ಲೋಕಸಭಾ ಚುನಾವಣೆ 2024: ಲಗ್ನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರ ಪ್ರಚಾರ

Published : Jan 30, 2024, 10:18 PM IST
ಲೋಕಸಭಾ ಚುನಾವಣೆ 2024: ಲಗ್ನ ಪತ್ರಿಕೆಯಲ್ಲಿ ಪ್ರಧಾನಿ ಮೋದಿ ಪರ ಪ್ರಚಾರ

ಸಾರಾಂಶ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ವಧುವಿನ ಕಡೆಯವರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆ ಮೂಲಕ ಚುನಾವಣೆ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ.

ರಬಕವಿ-ಬನಹಟ್ಟಿ(ಜ.30):  ಮದುವೆ ಆಮಂತ್ರಣ ಪತ್ರಿಕೆಯಲ್ಲಿ ನರೇಂದ್ರ ಮೋದಿಯವರ ಭಾವಚಿತ್ರ ಸಹಿತ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಗೆ ಮತ ನೀಡಿದರೆ ನನ್ನ ಮದುವೆಗೆ ನಿಜವಾದ ಉಡುಗೊರೆ ಎಂದು ಮುದ್ರಿಸುವ ಮೂಲಕ ಮೋದಿ ಅಭಿಮಾನಿಗಳು ಸದ್ದಿಲ್ಲದೆ ಪ್ರಚಾರ ನಡೆಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ವಧುವಿನ ಕಡೆಯವರು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚಿಸಿ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ. ಲಗ್ನ ಪತ್ರಿಕೆ ಮೂಲಕ ಚುನಾವಣೆ ಪ್ರಚಾರ ಬಲು ಜೋರಾಗಿ ನಡೆಯುತ್ತಿದೆ.

ಜಗದೀಶ ಶೆಟ್ಟರ್‌ಗೆ ಯಾವುದೋ ಭಯ ಇರಬೇಕು: ಸಚಿವ ತಿಮ್ಮಾಪುರ

ಬನಹಟ್ಟಿಯ ಪ್ರಭು ಕರಲಟ್ಟಿ ಪ್ರಧಾನಿ ಮೋದಿಯ ಅಪ್ಪಟ ಅಭಿಮಾನಿ. ಹೀಗಾಗಿ ಪುತ್ರಿಯ ವಿವಾಹ ಆಮಂತ್ರಣದಲ್ಲಿ ಮೋದಿ ಭಾವಚಿತ್ರ ಮುದ್ರಿಸಿ ಮೋದಿಯನ್ನು ಮತ್ತೊಮ್ಮೆ ಬೆಂಬಲಿಸಬೇಕೆಂದು ಸಂದೇಶ ಸಾರಿದ್ದಾರೆ. ಜ.೨೮ರಂದು ವಿವಾಹ ನಡೆದಿದ್ದು, ಗಂಡಿನ ಮನೆಯವರನ್ನೂ ಒಪ್ಪಿಸಿ ಆಮಂತ್ರಣ ಪತ್ರಿಕೆಯಲ್ಲಿ ದೇಶಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿ-೨೦೨೪ ಎಂದು ಕಮಲ ಚಿಹ್ನೆಯ ಮೂಲಕ ಟ್ಯಾಗ್‌ ಲೈನ್ ಜನರನ್ನು ಆಕರ್ಷಿಸುತ್ತಿದೆ. ಅಂದಾಜು ೨ ಸಾವಿರಕ್ಕೂ ಅಧಿಕ ಲಗ್ನ ಪತ್ರಿಕೆಗಳನ್ನು ಮುದ್ರಣ ಮಾಡಿಸಿದ್ದಾರೆ.

PREV
Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC