ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚಿಗೆ ಮಂಗಳೂರು ಧಗ-ಧಗ: ಕರ್ಫ್ಯೂ ಜಾರಿ

By Suvarna News  |  First Published Dec 19, 2019, 6:05 PM IST

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.  ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.


ಮಂಗಳೂರು, (ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಕಿ ದೇಶಾದ್ಯಂತ ಆಕ್ರೋಶದ ಜ್ವಾಲೆಯಾಗಿ ಉರಿಯುತ್ತಿದೆ. ಅದು ಕರ್ನಾಟಕ್ಕೂ ವ್ಯಾಪಿಸಿದೆ.

ಅದರಲ್ಲೂ ಸೂಕ್ಷ್ಮ ಪ್ರದೇಶವಾದ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ಕೈಮೀರಿದೆ.. ಸೆಕ್ಷನ್ 144 ಜಾರಿಯಲ್ಲಿದ್ರೂ ಉದ್ರಿಕ್ತರು ಗುಂಪು-ಗುಂಪಾಗಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಾಲದಕ್ಕೆ ಕಲ್ಲು ತೂರಾಟ ನಡೆಸಿದ್ದರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನೆಕಾರರನ್ನು ಚದುರಿಸುವ ಕೆಲಸ ಮಾಡಿದ್ದಾರೆ.

Tap to resize

Latest Videos

undefined

ಮಂಗಳೂರು: ಪೌರತ್ವ ಕಿಚ್ಚು ನಂದಿಸಲು ಗಾಳಿಯಲ್ಲಿ ಗುಂಡು

ಆದರೂ ಸಹ ಪ್ರತಿಭಟನೆ ನಿಯಂತ್ರಣಕ್ಕೆ ಬಾರದಿರಿರುವುದರಿಂದ ಮಂಗಳೂರಿನ 5 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮುಂಜಾಗೃತವಾಗಿ  ಕರ್ಫ್ಯೂ ಜಾರಿ ಮಾಡಲಾಗಿದೆ. 

ಈಗಿನಿಂದಲೇ ಮಂಗಳೂರು ಬಂದರು, ಪಾಂಡೇಶ್ವರ, ಬರ್ಕೆ, ಉರ್ವ,  ಕದ್ರಿ ಠಾಣಾ ವ್ಯಾಪ್ತಿಯಲ್ಲಿ ನಾಳೆ (ಶುಕ್ರವಾರ) ಮಧ್ಯರಾತ್ರಿವರೆಗೂ ಕರ್ಫ್ಯೂ ಇರಲಿದೆ.

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ನಗರದ ಸ್ಟೇಟ್ ಬ್ಯಾಂಕ್ ಬಳಿ ನಿಷೇಧಾಜ್ಞೆ ಉಲ್ಲಂಘಿಸಿ ಜಮಾಯಿಸಿದ ಗುಂಪೊಂದರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಇನ್ನು ಕೆಲ ಕಿಡಿಗೇಡಿಗಳು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

click me!