
ಬೆಳಗಾವಿ(ಫೆ.09): ವಿದ್ಯಾರ್ಥಿಗಳಲ್ಲಿ(Students) ಕಾಂಗ್ರೆಸ್(Congress) ಮತೀಯ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ಆರೋಪಿಸಿದ್ದಾರೆ.
ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದು ಬಹಳ ದುರದೃಷ್ಟಕರ ಸಂಗತಿ. ಶಾಲಾ, ಕಾಲೇಜುಗಳಿಗೆ ಸಮವಸ್ತ್ರದಲ್ಲಿ ಹೋಗುವುದು ಮುಂಚೆಯಿಂದ ಬಂದ ಪದ್ಧತಿ. ಶಾಲಾ, ಕಾಲೇಜಿನ ಸಮವಸ್ತ್ರ ಅಂದರೆ ಏನು ಎಂಬುದು ಹೆಸರಲ್ಲೇ ಗೊತ್ತಾಗುತ್ತೆ. ಶಾಲೆಗಳಲ್ಲಿ ಎಲ್ಲರೂ ಸಮಾನವಾಗಿ ಇರಬೇಕು. ಇದರ ನಡುವೆ ಎಂದಿಗೂ ಜಾತಿ ವಿಚಾರ ಬರಬಾರದು, ಹಿಂದೂ ಮುಸ್ಲಿಂ ಅನ್ನೋದು ಬರಬಾರದು. ಆದರೆ ಶಾಲಾ, ಕಾಲೇಜು ಮಕ್ಕಳಲ್ಲಿಯೂ ರಾಜಕಾರಣ ಮಾಡುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದರಲ್ಲಿ ಯಾರೂ ಸಹ ರಾಜಕಾರಣ ಬೆರೆಸುವುದು ಸರಿಯಲ್ಲ, ವಿರೋಧ ಪಕ್ಷದವರು ಹಿಜಾಬ್ ಕುರಿತ ವಿಷಯ ಬಿಟ್ಟು, ದೂರ ಉಳಿದರೆ ಉತ್ತಮ ಎಂದರು.
News Hour ಹೈ ಕೋರ್ಟ್‌ನಲ್ಲಿ ಹಿಜಾಬ್ ಕಿಚ್ಚಿನ ವಾದ ಪ್ರತಿವಾದ ಹೇಗಿತ್ತು?
ದಕ್ಷಿಣ ಕನ್ನಡದಿಂದ ಉತ್ತರ ಕರ್ನಾಟಕದ ಬೆಳಗಾವಿಗೂ ಹಬ್ಬಿದ ಹಿಜಾಬ್ ವಿವಾದ!
ಬೆಳಗಾವಿ: ಉಡುಪಿ ಪದವಿ ಪೂರ್ವ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್-ಕೇಸರಿ (Hijab Vs Kesari) ಕಿಡಿ ಇದೀಗ ಉತ್ತರ ದಕ್ಷಿಣವೆನ್ನದೆ ರಾಜ್ಯವ್ಯಾಪಿ ವ್ಯಾಪಿಸಿಕೊಂಡಿದೆ. ಇಂದು ಬೆಳಗಾವಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸುವ ಮೂಲಕ ಕಾಲೇಜಿಗೆ ತೆರಳಿದ್ದಾರೆ. ವಿವಿಧ ಕಾಲೇಜು ಆವರಣದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಜೈ ಶ್ರೀರಾಮ ಘೋಷಣೆ ಕೂಗಿದ್ದಾರೆ. ಬೆಳಗಾವಿ ನಗರದ ಜೈನ್, ಕೆಎಲ್‌ಎಸ್, ಆರ್‌ಪಿಡಿ, ಜ್ಯೋತಿ ಜಿಎಸ್‌ಎಸ್ ಸೇರಿದಂತೆ ಇನ್ನಿತರ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಧರಿಸಿ ಕಾಲೇಜುಗಳಿಗೆ ತೆರಳಿದ್ದಾರೆ.
