲಿ ಕೆರೆಕಟ್ಟೆತುಂಬಿಸಲು ಶಾಶ್ವತ ನೀರಾವರಿ ಯೋಜನೆ ಮೂಲಕ ಮಾದರಿ ತಾಲೂಕು ಎಂಬ ಹೆಗ್ಗಳಿಕೆಗೆ ಅಗತ್ಯವಾದ ಸಕಲ ಸೌಲಭ್ಯವನ್ನು ಕಲ್ಪಿಸಲಾ​ಗಿದೆ. ಈ ಸೇವೆಯ ಸಂತೃಪ್ತಿ ಹೊಂದಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಯಾದ ಅವಧಿಯಲ್ಲಿ ಬಸವೇಶ್ವರ, ಅಂಬೇಡ್ಕರ್‌, ಸಂಗೊಳ್ಳಿ ರಾಯಣ್ಣನ ಸಹಿತ ನಾಡಿನ ಮಠಾಧೀಶರ ಮಾರ್ಗದರ್ಶನದಲ್ಲಿ ಆಡಳಿತ ನಡೆಸಿದ್ದೇನೆ. ಹಾಲುಮತ ಸಮಾಜ ಹಾಲಿನ ರೀತಿ ಪವಿತ್ರವಾಗಿದೆ. 4 ದಶಕದ ರಾಜಕೀಯ ಇತಿಹಾಸದಲ್ಲಿ ಎಲ್ಲ ಸಂದರ್ಭದಲ್ಲಿ ನೀಡಿದ ಸಹಕಾರದಿಂದ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ (BY Raghavendra)ಮಾತನಾಡಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಸರ್ವರಿಗೂ ಸಮಪಾಲು ಸಮಬಾಳು ರೀತಿ ಅಧಿಕಾರ ನಡೆಸಿದ್ದಾರೆ. ತಾಲೂಕಿನಾದ್ಯಂತ ಕುರುಬ ಸಮಾಜದ ದೇವಸ್ಥಾನ ಸಮುದಾಯ ಭವನಕ್ಕೆ ಹಲವು ಕೋಟಿ ಅನುದಾನ ನೀಡಿ ಅಭಿವೃದ್ಧಿಪಡಿಸಲಾಗಿದೆ. ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣದಲ್ಲಿ ರಾಜಕೀಯದ ಅನಿವಾರ್ಯತೆ ಇಲ್ಲ. ಚುನಾವಣೆಯಲ್ಲಿ ಮಾತ್ರ ಪಕ್ಷ ರಾಜಕೀಯ ಮಾಡಿ, ಸಮಾಜ ಕಟ್ಟುವ ಕೆಲಸಕ್ಕೆ ಸರ್ವರೂ ಕೈ ಜೋಡಿಸುವಂತೆ ಸಲಹೆ ನೀಡಿ​ದರು.

ತಾಲೂಕು ಐತಿಹಾಸಿಕವಾಗಿ ಪುನರ್‌ ನಿರ್ಮಿಸಲಾಗಿದೆ. ‘ಶಿವಶರಣರ ನಾಡು’ ಎಂಬ ಹೆಗ್ಗಳಿಕೆ ತಾಲೂಕಿನಲ್ಲಿ ಕಲ್ಲು ಎಡವಿದಲ್ಲಿ ಶಾಸನ ದೊರೆಯಲಿದೆ. ಅಲ್ಲಮಪ್ರಭು, ಅಕ್ಕ ಮಹಾದೇವಿ, ಅಜಗಣ್ಣ, ಮುಕ್ತಾಯಕ್ಕರ ತಾಲೂಕಿನಲ್ಲಿ ಇದೀಗ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಹೆಮ್ಮೆ ಹಾಗೂ ಸಂತಸದ ಸಂಗತಿಯಾಗಿದೆ. 17ರಂದು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಉಡುತಡಿಯಲ್ಲಿ 70 ಅಡಿ ಎತ್ತರದ ಬೃಹತ್‌ ಅಕ್ಕ ಮಹಾದೇವಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ(BY Vijayendra) ಮಾತನಾಡಿ, ಯಡಿಯೂರಪ್ಪ ಅವರಿಗೂ, ಕುರುಬ ಸಮಾಜಕ್ಕೆ ಅವಿನಾಭಾವ ಸಂಬಂಧವಿದೆ. ಈ ದಿಸೆಯಲ್ಲಿ ಸಮುದಾಯದ ಅಭಿವೃದ್ಧಿಗೆ ಎಲ್ಲ ರೀತಿಯಲ್ಲಿ ಸ್ಪಂದಿಸಿದ್ದಾರೆ. ಹರಗುರುಚರಮೂರ್ತಿಗಳ ಆಶೀರ್ವಾದ ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಮುಖ್ಯಮಂತ್ರಿಯಾದ ಅವಧಿಯಲ್ಲಿ ಕನಕದಾಸರ ಜಯಂತಿ ಸರ್ಕಾರಿ ಕಾರ್ಯಕ್ರಮವಾಗಿಸಿ, ಎಲ್ಲ ವಿ.ವಿ.ಯಲ್ಲಿ ಕನಕ ಅಧ್ಯಯನ ಪೀಠ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಕನಕದಾಸ​ರ ಜನ್ಮಸ್ಥಳ ಅಭಿವೃದ್ಧಿ, ಹೊಸದುರ್ಗ ಗುರುಪೀಠ ಅಭಿವೃದ್ಧಿ, ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ ಅಭಿವೃದ್ಧಿಸಹಿತ ದೊರೆತ ಅವಕಾಶ ಸದುಪಯೋಗ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ನಂಜುಂಡಪ್ಪ ವರದಿ(Nanjundappa report) ಅನ್ವಯ ಹಿಂದುಳಿದ ತಾಲೂಕು ಎಂಬ ಕಪ್ಪುಚುಕ್ಕೆ ಹೋಗಲಾಡಿಸಿ, ನೀರಾವರಿ ಮೂಲಕ ಹಸಿರು ಕ್ರಾಂತಿಯಾಗಿದೆ. ಶಿಕ್ಷಣ ಆರೋಗ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಎಲ್ಲ ವರ್ಗದ ಜನತೆ ಅವರನ್ನು ಒಪ್ಪಿದ್ದಾರೆ. ಶಾಶ್ವತವಾಗಿ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಅದೇ ಮಾದರಿಯಲ್ಲಿ ನಿಮ್ಮೆಲ್ಲರ ಮನಸ್ಸು ಗೆದ್ದು, ಸೇವೆ ಸಲ್ಲಿಸುವ ಅಪೇಕ್ಷೆ ಹೊಂದಿದ್ದು, ಹಾಲುಮತ ಸಮಾಜದ ಸಂಪೂರ್ಣ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದರು.

