ಗೋವಾ ಪ್ರವಾಸಕ್ಕೆಂದು ಹೋದವರು ಮಸಣ ಸೇರಿದರು
ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಅಪಘಾತ
ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದ ಕಾರಿನಲ್ಲಿದ್ದ ನಾಲ್ವರು ಸಾವು
ಮೂರು ಪ್ರತ್ಯೇಕ ಅಪಘಾತ- ಐವರು ಸಾವು
ಉತ್ತರಕನ್ನಡ (ಜ.1): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಡುವೆ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ.
ಹೊಸ ವರ್ಷಾಷರಣೆ ಹಿನ್ನೆಲೆಯಲ್ಲಿ ತಮಿಳುನಾಡಿನ ಐವರು ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಹೊಸವರ್ಷಾಚರಣೆ ಮುಗಿಸಿ ಸಲ್ಲಿಂದ ರಾಷ್ಟ್ರೀಯ ಹೆದ್ದಾರಿಯ 66 ಮಾರ್ಗವಾಗಿ ತಮಿಳುನಾಡಿಗೆ ಮರಳುತ್ತಿದ್ದಾಗ ಅಂಕೋಲಾ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ವೇಗವಾಗಿ ಬಂದು ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನೊಳಗೆ ಇದ್ದವರ ದೇಹವೂ ನಜ್ಜುಗುಜ್ಜಾಗಿತ್ತು. ಕಾರಿನ ಹಿಂಭಾಗದಲ್ಲಿ ಹೆಚ್ಚಿನ ಹೊಡೆತ ಬಿದ್ದಿದ್ದು, ಹಿಂಬದಿಯಲ್ಲಿದ್ದವರು ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು.
ಹೊಸ ವರ್ಷದಂದು ಜವರಾಯನ ಅಟ್ಟಹಾಸಕ್ಕೆ ಇಬ್ಬರು ಯುವಕರು ಬಲಿ..!
ಆಸ್ಪತ್ರೆಯಲ್ಲಿ ಒಬ್ಬ ಗಾಯಾಳು ಸಾವು: ಇನ್ನು ಅಪಘಾತ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹತ್ತಿರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆ ವೇಳೆ ಚಿಕಿತ್ಸೆ ಫಲಕಾರಿ ಆಗದೇ ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಒಟ್ಟಾರೆ ಅಪಘಾತ ಘಟನೆಯಿಂದ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಬಗ್ಗೆ ವಯಸ್ಸು, ಹೆಸರು ಸೇರಿ ಇನ್ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡ ಇನ್ನೊಬ್ಬ ವ್ಯಕ್ತಿಯ ಚೇತರಿಕೆ ನಂತರ ಘಟನೆಯ ಬಗ್ಗೆ ಹಾಗೂ ಸಾವನ್ನಪ್ಪಿದವರ ಬಗ್ಗೆ ಸಂಪೂರ್ಣ ಚಿತ್ರಣ ಲಭ್ಯವಾಗಲಿದೆ. ಕಾರು ಅಪಘಾತ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಯಂತ್ರಣ ತಪ್ಪಿ ಬಸ್ ಗೆ ಗುದ್ದಿದ ಕಾರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸಾವು- ಓರ್ವನ ಸ್ಥಿತಿ ಗಂಭೀರವಾಗಿದೆ. ಗೋವಾದಲ್ಲಿ ಹೊಸ ವರ್ಷ ಸಂಭ್ರಮ ಮುಗಿಸಿ ಗೋಕರ್ಣದತ್ತ ತೆರಳುತ್ತಿದ್ದರು. ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಅರುಣ್ ಪಾಂಡ್ಯನ್, ನಿಪುಲ್, ಮಹಮ್ಮದ್ ಬಿಲಾಲ್, ಶೇಕರನ್ ಸಾವನ್ನಪ್ಪಿದ್ದಾರೆ. ಬಸ್ ತದಡಿಯಿಂದ ಹುಬ್ಬಳ್ಳಿ ಕಡೆ ಹೋಗುತ್ತಿತ್ತು. ವೇಗದಲ್ಲಿದ್ದ ಕಾರು ರಸ್ತೆ ಡಿವೈಡರ್ ದಾಟಿ ಬಸ್ ಗೆ ಗುದ್ದಿತ್ತು. ರಸ್ತೆ ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜು ಆಗಿತ್ತು. ಅಂಕೋಲಾ ಪೋಲಿಸರಿಂದ ಪರಿಶೀಲನೆ, ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ತೆರವು ಕಾರ್ಯ ಕೈಗೊಂಡ ಅಂಕೋಲಾ ಪೋಲಿಸರು, ತನಿಖೆ ಮುಂದುವರೆಸಿದ್ದಾರೆ.
Mandya: ಧನದಾಹಿ ಪತಿಯ ವರದಕ್ಷಿಣೆ ಕಿರುಕುಳಕ್ಕೆ ಗರ್ಭಿಣಿ ಪತ್ನಿ ಬಲಿ?..! ಕೊಲೆ ಶಂಕೆ
ಬೆಂಗಳೂರು: ಬೆಂಗಳೂರು ನಗರದ ಮೈಸೂರು ರಸ್ತೆಯ ಡಿಮಾರ್ಟ್ ಬಳಿ ಭೀಕರ ರಸ್ತೆ ಅಪಘಾತ ಉಂಟಾಗಿದ್ದು, ಹಿಟ್ ಅಂಡ್ ರನ್ ನಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿತ್ತು. ಮೃತ ಬೈಕ್ ಸವಾರನನ್ನು ದೇವರಾಜ್ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಕೆ.ಆರ್ ಮಾರ್ಕೆಟ್ ಗೆ ಹೋಗುವಾಗ ದೇವರಾಜ್ ಹಾಗೂ ಆತನ ಸ್ನೇಹಿತ ಇದ್ದರು. ಅಪಘಾತದಿಂದ ದೇವರಾಜ್ ಸಾವನ್ನಪ್ಪಿದ್ದು ಆತನ ಸ್ಥಿತಿಯೂ ಗಂಭೀರವಾಗಿದೆ. ಕೂಡಲೇ ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೆರೆಹಳ್ಳಿ ನಿವಾಸಿಯಾಗಿರುವ ದೇವರಾಜ್, ಬೆಳಗ್ಗೆ 6 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಹೋಗುವಾಗ ಅಪಘಾತ ನಡೆದಿದೆ. ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿಕ್ಕಪೇಟೆ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.