ಶಾಲಾ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನಿಗೆ ಸ್ಥಳಿಯರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ನ.26): ಶಾಲಾ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಿದ ಕ್ಯಾಬ್ ಚಾಲಕನಿಗೆ ಸ್ಥಳಿಯರು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮಸ್ಥರಿಂದ ಚಾಲಕ ರಾಜಪ್ಪನನ್ನ ಕಂಬಕ್ಕೆ ಕಟ್ಟಿ ಥಳಿತ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಜಪ್ಪ ಎಂಬುವರು ಕಡೂರಿನಿಂದ ಶಿಕ್ಷಕರನ್ನ ತನ್ನ ವ್ಯಾನಿನಲ್ಲಿ ಕಡೂರಿನಿಂದ ಸಿದ್ದರಹಳ್ಳಿಗೆ ಕರೆದುಕೊಂಡು ಬಂದು ಸಂಜೆ ಮತ್ತೆ ಕರೆದೊಯ್ಯುತ್ತಿದ್ದರು. ಹೀಗೆ ಬೆಳಗ್ಗೆಯಿಂದ ಸಂಜೆವರೆಗೂ ಶಾಲೆ ಬಳಿಯೇ ಇರುತ್ತಿದ್ದ ರಾಜಪ್ಪ ಅಲ್ಲಿನ ವಿಧ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದರು.
Chikkamagaluru: ಫಾರೆಸ್ಟ್ ಆಫೀಸ್ ಪುಡಿ ಪುಡಿ: ಕಳ್ಳಬೇಟೆ ನಿಗ್ರಹ ಶಿಬಿರವನ್ನ ಧ್ವಂಸ ಮಾಡಿದ ಜನ
ಶಾಲೆಯೊಳಗೆ, ಬಾತ್ ರೂಮಿನಲ್ಲಿ ಮಕ್ಕಳ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ವಿದ್ಯಾರ್ಥಿನಿ ಶಾಲೆಯ ಶಿಕ್ಷಕರ ಬಳಿ ಹೇಳಿದ್ದಾರೆ. ಆಗ ಅವರು ನಿಮ್ಮ ಅಪ್ಪ-ಅಮ್ಮನಿಗೆ ತಿಳಿಸುವಂತೆ ಹೇಳಿದ್ದರು. ಮಕ್ಕಳು ಹೆತ್ತವರಿಗೆ ಹೇಳಿದ ಬಳಿಕ ಪೋಷಕರು ಎಸ್.ಡಿ.ಎಂ.ಸಿ. ಅಧ್ಯಕ್ಷರ ಗಮನಕ್ಕೆ ತಂದಿದ್ದಾರೆ.
ಆಗ ಶಾಲಾ ಆಡಳಿತ ಮಂಡಳಿ ಕ್ಯಾಬ್ ಚಾಲಕ ರಾಜಪ್ಪನನ್ನ ಕರೆಸಿ ಕೇಳಿದಾಗ ಆರೋಪಿ ರಾಜಪ್ಪ ತನ್ನ ತಪ್ಪನ್ನ ಒಪ್ಪಿಕೊಂಡಿದ್ದಾರೆ. ಕೂಡಲೇ ರೊಚ್ಚಿಗೆದ್ದ ಸ್ಥಳಿಯರು ರಾಜಪ್ಪನನ್ನ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕಂಬಕ್ಕೆ ಕಟ್ಟಿ ಭಾರಿಸಿದ್ದಾರೆ. ನೊಂದವರು ಈ ಬಗ್ಗೆ ದೂರು ನೀಡಿದ್ದು ಪೊಲೀಸರು ಆತನನ್ನ ಬಂಧಿಸಿದ್ದಾರೆ. ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.