ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ಕೊಟ್ಟ ಕೆ-100 ಜಲಮಾರ್ಗ ಬೊಮ್ಮಾಯಿ ಹೋಗಿ, ಸಿದ್ದರಾಮಯ್ಯ ಬಂದ್ರೂ ಮುಗಿದಿಲ್ಲ!

Published : Feb 07, 2024, 05:09 PM IST
ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ಕೊಟ್ಟ ಕೆ-100 ಜಲಮಾರ್ಗ ಬೊಮ್ಮಾಯಿ ಹೋಗಿ, ಸಿದ್ದರಾಮಯ್ಯ ಬಂದ್ರೂ ಮುಗಿದಿಲ್ಲ!

ಸಾರಾಂಶ

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಚಾಲನೆ ಕೊಟ್ಟ ಕೆ-100 (ನಾಗರಿಕ ಜಲಮಾರ್ಗ) ಯೋಜನೆ, ಬೊಮ್ಮಾಯಿ ಹೋಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೂ ಕಾಮಗಾರಿ ಮುಕ್ತಾಯಗೊಂಡಿಲ್ಲ. 

ಬೆಂಗಳೂರು (ಫೆ.07): ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದ್ದರು. ಅವರ ನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ನಮ್ಮ ಸರ್ಕಾರದಲ್ಲೇ ಉದ್ಘಾಟನೆ ಮಾಡ್ತೀವಿ ಎನ್ನುತ್ತಿದ್ದರು. ಆದರೆ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹೋಗಿ ಸಿದ್ದರಾಮಯ್ಯ ಸಿಎಂ ಆಗಿ 8 ತಿಂಗಳು ಕಳೆದರೂ ಕಾಮಗಾರಿ ಮಾತ್ರ ಮುಕ್ತಾಯಗೊಳ್ಳುತ್ತಿಲ್ಲ. ಇದು ಬಿಬಿಎಂಪಿ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ.

ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗಿನ 9.2 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಜಲಮಾರ್ಗ ಯೋಜನೆ ಕಾಮಗಾರಿ ಪ್ರಗತಿಯನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಬಳಿ ಪರಿಶೀಲನೆ ಮಾಡಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನನ್ನ ದೇಶ ಕೇವಲ ದೆಹಲಿಯಲ್ಲ, ಬೆಂಗಳೂರು ಕೂಡ ನನ್ನ ದೇಶ; ವಿಪಕ್ಷಗಳಿಗೆ ಚಾಟಿ ಬಿಸಿದ ಪ್ರಧಾನಿ ಮೋದಿ !

ಕುಂಬಾರಗುಂಡಿ ಬಳಿ ರಾಜಕಾಲುವೆಯಲ್ಲಿ ಹರಿಯುವ ನೀರನ್ನು ಶುದ್ಧೀಕರಿಸಲು ನಿರ್ಮಸುತ್ತಿರುವ 05 ಎಂ.ಎಲ್.ಡಿ ಎಸ್.ಟಿ.ಪಿಯ(ತ್ಯಾಜ್ಯ ನೀರು ಸಂಸ್ಕರಣಾ ಘಟಕ) ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದ್ದು, ಕೂಡಲೆ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಿ ಘಟಕವನ್ನು ಕಾರ್ಯಾರಂಭಗೊಳಿಸಬೇಕು. ಬನ್ನೇರಘಟ್ಟ ಮುಖ್ಯ ರಸ್ತೆ ವಿಲ್ಸನ್ ಗಾರ್ಡನ್ ಹತ್ತಿರ ರಾಜಕಾಲುವೆ ಅಭಿವೃದ್ಧಿಕಾರ್ಯವನ್ನು ಪರಿಸೀಲಿಸಿದ ಬಳಿಕ ಮಾರಪ್ಟ ಗಾರ್ಡನ್ ಬಳಿ ರಾಜಕಾಲುವೆ ಪಕ್ಕದಲ್ಲಿ ಒತ್ತುವರಿಯಾಗಿರುವ ಪ್ರದೇಶವನ್ನು ಪರಿಶೀಲಿಸಿ ಸರ್ವೇ ಮಾಡಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. 

