ಕೊಠಡಿ ಬಾಡಿಗೆ ಪಡೆದು ಉದ್ಯಮಿ ಆತ್ಮಹತ್ಯೆ

Suvarna News   | Asianet News
Published : Jul 03, 2020, 01:24 PM IST
ಕೊಠಡಿ ಬಾಡಿಗೆ ಪಡೆದು ಉದ್ಯಮಿ ಆತ್ಮಹತ್ಯೆ

ಸಾರಾಂಶ

ಹೋಟೆಲ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಮೇಶ್(52) ಮೃತ ವ್ಯಕ್ತಿ.

ಮೈಸೂರು(ಜು.03): ಹೋಟೆಲ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ರಮೇಶ್(52) ಮೃತ ವ್ಯಕ್ತಿ.

ಮೈಸೂರಿನ ಕುವೆಂಪುನಗರದ ನಿವಾಸಿ ರಮೇಶ್ ರಿಯಲ್ ಎಸ್ಟೇಟ್ ಹಾಗೂ ಪ್ರಿಂಟಿಂಗ್ ಪ್ರೆಸ್ ವ್ಯವಹಾರ ನಡೆಸುತ್ತಿದ್ದರು. ಮೈಸೂರಿನ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗದ ಹೋಟೆಲ್‌ನಲ್ಲಿ ಕೊಠಡಿ ಬಾಡಿಗೆ ಪಡೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೀವನದಲ್ಲಿ ಜಿಗುಪ್ಸೆ: ನೇಣಿಗೆ ಶರಣಾದ ಆಶಾ ಕಾರ್ಯಕರ್ತೆ

ಮಂಗಳವಾರ ಕೊಠಡಿ ಬಾಡಿಗೆ ಪಡೆದಿದ್ದ ರಮೇಶ್ ಮೈಸೂರಿನ ನಿವಾಸಿಯಾಗಿದ್ದರೂ ಹೋಟೆಲ್ ನಲ್ಲಿ ರೂಂ ಬಾಡಿಗೆ ಪಡೆದಿದ್ದರು. ಹಣಕಾಸಿನ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಕೊರೊನಾ ಪರೀಕ್ಷೆ ನಂತರ ಮೃತದೇಹ ವಾರಸುದಾರರಿಗೆ ನೀಡಲು ನಿರ್ಧಾರ ಮಾಡಲಾಗಿದೆ. ಲಕ್ಷ್ಮೀಪುರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

PREV
click me!

Recommended Stories

ಪರಿಷತ್ತಿನಲ್ಲಿ ಬಸವರಾಜ ಹೊರಟ್ಟಿ ಬದಲಾವಣೆ ಇಲ್ಲ, ಈ ಕುರಿತು ಚರ್ಚೆ ಆಗಿಲ್ಲ: ಸಲೀಂ ಅಹ್ಮದ್
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು