ಮದ್ಯ ಮಾರಾಟ ನಿಷೇಧ : ಜಿಲ್ಲಾಧಿಕಾರಿ ಆದೇಶ

By Kannadaprabha NewsFirst Published Nov 10, 2020, 11:00 AM IST
Highlights

ಮದ್ಯ ಮಾರಾಟ ಹಾಗೂ ಸರಬರಾಜು ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಮುಂಜಾನೆಯಿಂದ ಮಧ್ಯರಾತ್ರಿವರೆಗೆ  ನಿಷೇಧಿಸಲಾಗಿದೆ

ತುಮಕೂರು (ನ.10):  ಶಿರಾ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ನವೆಂಬರ್‌ 10ರಂದು ತುಮಕೂರು ಸರ್ಕಾರಿ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ನಡೆಯುತ್ತಿದೆ.

 ಮತ ಎಣಿಕೆ ದಿನವಾದ ಇಂದು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಆರ್‌ಆರ್‌ ನಗರ, ಶಿರಾ ಬೈ ಎಲೆಕ್ಷನ್ ಮುಗಿಯುತ್ತಿದ್ದಂತೆಯೇ ಮತ್ತೆರೆಡು ಉಪಚುನಾವಣೆಗೆ ಸಿದ್ಧತೆ ...

ತುಮಕೂರಿನ ಮತ ಎಣಿಕೆ ಕೇಂದ್ರದ 500 ಮೀಟರ್‌ ಸುತ್ತಳತೆಯಲ್ಲಿ ಜಾರಿಗೆ ಬರುವಂತೆ ಎಲ್ಲಾ ಮದ್ಯದಂಗಡಿಗಳನ್ನು(ಕೆಎಸ್‌ಬಿಸಿಎಲ್‌ ಡಿಪೋಗಳನ್ನು ಹೊರತುಪಡಿಸಿ) ಮುಚ್ಚಿಸಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಅವರು ಆದೇಶಿಸಿದ್ದಾರೆ.

ಇಂದು ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಫಲಿತಾಂಶಕ್ಕೆ ಕ್ಷಣ ಗಣನೆ ಆರಂಭವಾಗಿದೆ. 

click me!