ಸರ್ಕಾರದ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದುಪಡಿಸಿ: ಎಸ್.ಆರ್.ಪಾಟೀಲ್‌

By Govindaraj S  |  First Published Aug 5, 2024, 5:41 PM IST

ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಅಧಿಕಾರಿಗಳು ಕಾಳಜಿಪೂರ್ವಕವಾಗಿ ಅನುಷ್ಠಾನಗೊಳಿಸಬೇಕು. ಅನ್ನಭಾಗ್ಯ ಯೋಜನೆಯಡಿ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು. 
 


ವರದಿ: ಪರಮೇಶ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ

ಧಾರವಾಡ (ಆ.05): ರಾಜ್ಯ ಸರಕಾರದ ಜನಪರ ಯೋಜನೆಗಳನ್ನು ಅಧಿಕಾರಿಗಳು ಕಾಳಜಿಪೂರ್ವಕವಾಗಿ ಅನುಷ್ಠಾನಗೊಳಿಸಬೇಕು. ಅನ್ನಭಾಗ್ಯ ಯೋಜನೆಯಡಿ ನಿಯಮ ಪಾಲಿಸದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತಿಯ ಸಭಾಭವನದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಸಾಂಸ್ಥೀಕ ಕಾರ್ಯ ವಿಧಾನಗಳು ಹಾಗೂ ಸದರಿ ಯೋಜನೆಗಳ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ, ಮಾತನಾಡಿದರು. 

Latest Videos

undefined

ನಮ್ಮ ರಾಜ್ಯ ಸರಕಾರ ದೇಶದ ಇತರ ರಾಜ್ಯಗಳಿಗೆ ಮಾದರಿ ಆಗುವ ಯೋಜನೆಗಳನ್ನು ಜಾರಿ ಮಾಡಿದೆ. ಜಿಲ್ಲೆಯ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 5 ರಿಂದ 6 ಸಾವಿರ ರೂಗಳ ಮೊತ್ತದ ಆರ್ಥಿಕ ಸಹಾಯ ಮಾಡುತ್ತಿದೆ.ಅಧಿಕಾರಿಗಳು ಅರ್ಹರಿಗೆ ಯೋಜನೆಯ ಲಾಭ ತಲುಪುವಂತೆ ಮಾಡಬೇಕೆಂದು ಅವರು ತಿಳಿಸಿದರು. ಶಕ್ತಿ ಯೋಜನೆ ಜಾರಿಯಾದ ಜೂನ್ 11, 2023 ರಿಂದ ಜುಲೈ 29, 2024 ರ ವರೆಗೆ 13 ಕೋಟಿಗೂ ಅಧಿಕ ಮಹಿಳೆಯರು ಶಕ್ತಿ ಯೋಜನೆಯಲ್ಲಿ ಪ್ರಯಾಣಿಸಿದ್ದಾರೆ ಇದರಿಂದ 275 ಕೋಟಿಗೂ ಅಧಿಕ ಆದಾಯ ಬಂದಿದೆ. ಪ್ರತಿದಿನ ಸಂಸ್ಥೆಯ 993 ವಾಹನಗಳಲ್ಲಿ ಅಂದಾಜು 3.14 ಲಕ್ಷಕ್ಕೂ ಅಧಿಕ ಮಹಿಳಾ ಪ್ರಯಾಣಿಕರು ಮತ್ತು 2.64 ಲಕ್ಷಕ್ಕೂ ಅಧಿಕ ಪುರುಷ ಪ್ರಯಾಣಿಕರು ಸೇರಿ ಒಟ್ಟು ಸುಮಾರು 5.77 ಲಕ್ಷ ಪ್ರಯಾಣಿಕರು ಬಸ್‍ಗಳಲ್ಲಿ ಸಂಚರಿಸುತ್ತಾರೆ.

