ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ, ಫಾರ್ಮಸಿ ಕಾಲೇಜು ಪ್ರಾರಂಭ: ಡಾ.ಹೆಗ್ಗಡೆ

By Kannadaprabha News  |  First Published Oct 25, 2023, 8:30 AM IST

ಧಾರವಾಡದಲ್ಲಿರುವ ಎಸ್‌ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯ ದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಉನ್ನತ ಶ್ರೇಣಿ ಹೊಂದಿವೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ


ಬೆಳ್ತಂಗಡಿ(ಅ.25):  ಮೈಸೂರಿನಲ್ಲಿ ವಿಜ್ಞಾನ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಪಟ್ಟ ಹೊಸ ವಸ್ತುಸಂಗ್ರಹಾಲಯ, ಉಡುಪಿಯಲ್ಲಿ ಆಯುರ್ವೇದ ಕಾಲೇಜಿಗೆ ನೂತನ ಕಟ್ಟಡ ನಿರ್ಮಾಣ, ಧಾರವಾಡದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಮತ್ತು ಫಾರ್ಮಸಿ ಕಾಲೇಜು ಸದ್ಯದಲ್ಲೇ ಪ್ರಾರಂಭವಾಗಲಿವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಂಗಳವಾರ ಪಟ್ಟಾಭಿಷೇಕದ 56ನೇ ವರ್ಧಂತ್ಯುತ್ಸವದ ಸಮಾರಂಭದಲ್ಲಿ ಮಾತನಾಡಿ ಹೊಸ ಯೋಜನೆಗಳನ್ನು ಪ್ರಕಟಿಸಿದರು.

ಧರ್ಮಸ್ಥಳದಲ್ಲಿ ಅನ್ನದಾನ, ವಿದ್ಯಾದಾನ, ಔಷಧಿದಾನ ಮತ್ತು ಅಭಯದಾನ ನಿತ್ಯೋತ್ಸವವಾಗಿದ್ದು ಇದರ ಜೊತೆಗೆ ಹೊಸ ಸೇವಾಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಧಾರವಾಡದಲ್ಲಿರುವ ಎಸ್‌ಡಿಎಂ ವೈದ್ಯಕೀಯ ವಿಶ್ವವಿದ್ಯಾಲಯ ದೇಶದಲ್ಲೇ ಶ್ರೇಷ್ಠ ವಿಶ್ವವಿದ್ಯಾಲಯ ಎಂಬ ಮಾನ್ಯತೆ ಪಡೆದಿದೆ. ಅಲ್ಲಿನ ವೈದ್ಯಕೀಯ ಕಾಲೇಜು ದೇಶದಲ್ಲೇ ಒಂಭತ್ತನೇ ಸ್ಥಾನದಲ್ಲಿದೆ. ನರ್ಸಿಂಗ್ ಕಾಲೇಜು, ಫಿಸಿಯೋಥೆರಪಿ ಕಾಲೇಜು ಮತ್ತು ಎಂಜಿನಿಯರಿಂಗ್ ಕಾಲೇಜು ಕೂಡಾ ನಿರ್ವಹಣೆ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶದಲ್ಲಿ ಉನ್ನತ ಶ್ರೇಣಿ ಹೊಂದಿವೆ ಎಂದರು.

Tap to resize

Latest Videos

ನೀರು ಅಮೂಲ್ಯವಾದುದು, ರೈತರ ನಿಜವಾದ ಜೀವನಾಡಿ: ವೀರೇಂದ್ರ ಹೆಗ್ಗಡೆ

ತಮ್ಮ ಸಂಸದರ ನಿಧಿಯಿಂದ ಎರಡೂವರೆ ಕೋಟಿ ರು. ಅನುದಾನವನ್ನು ಬೀದರ್ ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ. ಹಾಲು ಮತ್ತು ಹಣ್ಣು ನಿತ್ಯ ಆದಾಯ ಕೊಡುವ ಮೂಲಗಳಾಗಿದ್ದು ಇವುಗಳ ಉತ್ಪಾದನೆಗೆ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದರು.

ಊರಿನ ನಾಗರಿಕರು, ಅಭಿಮಾನಿಗಳು ಮತ್ತು ಭಕ್ತರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ. ಅಭಿಮಾನಿಗಳು ಹಣ್ಣು-ಹಂಪಲು, ಹೂವಿನ ಹಾರ ಅರ್ಪಿಸಿ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡಿದರು. ಹೆಗ್ಗಡೆಯವರು ಎಲ್ಲರ ಯೋಗ-ಕ್ಷೇಮ ವಿಚಾರಿಸಿ ಶುಭ ಹಾರೈಸಿದರು.

ಸೌಜನ್ಯ ಕೇಸ್‌ ಮರುತನಿಖೆಗಾಗಿ ವೀರೇಂದ್ರ ಹೆಗ್ಗಡೆ ಕುಟುಂಬ ಹೈಕೋರ್ಟ್‌ಗೆ

ಧರ್ಮಸ್ಥಳದಲ್ಲಿ ಮೂರು ಹೊಸ ಕಲ್ಯಾಣಮಂಟಪಗಳನ್ನು ನಿರ್ಮಿಸಲಾಗುವುದು. ರಜತಾದ್ರಿ ವಸತಿಗೃಹಕ್ಕೆ 200 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗುವುದು ಎಂದು ಹೆಗ್ಗಡೆಯವರು ಪ್ರಕಟಿಸಿದರು.

ಶ್ರೀ ಮಂಜುನಾಥ ಸ್ವಾಮಿ ಅನುಗ್ರಹ, ಕಾರ್ಯಕರ್ತರು ಮತ್ತು ಸಿಬ್ಬಂದಿಯ ನಿಷ್ಠೆ ಮತ್ತು ಕಾರ್ಯತತ್ಪರತೆಯಿಂದ ತನ್ನ ಎಲ್ಲಾ ಯೋಜನೆಗಳು ಮತ್ತು ಯೋಚನೆಗಳು ಯಶಸ್ವಿಯಾಗುತ್ತಿದೆ ಎಂದು ಸಂತೋಷ ಮತ್ತು ತೃಪ್ತಿ ವ್ಯಕ್ತಪಡಿಸಿದರು.
ಊರಿನ ನಾಗರಿಕರು, ಅಭಿಮಾನಿಗಳು ಮತ್ತು ಭಕ್ತರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ. ಅಭಿಮಾನಿಗಳು ಹಣ್ಣು-ಹಂಪಲು, ಹೂವಿನ ಹಾರ ಅರ್ಪಿಸಿ ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡಿದರು.

click me!