ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು!

By Suvarna News  |  First Published Mar 8, 2020, 9:01 PM IST

ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಟವೇರಾ ಕಾರು|ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬೆಂಗಳೂರು ಮತ್ತು  ಹಿಂದೂಪುರ ರಸ್ತೆಯ ಕಲ್ಲೂಡಿ ಬಳಿ ನಡೆದ ಘಟನೆ| 


ಚಿಕ್ಕಬಳ್ಳಾಪುರ[ಮಾ.08]: ಚಾಲಕನ ನಿಯಂತ್ರಣ ತಪ್ಪಿ ಟವೇರಾ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ 13 ಮಂದಿಗೆ ಗಾಯವಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬೆಂಗಳೂರು ಮತ್ತು  ಹಿಂದೂಪುರ ರಸ್ತೆಯ ಕಲ್ಲೂಡಿ ಬಳಿ ಇಂದು[ಭಾನುವಾರ] ನಡೆದಿದೆ. ವಿದುರಾಶ್ವತ್ಥ ದೇವಸ್ಥಾನಕ್ಕೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. 

ಸೇತುವೆಯಿಂದ ಕೆಳಗೆ ಬಿದ್ದ ಕಾರಿನಲ್ಲಿದ್ದ 13 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಗೌರಿಬಿದನೂರು ಆಸ್ಪತ್ರೆಗೆ ದಾಖಲಿಸಿದ ‌ಚಿಕಿತ್ಸೆ ಕೊಡಿಸಲಾಗುತ್ತಿದೆ. 13 ಗಾಯಾಳುಗಳ ಪೈಕಿ  ಎಂಟು ಜನರಿಗೆ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Tap to resize

Latest Videos

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಾಯಾಳುಗಳೆಲ್ಲ ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕಿನ ತಾಯಿ ನೂರು ಗ್ರಾಮದವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

click me!