ಬೆಂಗಳೂರು: ನಗರ್ತಪೇಟೆ ಪ್ರತಿಭಟನೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ 40 ಮಂದಿ ವಿರುದ್ಧ ಕೇಸ್‌

Published : Mar 22, 2024, 06:57 AM IST
ಬೆಂಗಳೂರು: ನಗರ್ತಪೇಟೆ ಪ್ರತಿಭಟನೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ 40 ಮಂದಿ ವಿರುದ್ಧ ಕೇಸ್‌

ಸಾರಾಂಶ

ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಆದೇಶದ ಅನ್ವಯ ನಗರದಲ್ಲಿ ಸ್ವಾತಂತ್ರ್ಯ ಉದ್ಯಾನ ಹೊರತು ಪಡಿಸಿ ಬೇರೆ ಕಡೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಸರ್ಕಾರದ ಸುತ್ತೋಲೆ ಉಲ್ಲಂಘನೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ, ಕಾನೂನು-ಸುವ್ಯವಸ್ಥೆಗೆ ಭಂಗ ಮಾಡಿದ ಆರೋಪದಡಿ ಹಲಸೂರು ಗೇಟ್ ಠಾಣೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು(ಮಾ.22):  ಇತ್ತೀಚೆಗೆ ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್ ಮಾಡಿ ಪ್ರತಿಭಟಿಸಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದ ಅಡಿ ಸಚಿವೆ ಶೋಭಾ ಕರಂದ್ಲಾಜೆ, ಸಂಸ ದರಾದ ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿ 44 ಮಂದಿ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಭಜನೆ ಹಾಕಿದ ಕಾರಣಕ್ಕೆ ಪುಂಡರ ಗುಂಪೊಂದು ಆತನ ಮೇಲೆ ಹಲ್ಲೆ ಮಾಡಿದ್ದ ಘಟನೆ ಖಂಡಿಸಿ ಮಾ.19ರಂದು ನಗರ್ತಪೇಟೆಯ ಸಿದ್ದಣ್ಣಗಲ್ಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಯಾವುದೇ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆ ನೂರಾರು ಕಾರ್ಯಕರ್ತರು ಪ್ರತಿಭಟನೆ ಮಾಡಲಾಗಿತ್ತು. ಇದರಿಂದ ಜನರು ಹಾಗೂ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು

ಹನುಮಾನ್ ಚಾಲೀಸಾ ವಿಚಾರಕ್ಕೆ ಹಲ್ಲೆ ನಡೆದಿದ್ದರೆ ಕಠಿಣ ಕ್ರಮ ಜರುಗಿಸಿ: ಕೆಪಿಸಿಸಿ ವಕ್ತಾರ ಶಂಕರ ಗುಹ

ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಆದೇಶದ ಅನ್ವಯ ನಗರದಲ್ಲಿ ಸ್ವಾತಂತ್ರ್ಯ ಉದ್ಯಾನ ಹೊರತು ಪಡಿಸಿ ಬೇರೆ ಕಡೆ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಹೀಗಾಗಿ ಸರ್ಕಾರದ ಸುತ್ತೋಲೆ ಉಲ್ಲಂಘನೆ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿ, ಕಾನೂನು-ಸುವ್ಯವಸ್ಥೆಗೆ ಭಂಗ ಮಾಡಿದ ಆರೋಪದಡಿ ಹಲಸೂರು ಗೇಟ್ ಠಾಣೆ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV
Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!