ತುಮಕೂರಿನಲ್ಲಿ ಬಸ್-ಲಾರಿ ಡಿಕ್ಕಿಯಾಗಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 22 ಜನ ಪ್ರಯಾಣಿಕರಿದ್ದರು.
ತುಮಕೂರು(ಆ. 01): ಬಸ್-ಲಾರಿ ಡಿಕ್ಕಿಯಾಗಿ ಬಸ್ ಚಾಲಕ ಮೃತಪಟ್ಟಿದ್ದಾರೆ. ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿ 22 ಜನ ಪ್ರಯಾಣಿಕರಿದ್ದರು.
ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸಾವನ್ನಪ್ಪಿದ್ದು, 3 ಮಂದಿಗೆ ಗಂಭೀರ ಹಾಗೂ 10 ಮಂದಿಗೆ ಸಣ್ಣ-ಪುಟ್ಟಗಾಯಗಳಾಗಿರುವ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ರಸ್ತೆ ಅಪಘಾತ: ಹಜ್ ಯಾತ್ರೆ ಹೊರಟಿದ್ದ ಕುಟುಂಬದ 7 ಜನ ಸಾವು
ಶ್ರೀನಿವಾಸಪುರದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್‌ನಲ್ಲಿ 22 ಪ್ರಯಾಣಿಕರಿದ್ದರೆಂದು ತಿಳಿದು ಬಂದಿದೆ. ಬಸ್ ಚಾಲಕ ಅಬ್ದುಲ್ ಸಲಾಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಶಿರಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