ತಾಲೂಕು ಕುರುಬ ಸಮಾಜದ ಅಧ್ಯಕ್ಷ ರಾಜಣ್ಣ ಕಬಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜದ ಹಿಂದಿನ ಸ್ಥಿತಿಗೂ ಇಂದಿನ ಸ್ಥಿತಿಗೂ ಅಗಾಧ ಬದಲಾವಣೆಯಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರ ಕೊಡುಗೆ ಅಪಾರ. ಭವಿಷ್ಯದಲ್ಲಿ ಯಾವುದೇ ಸರ್ಕಾರ ರಚನೆಯಾದರೂ ಸಮಾಜದ ಅಭಿವೃದ್ಧಿಗೆ ಅನುದಾನ ದೊರಕಿಸುವ ಶಕ್ತಿ ಅವರಿಗಿದೆ ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ್ದ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಹಲವು ಗೊಂದಲ ನಿವಾರಿಸಿ ರಾಯಣ್ಣನ ಪುತ್ಥಳಿ ಅನಾವರಣದ ಕೀರ್ತಿ ಸಂಸದರಿಗೆ ಸಲ್ಲಬೇಕು. ಶ್ರೀಗಳು ಸಮಾಜದ ಮುಖಂಡರ ಆಶಯದಂತೆ ನಡೆದ ಪುತ್ಥಳಿ ಅನಾವರಣ ಬಗ್ಗೆ ಅನವಶ್ಯಕ ಗೊಂದಲ ಬೇಡ ಸಮಾಜ ಕಟ್ಟುವ ದಿಸೆಯಲ್ಲಿ ಎಲ್ಲರೂ ಒಗ್ಗೂಡಬೇಕು. ಚುನಾವಣೆಯಲ್ಲಿ ಮಾತ್ರ ರಾಜಕಾರಣ ಮಾಡುವಂತೆ ಸಲ​ಹೆ ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಬಂದ್‌ ಮಾಡಲು ಕಾಂಗ್ರೆಸ್‌ಗೆ ನೈತಿಕತೆ ಇದ್ಯಾ? : ಈಶ್ವರಪ್ಪ

ಗಣ್ಯರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಾಜಿ ಸಚಿವ, ಶಾಸಕ ಕೆ.ಎ​ಸ್‌.ಈಶ್ವರಪ್ಪ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ಉಗ್ರಾಣ ನಿಗಮ ಅಧ್ಯಕ್ಷ ಎಚ್‌.ಟಿ. ಬಳಿಗಾರ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಚನ್ನವೀರಪ್ಪ, ಪುರಸಭಾಧ್ಯಕ್ಷೆ ರೇಖಾಬಾಯಿ, ಮುಖಂಡ ನಗರದ ಮಹಾದೇವಪ್ಪ, ಹಾಲಪ್ಪ, ಗಾಯತ್ರಿದೇವಿ, ನಿವೇದಿತಾ, ಕಾಂಚನ ಕುಮಾರ್‌, ಈರೇಶ್‌, ಡಾ.ಪ್ರಶಾಂತ್‌ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯ​ಕ್ರ​ಮ​ದಲ್ಲಿ ಜಾಹ್ನವಿ ಪ್ರಾರ್ಥಿಸಿ, ಪ್ರಕಾಶ್‌ ಸ್ವಾಗತಿಸಿದರು. ರಾಜು ನಿರೂಪಿಸಿ, ವಂದಿಸಿದರು.

PREV
Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