ಮಂಗಳವಾರದಿಂದ ಬೆಳಗಾವಿಯ ಎಲ್ಲ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬರಬೇಕು ಎಂಬ ಮೇಸೆಜ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈಗ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಕಾಲೇಜು ಆವರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್ ಕೇಸರಿ ವಿವಾದ ಈಗ ಉತ್ತರ ಕರ್ನಾಟಕದ ಬೆಳಗಾವಿಗೂ ಹಬ್ಬಿದೆ. ಇದರ ನಡುವೆಯೇ ಹಿಜಾಬ್ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ (High Court) ನಡೆಯುತ್ತಿದೆ.
Hijab controversy : ಹೈಸ್ಕೂಲು-ಕಾಲೇಜಿಗೆ 3 ದಿನ ರಜೆ ಘೋಷಿಸಿದ ಸಿಎಂ, ಪ್ರಾಥಮಿಕ ಶಾಲೆ ತೆರೆದಿರಲಿದೆ
ಇನ್ನು ಹಿಜಾಬ್ ಬೆಂಬಲಿಸಿ ಬೆಳಗಾವಿಯಲ್ಲಿ AIMIM ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದ್ದರು. ಬುರ್ಖಾ ಧರಿಸಿ ಪ್ರತಿಭಟನೆಗೆ ಇಳಿದ ಮಹಿಳೆಯರು. ದ್ವೇಷ ಬಿಡಿ, ದೇಶ ಉಳಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆದರೂ ನಾವು ಹಿಜಾಬ್ ಧರಿಸಿಯೇ ಸಿದ್ಧ ಎಂದು ಪಟ್ಟುಹಿಡಿದಿದ್ದರೆ, ಅವರು ಹಿಜಾಬ್ ಧರಿಸಿದರೆ ನಾವೂ ಕೇಸರಿ ಶಾಲು ಧರಿಸಿ ಬರುವುದಾಗಿ ಇತರೆ ವಿದ್ಯಾರ್ಥಿಗಳೂ ಹಠ ಹಿಡಿದಿದ್ದರಿಂದ ಕಾಲೇಜು ಆಡಳಿತ ಮಂಡಳಿಗಳು ಪೇಚಿಗೀಡಾಗಿರುವ ಪ್ರಸಂಗಗಳು ಗದಗ, ಹಾವೇರಿ, ಉಡುಪಿ, ಮಡಿಕೇರಿ, ತುಮಕೂರು, ದಾವಣಗೆರೆ, ಮಂಡ್ಯ, ಹಾಸನ, ಶಿವಮೊಗ್ಗ, ರಾಯಚೂರು, ಬೀದರ್ ಸೇರಿದಂತೆ ಅನೇಕ ತಾಲೂಕು, ಜಿಲ್ಲಾ, ಹೋಬಳಿ ಕೇಂದ್ರಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ಸೋಮವಾರ ವರದಿಯಾಗಿವೆ.
ಕೇಸರಿ ವರ್ಸಸ್ ನೀಲಿ ಶಾಲು:
ಹಿಜಾಬ್ ಧರಿಸಿ ಕಾಲೇಜಿಗೆ ಬರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕೇಸರಿ ಶಾಲು ಧರಿಸಿ ಬರುತ್ತಿರುವ ವಿದ್ಯಾರ್ಥಿಗಳ ವಿರುದ್ಧ ನೀಲಿ ಶಾಲು ಧರಿಸಿ ಕಾಲೇಜ್‌ಗೆ ಬರುವ ಮೂಲಕ ಬಹುಜನ ವಿದ್ಯಾರ್ಥಿ ಸಂಘ ಹಾಗೂ ಎನ್‌ಎಸ್‌ಯುಐ ವಿದ್ಯಾರ್ಥಿಗಳು ತಿರುಗೇಟು ನೀಡಿರುವ ಘಟನೆ ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಸೋಮವಾರ ನಡೆದಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಎಂದಿನಂತೆ ಹಿಜಾಬ್ ಧರಿಸಿ ಕಾಲೇಜು ಪ್ರವೇಶಿಸಿದಾಗ ಕೇಸರಿ ಶಾಲು ತೊಟ್ಟು ಕಾಲೇಜು ಪ್ರವೇಶಿಸಲು ಯತ್ನಿಸಿದರು. ಈ ವೇಳೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ತಡೆದು ಸಮವಸ್ತ್ರ ಇದ್ದವರಿಗೆ ಮಾತ್ರ ತರಗತಿಗೆ ತೆರಳಲು ಅನುಮತಿ ನೀಡಿದರು.