ಜು.18 ಮತ್ತು 25ರಂದು ವಿವಿಧ ರೈಲುಗಳ ಸಂಚಾರ ರದ್ದು

By Kannadaprabha News  |  First Published Jul 15, 2024, 12:51 PM IST

ನಿಟ್ಟೂರು ಮತ್ತು ಸಂಪಿಗೆ ರೋಡ್‌ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (62) ಕಾಮಗಾರಿ ಹಿನ್ನೆಲೆಯಲ್ಲಿ ಜು.18 ಮತ್ತು 25ರಂದು ವಿವಿಧ ರೈಲುಗಳ ಸಂಚಾರ ರದ್ದಾಗಿದೆ. ಇನ್ನು ಹಲವು ರೈಲುಗಳ ಸಂಚಾರ ಭಾಗಶಃ ರದ್ದಾಗಿದೆ.


  ಬೆಂಗಳೂರು :  ನಿಟ್ಟೂರು ಮತ್ತು ಸಂಪಿಗೆ ರೋಡ್‌ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ (62) ಕಾಮಗಾರಿ ಹಿನ್ನೆಲೆಯಲ್ಲಿ ಜು.18 ಮತ್ತು 25ರಂದು ವಿವಿಧ ರೈಲುಗಳ ಸಂಚಾರ ರದ್ದಾಗಿದೆ. ಇನ್ನು ಹಲವು ರೈಲುಗಳ ಸಂಚಾರ ಭಾಗಶಃ ರದ್ದಾಗಿದೆ.

ಸಂಚಾರ ರದ್ದು:

Tap to resize

Latest Videos

ತುಮಕೂರು-ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ-ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು (06576), ಕೆಎಸ್ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳ ಸಂಚಾರ ಜುಲೈ 18 ಮತ್ತು 25 ರಂದು ರದ್ದಾಗಿದೆ.

ಭಾಗಶಃ ರದ್ದು:

ಜುಲೈ 18 ಮತ್ತು 25ರಂದು ಕೆಎಸ್ಆರ್ ಬೆಂಗಳೂರು-ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ಗಳನ್ನು ಹಿರೇಹಳ್ಳಿ-ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು (20652) ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಮಾರ್ಗ ಬದಲಾವಣೆ:

ಜುಲೈ 17, 24 ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು (17310) ವಾಸ್ಕೋ ಡ ಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಆಗುವುದಿಲ್ಲ.

ಜುಲೈ18, 25 ರಂದು ಹೊರಡುವ ಮೈಸೂರು-ವಾರಣಾಸಿ (22687), ಯಶವಂತಪುರ-ಜೈಪುರ (82653) ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಆಗುವುದಿಲ್ಲ. ಮೈಸೂರು-ಬೆಳಗಾವಿ (17326) ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಆಗುವುದಿಲ್ಲ.

ಇನ್ನು, ಮೈಸೂರು-ಉದಯಪುರ ಸಿಟಿ (19668) ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮೂಲಕ ಸಂಚರಿಸಲಿದೆ.

ರೈಲುಗಳ ನಿಯಂತ್ರಣ

ಜುಲೈ 16, 23ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ಬಿಕಾನೇರ್-ಯಶವಂತಪುರ (16588) ರೈಲನ್ನು ಮಾರ್ಗದಲ್ಲಿ ಎರಡೂವರೆ ಗಂಟೆ, ಜುಲೈ 18, 25 ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ (12629) ರೈಲು 50 ನಿಮಿಷ, ಕೆಎಸ್ಆರ್ ಬೆಂಗಳೂರು-ತಾಳಗುಪ್ಪ (20651) ರೈಲು 10 ನಿಮಿಷ, ಬೆಳಗಾವಿ-ಮೈಸೂರು (17325) ರೈಲು 55 ನಿಮಿಷ, ಚಾಮರಾಜನಗರ-ತುಮಕೂರು (07345) ರೈಲನ್ನು ಎರಡು ಗಂಟೆ ನಿಯಂತ್ರಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

click me!