ಇಂಟರ್ ಮೀಡಿಯೆಟ್ ಸೀವೆಜ್ ಪಂಪಿಂಗ್ ಸ್ಟೇಷನ್ ನಿರ್ಮಾಣ: ಶಾಂತಿನಗರ ಬಸ್ ನಿಲ್ದಾಣದ ಬಳಿ ನಾಗರಿಕ ಜಲಮಾರ್ಗ ಪರಿಶೀಲನೆಯ ವೇಳೆ ರಾಜಕಾಲುವೆಗೆ ತ್ಯಾಜ್ಯನೀರು ಬರುತ್ತಿರುವುದನ್ನು ಗಮನಿಸಿ, ರಾಜಕಾಲುವೆಗೆ ತ್ಯಾಜ್ಯ ನೀರು ಬರುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಅದಕ್ಕಾಗಿ ಜಲಮಂಡಳಿಯು ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಈ ವೇಳೆ ಜಲಮಂಡಳಿಯ ಮುಖ್ಯ ಇಂಜಿನಿಯರ್ ಪ್ರತಿಕ್ರಿಯಿಸಿ, ರಾಜಕಾಲುವೆಗೆ ತ್ಯಾಜ್ಯ ನೀರು ಬರುವುದನ್ನು ನಿಲ್ಲಿಸುವ ಸಲುವಾಗಿ 15 ಎಂ.ಎಲ್.ಡಿ ಸಾಮರ್ಥ್ಯದ ಇಂಟರ್ ಮೀಡಿಯೆಟ್ ಸೀವೆಜ್ ಪಂಪಿಂಗ್ ಸ್ಟೇಷನ್(ISPS) ನಿರ್ಮಿಸಬೇಕಿದೆ. ಅದಕ್ಕಾಗಿ ಸ್ಥಳದ ಅವಶ್ಯಕತೆಯಿದ್ದು, ಕೆ.ಎಸ್.ಆರ್.ಟಿ.ಸಿಯ ಸ್ಥಳವನ್ನು ನೀಡಿದ್ದು, ಹಸ್ತಾಂತರ ಪ್ರಕ್ರಿಯೆ ಬಾಕಿಯಿದೆ ಎಂದರು.

ಊಟ ಕೊಟ್ಟಿಲ್ಲಾಂತ ಅಮ್ಮನನ್ನೇ ಹೊಡೆದು ಕೊಂದ ಮಗ, ಅಪ್ಪನೇ ಹೇಳಿಕೊಟ್ಟಿದ್ದನಂತೆ!

ಕೆ-100 ಯೋಜನೆಯ ಪ್ರಗತಿಯ ವಿವರ:
ಬೆಂಗಳೂರಿನ ಕೆ-100 ಯೋಜನೆಯು 9.2 ಕಿ.ಮೀ ಉದ್ದವಿದ್ದು, ಈಗಾಗಲೇ ಹೂಳೆತ್ತಿ ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸಿ ಅಭಿವೃದ್ಧಿಗೊಳಿಸಲಾಗಿದೆ. ರಾಜಕಾಲುವೆ ಮಾರ್ಗದ ಎರಡೂ ಬದಿಯ ತಡೆಗೋಡೆ, ತಳಮಟ್ಟದ ಸೇತುವೆಗಳನ್ನು ವಾಸ್ತುಶಿಲ್ಪದ ಮಾದರಿಯಲ್ಲಿ ವಿನ್ಯಾಸಗೊಳಿಸುವ ಕಾರ್ಯ ಬಹುತೇಖ ಪೂರ್ಣಗೊಂಡಿದೆ. ಹಸಿರೀಕರಣ, ರಾತ್ರಿ ಸಮಯದಲ್ಲಿ ಉದ್ಯಾನವನದ ರೀತಿಯಲ್ಲಿ ಅಲಂಕಾರಿಕ ವಿದ್ಯುಧೀಕರಣ ಅಳವಡಿಕೆ ಕಾರ್ಯ, ಗ್ರಾನೈಟ್ ಅಳವಡಿಕೆ, ತೋಟಗಾರಿಕೆ, ಪಾದಚಾರಿ ಮಾರ್ಗ, ಗ್ರಿಲ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ.

ರಾಜಕಾಲುವೆ ಮೇಲೆ ಎರಡೂ ಬದಿ ಸಂಚರಿಸಲು ಬ್ರಿಡ್ಜ್ ಗಳ ನಿರ್ಮಾಣ ಬಹುತೇಖ ಪೂರ್ಣಗೊಳಿಸಲಾಗಿದೆ. ವಿದ್ಯುತ್ ಅಳವಡಿಕೆಗಾಗಿ ಅತ್ಯಾಧುನಿಕ ಟ್ರಾನ್ಸ್ ಫಾರ್ಮ್ ಗಳನ್ನು ಅಳವಡಿಸಲಾಗಿದೆ. ಜೊತೆಗೆ ರಾಜಕಾಲುವೆಯ ಎರಡೂ ಬದಿಯ ಸರ್ವೀಸ್ ರಸ್ತೆ ಅಭಿವೃದ್ಧಿ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಸವೀರ್ಸ್ ರಸ್ತೆಯಲ್ಲಿ ರಾಜಕಾಲುವೆಗೆ ಮಳೆ ನೀರು ಹರಿದು ಹೋಗದಂತೆ ಪೈಪ್ ಲೈನ್, ಕೇಬಲ್ ಅಳವಡಿಕೆಗೆ ಚೇಂಬರ್ ಗಳ ಕಾಮಗಾರಿ ಕೂಡಾ ಪೂರ್ಣಗೊಳಿಸಲಾಗಿದೆ.

PREV
Read more Articles on
click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!