
ಸಂಕೇಶ್ವರ(ಏ.22): ಕೊರೋನಾ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ, ಜನ ಸಂಚಾರ ಸಂಪೂರ್ಣ ಸ್ತಬ್ಧಗೊಂಡಿರುವ ಹಿನ್ನೆಲೆಯಲ್ಲಿ ಮೂರು ಕಾಡುಕೋಣಗಳು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣಕ್ಕೆ ಮಂಗಳವಾರ ಆಗಮಿಸಿದ್ದು, ಈ ಪೈಕಿ ಒಂದು ಕೋಣ ಅನಿರೀಕ್ಷಿತವಾಗಿ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಈ ಕುರಿತು ಮಾಹಿತಿ ಪಡೆಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಬಾವಿಯಲ್ಲಿ ಬಿದ್ದಿದ್ದ ಕಾಡುಕೋಣವನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾದರು. ನಂತರ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ಸುತ್ತಾಡುತ್ತಿದ್ದ ಇನ್ನೆರಡು ಕಾಡು ಕೋಣಗಳನ್ನು ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಪಟಾಕಿ ಸಿಡಿಸಿ ಅರಣ್ಯ ಪ್ರದೇಶದತ್ತ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ: ರೈಲಿಗೆ ಸಿಕ್ಕು ಎರಡು ಕಾಡುಕೋಣಗಳ ಸಾವು
ಕೊರೋನಾ ಹಿನ್ನೆಲೆಯಲ್ಲಿ ಲಾಕ್‌ಡೌನ್ ಆಗಿರುವುದರಿಂದ ಜನ ಸಂಚಾರ ಸಂಪೂರ್ಣ ಸ್ತಬ್ದವಾಗಿತ್ತು. ಪರಿಣಾಮ ಸಂಕೇಶ್ವರ ಪಟ್ಟಣಕ್ಕೆ ಸುಮಾರು 25 ಕಿಮೀ ದೂರದ ಕಾಡಿನಿಂದ 3 ಕಾಡು ಕೋಣಗಳು ಆಗಮಿಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.