ಮತದಾನದ ಪ್ರಮಾಣ ಹೆಚ್ಚಿಸಲು ಸ್ವೀಪ್ ಚಟುವಟಿಕೆ ಕೈಗೊಳ್ಳಿ : ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ

By Kannadaprabha News  |  First Published Jan 9, 2024, 12:20 PM IST

ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಂ. ಕೂರ್ಮಾ ರಾವ್ ಸೂಚಿಸಿದರು.


  ಮೈಸೂರು :  ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಎಂ. ಕೂರ್ಮಾ ರಾವ್ ಸೂಚಿಸಿದರು.

ಕಚೇರಿ ಸಭಾಂಗಣದಲ್ಲಿ  ನಡೆದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಗರ ಪ್ರದೇಶದ ಕ್ಷೇತ್ರಗಳಾದ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ಕ್ಷೇತ್ರಗಳಲ್ಲಿ ಕಡಿಮೆ ವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಎಂಬದನ್ನು ಗುರುತಿಸಿ ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸಿ ಎಂದರು.

Latest Videos

undefined

ಮತದಾನ ಕಡಿಮೆಯಾಗಲು ಕೆಲವರು ಬೇರೆ ಪ್ರದೇಶಗಳಲ್ಲಿ ವಲಸೆ ಹೋಗಿರುತ್ತಾರೆ. ಅವರ ಹೆಸರನ್ನು ಅವರು ಇರುವ ಮತಗಟ್ಟೆಗೆ ಫಾರಂ 8 ನ್ನು ನೀಡಿ ಶಿಫ್ಟ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ. ಇದರಿಂದ ಅವರು ಇರುವ ಕಡೆ ಮತದಾನ ಮಾಡಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

ಚುನಾವಣಾ ಸಾಕ್ಷರತಾ ಕ್ಲಬ್ ಗಳ ಮೂಲಕ ವ್ಯವಸ್ಥಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ಮತದಾನದ ಮಹತ್ವ ಕುರಿತು ಒಂದು ನಿಮಿಷದ ಕಿರುಚಿತ್ರಗಳ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡಿ. ಉತ್ತಮ ಕಿರುಚಿತ್ರಗಳನ್ನು ಮತದಾನ ಜಾಗೃತಿಯಲ್ಲಿ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಉಪ ಕಾರ್ಯದರ್ಶಿ ಡಾ. ಕೃಷ್ಣಂರಾಜು, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಶರೀಫ್, ಉಪ ಆಯುಕ್ತ ಸೋಮಶೇಖರ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬಿಎಲ್ಒಗಳು ಇದ್ದರು.

click me!