ನೀರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ತಕ್ಷಣ ಜಲಮಂಡಳಿ ಏಮಜಿನಿಯರ್‌ಗಳೊಂದಿಗೆ ಸಮನ್ವಯತೆ ಸಾಧಿಸಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕಾಗಿದೆ. ನೋಡಲ್ ಅಧಿಕಾರಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್ ಅವರಿಗೆ ವಹಿಸಿರುವುದಾಗಿದೆ ತಿಳಿಸಿದ ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು
ಬೆಂಗಳೂರು(ಮಾ.09): ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದಲ್ಲಿ ಅದರ ನಿವಾರಣೆಗಾಗಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ 14 ವಾರ್ಡ್‌ಗಳಿಗೆ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ನೀರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ತಕ್ಷಣ ಜಲಮಂಡಳಿ ಏಮಜಿನಿಯರ್‌ಗಳೊಂದಿಗೆ ಸಮನ್ವಯತೆ ಸಾಧಿಸಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಬೇಕಾಗಿದೆ.
ನೋಡಲ್ ಅಧಿಕಾರಿಗಳ ಮೇಲುಸ್ತುವಾರಿ ನೋಡಿಕೊಳ್ಳಲು ಮುಖ್ಯ ಅಭಿಯಂತರ ರಾಘವೇಂದ್ರ ಪ್ರಸಾದ್ ಅವರಿಗೆ ವಹಿಸಿರುವುದಾಗಿದೆ ಎಂದು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ತಿಳಿಸಲಾಗಿದೆ.