'ಪರಿಷತ್‌ಗೆ ನಾಮನಿರ್ದೇಶನ ವೇಳೆ H ವಿಶ್ವನಾಥ್‌ಗೆ ಪ್ರಾತಿನಿಧ್ಯ'

Kannadaprabha News   | Asianet News
Published : Jun 24, 2020, 11:59 AM ISTUpdated : Jun 24, 2020, 12:47 PM IST
'ಪರಿಷತ್‌ಗೆ ನಾಮನಿರ್ದೇಶನ ವೇಳೆ H ವಿಶ್ವನಾಥ್‌ಗೆ ಪ್ರಾತಿನಿಧ್ಯ'

ಸಾರಾಂಶ

ಎಚ್‌. ವಿಶ್ವನಾಥ್‌ಗೆ ವಿಧಾನ ಪರಿಷತ್‌ಗೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಮನವಿ| ಈ ಸಂಬಂಧ ಯಡಿಯೂರಪ್ಪ ಪರಶೀಲನೆ ನಡೆಸುವ ಬಗ್ಗೆ ಭರವಸೆ ನೀಡಿದ್ದಾರೆ: ಭೈರತಿ ಬಸವರಾಜ್‌|

ವಿಜಯಪುರ(ಜೂ.24): ವಿಧಾನ ಪರಿಷತ್‌ ಸ್ಥಾನಗಳಿಗೆ ನಾಮ ನಿರ್ದೇಶನ ವೇಳೆಯಲ್ಲಿ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಕ್ತ ಪ್ರಾತಿನಿಧ್ಯ ನೀಡುವ ವಿಶ್ವಾಸವಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಹೇಳಿದ್ದಾರೆ.

ಮಂಗಳವಾರ ನಗರ ಪ್ರದಕ್ಷಿಣೆ ನಡೆಸಿದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಎಚ್‌. ವಿಶ್ವನಾಥ್‌ ಅವರಿಗೆ ವಿಧಾನ ಪರಿಷತ್‌ಗೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಯಡಿಯೂರಪ್ಪನವರು ಪರಶೀಲನೆ ನಡೆಸುವ ಬಗ್ಗೆ ಭರವಸೆ ನೀಡಿದ್ದಾರೆ.

ವಿಜಯಪುರ: ಮತ್ತೆ ಒಂದೇ ದಿನ 16 ಕೊರೋನಾ ಪಾಸಿಟಿವ್‌ ಕೇಸ್‌

ಈಗಾಗಲೇ ನಾಲ್ಕು ಸ್ಥಾನಗಳಲ್ಲಿ ಎರಡು ಸ್ಥಾನ ಎಂಟಿಬಿ ನಾಗರಾಜ, ಶಂಕರ ಅವರಿಗೆ ನೀಡಲಾಗಿದೆ. ಉಳಿದ ಎರಡು ಸ್ಥಾನಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಿದ್ದಾರೆ. ಮುಂದೆ ನಾಮ ನಿರ್ದೇಶನ ಸಂದರ್ಭದಲ್ಲಿ ಎಚ್‌. ವಿಶ್ವನಾಥ್‌ ಅವರಿಗೆ ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
 

PREV
click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