ಒಳಮೀಸಲಾತಿಯನ್ನ ಜಾರಿಗೊಳಿಸದಿದ್ದರೆ ಕಾವೇರಿಯಿಂದ-ಭೀಮಾ ನದಿಯವರೆಗೆ ಜನಾಂದೋಲನ‌: ಸಂಸದ ಕಾರಜೋಳ

ಒಟ್ಟು ರೂ.1.37 ಕೋಟಿ ಆದಾಯ ಪ್ರತಿದಿನ ಬರುತ್ತಿದೆ ಎಂದು ಸಾರಿಗೆ ಇಲಾಖೆ ವರದಿ ನೀಡಿದೆ ಎಂದು ಅಧ್ಯಕ್ಷ  ಎಸ್.ಆರ್.ಪಾಟೀಲ ತಿಳಿಸಿದರು. ಗೃಹ ಜ್ಯೋತಿ ಯೋಜನೆಗೆ ಒಟ್ಟು 4,83,900 ನೋಂದಣಿ ಆಗಿದ್ದು, ಶೇ. 87.29 ರಷ್ಟು ಸಾಧನೆ ಆಗಿದೆ. ಅನ್ನಭಾಗ್ಯ ಯೋಜನೆಯಲ್ಲಿ 3,49,828 ಬಿಪಿಎಲ್ ಪಡಿತರ ಚೀಟಿದಾರರಿದ್ದು ಅನ್ನಭಾಗ್ಯ ಯೋಜನೆಯಡಿ, ಜೂನ 2024 ರವರೆಗೆ 235.457 ಕೋಟಿ ನಗದು ವರ್ಗಾವಣೆ ಆಗಿದೆ. ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದ 8,344 ಜನರಿಗೆ ನಗದು ವರ್ಗಾವಣೆಗೆ ಕ್ರಮ ವಹಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.  ಗೃಹಲಕ್ಷ್ಮೀ ಯೋಜನೆಯಡಿ 3,66,734 ಜನರು ನೋಂದಣಿ ಆಗಿದ್ದು, ಆಗಸ್ಟ್ 2023 ರಿಂದ ಮೇ 2024 ರವರೆಗೆ 31,54,147 ಜನರಿಗೆ ರೂ. 630,82,94,000 ರೂ.ಗಳನ್ನು ಜಮೆ ಮಾಡಲಾಗಿದೆ.

ಅರ್ಹರು ಅರ್ಜಿ ಸಲ್ಲಿಸಲು ಸೇವಾ ಸಿಂಧು ಆನ್ ಲೈನದಲ್ಲಿ ತೊಂದರೆ ಆಗುತ್ತಿದ್ದು, ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಬೇಗನೆ ಸರಿ ಪಡಿಸುವಂತೆ ಅಧ್ಯಕ್ಷರು ತಿಳಿಸಿದರು.  ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,422 ಪುರುಷ ಹಾಗೂ 1808 ಮಹಿಳೆಯರು ಸೇರಿ 3,230 ಜನ ಪಲಾನುಭವಿಗಳಿಗೆ ಸಹಾಯಧನ ವಿತರಿಸಲಾಗಿದೆ. ಬಾಕಿ ಇರುವ 1,351 ಜನ ದಾಖಲೆಗಳ ಪರಿಶೀಲನೆ ಪ್ರಗತಿಯಲ್ಲಿದ್ದು, ಅವರಿಗೂ ಶೀಘ್ರದಲ್ಲಿ ಸಹಾಯಧನ ವಿತರಿಸಲು ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.  ಗ್ಯಾರಂಟಿ ಅನುಷ್ಠಾನದ ತಾಲೂಕು ಸಮಿತಿಗಳು ನಿರಂತರ ಸಭೆಗಳ ಮೂಲಕ ತಾಲೂಕು ಮಟ್ಟದಲ್ಲಿ ಗ್ಯಾರಂಟಿಗಳ ಪ್ರಗತಿ ಪರಿಶೀಲನೆ ಮಾಡಬೇಕು. 

ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ-ಜೆಡಿಎಸ್‌ನವರಿಂದ ದ್ವೇಷದ ರಾಜಕಾರಣ: ಸಚಿವ ಕೃಷ್ಣ ಬೈರೇಗೌಡ

ಪಲಾನುಭವಿಗಳ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆ ಹರಿಸಬೇಕೆಂದು ಅಧ್ಯಕ್ಷ ಎಸ್.ಆರ್.ಪಾಟೀಲ ಹೇಳಿದರು. ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಅವರು ಮಾತನಾಡಿದರು.  ಉಪಕಾರ್ಯದರ್ಶಿ ದೀಪಕ ಮಡಿವಾಳರ ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಸಮಿತಿ, ಸದಸ್ಯರು, ತಾಲೂಕು ಸಮಿತಿ ಅಧ್ಯಕ್ಷರು ಹಾಗೂ ಹೆಸ್ಕಾಂ, ಸಾರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ ಅಭಿವೃದ್ಧಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು, ಪ್ರಗತಿ ವರದಿ ಸಲ್ಲಿಸಿದರು.

click me!