
ಮೈಸೂರು[ಫೆ.10]: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ನೆರವಾಗುವ ಮೂಲಕ ಮಾನವೀಯತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ.
ಗಾಜಿನ ಮನೆಯಲ್ಲಿ ಬಿಎಸ್‌ವೈ ಪುತ್ರ ವಿಜಯೇಂದ್ರ ಮಿಂಚಿನ ಸಂಚಾರ!
ಭಾನುವಾರ ಮೈಸೂರಿಗೆ ಭೇಟಿ ನೀಡಿದ್ದ ವಿಜಯೇಂದ್ರ ಬನ್ನೂರು ರಸ್ತೆಯಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದವರು ಆ್ಯಂಬುಲೆನ್ಸ್ ಬರುವಿಕೆಗಾಗಿ ಕಾದು ಕುಳಿತಿದ್ದರು.
ಇದನ್ನು ಗಮನಿಸಿದ ವಿಜಯೇಂದ್ರ ಅವರು, ತಮ್ಮೊಂದಿಗೆ ಇದ್ದ ಸ್ಕಾರ್ಪಿಯೋ ವಾಹನದಲ್ಲಿ ಗಾಯಾಳನ್ನು ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಿದರು. ಇದಕ್ಕೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.