ಡ್ಯಾಂ ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾಲುವೆ : ಸುತ್ತಲ ಪ್ರದೇಶ ಜಲಾವೃತ

By Web Desk  |  First Published Aug 13, 2019, 11:54 AM IST

ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದ ತುಂಗಭದ್ರಾ ಡ್ಯಾಂ ನಲ್ಲಿ ನೀರಿನ ರಭಸ ಹೆಚ್ಚಾಗಿದ್ದು, ಕಾಲುವೆ ಕೊಚ್ಚಿ ಹೋಗಿದ್ದು ಸುತ್ತಲಿನ ಪ್ರದೇಶಗಳಲ್ಲಿ ಆತಂಕ ಮನೆ ಮಾಡಿದೆ. 


ಕೊಪ್ಪಳ [ಆ.13] : ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನೀರಿನ ರಭಸ ಹೆಚ್ಚಾಗಿದೆ.  ಕೊಪ್ಪಳ ತಾಲೂಕಿನಲ್ಲಿರುವ ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಯ ಉಪ ಕಾಲುವೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. 

ತುಂಗಭದ್ರಾ ಪಕ್ಕದಲ್ಲೇ ಇರುವ ಪಂಪಾವನದ ಬಳಿ ಇರುವ ಉಪ ಕಾಲುವೆ ಗೇಟ್ ಕೊಚ್ಚಿ ಹೋದ ಹಿನ್ನೆಲೆ ಪಂಪಾವನದ ಅರ್ಧ ಭಾಗ ನೀರು ತುಂಬಿಕೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಪಾತ್ರದ ಪ್ರದೇಶಗಳಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದೆ.

Latest Videos

undefined

ಕರ್ನಾಟಕ ಪ್ರವಾಃದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇದರಿಂದ ಅಪಾರ ಪ್ರಮಾಣದಲ್ಲಿ ನೀರು ಭೋರ್ಗರೆಯುತ್ತಿದೆ.‌ ನೀರು ಹರಿವು ರಭಸವಾಗಿರುವ ಹಿನ್ನೆಲೆ ಸುತ್ತಲಿನ ಜನರಲ್ಲಿ ಆತಂಕ ಮನೆ ಮಾಡಿದೆ. ಪಂಪಾವನದ ಪಕ್ಕದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನೀರಾವರಿ ತಜ್ಞರು ಸೇರಿ ಹಲವು ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟು ಪರಿಶೀಲನೆ ನಡೆಸುತ್ತಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

click me!