ಕೊರೋನಾ ನಿಯಮ ಉಲ್ಲಂಘನೆ: 9 ಕರವೇ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

By Kannadaprabha News  |  First Published Apr 8, 2021, 12:12 PM IST

ಕೊರೋನಾ ನಿಯಮ ಉಲ್ಲಂಘಿಸಿ ಪ್ರತಿಭಟನೆ ಮಾಡಿದ್ದ ಕರವೇ ಕಾರ್ಯಕರ್ತರು| ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ಸೇರಿದಂತೆ ಇತರೆ 9 ಜನರ ವಿರುದ್ಧ ಪ್ರಕರಣ ದಾಖಲು| ಶಾಸಕರ ವಿರುದ್ಧವೂ ಪ್ರಕರಣ ದಾಖಲಿಸಿ: ರಮೇಶ ಬದ್ನೂರ| 


ಬಾಗಲಕೋಟೆ(ಏ.08): ಕರವೇ ವತಿಯಿಂದ ಮಂಗಳವಾರ ಬಾಗಲಕೋಟೆ ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಾರಂಭಕ್ಕೆ ಅನುದಾನ ಒದಗಿಸುವಂತೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ 9 ಜನರ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.

ಕೋವಿಡ್‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಗರದ ಬೀಳೂರು ಗುರುಬಸವ ದೇವಸ್ಥಾನದಿಂದ ಬಸವೇಶ್ವರ ಸರ್ಕಲ್‌ವರೆಗೆ ಪ್ರತಿಭಟನಾ ರಾರ‍ಯಲಿ ಹಮ್ಮಿಕೊಂಡಿತ್ತು. ಕಾರ್ಯಕರ್ತರು ಸಾರ್ವಜನಿಕ ಸ್ಥಳದಲ್ಲಿ ಆದೇಶವನ್ನು ಉಲ್ಲಂಘನೆ ಮಾಡಿ ಸಾಮಾಜಿಕ ಅಂತರವಿಲ್ಲದೆ ರಾರ‍ಯಲಿ ನಡೆಸಿರುವುದೇ ಪ್ರಕರಣ ದಾಖಲಿಸಿಕೊಳ್ಳಲು ಪ್ರಮುಖ ಕಾರಣವಾಗಿದೆ.

Tap to resize

Latest Videos

'ಬಿಎಸ್‌ವೈ ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕಾದ ಹೈಕಮಾಂಡ್‌ ಬಾಯಿಮುಚ್ಚಿ ಕುಳಿತಿದೆ'

ಬಾಗಲಕೋಟೆ ತಹಸೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಅವರು ನೀಡಿರುವ ದೂರಿನ ಮೇರೆಗೆ ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ಸೇರಿದಂತೆ ಇತರೆ 9 ಜನರ ವಿರುದ್ಧ ಕಲಂ 143, 147, 269, 270 ಹಾಗೂ ಐಪಿಸಿ ಕಲಂ 51, ರಾಷ್ಟ್ರೀಯ ವಿಪತ್ತು ಕಾಯ್ದೆ 2005ರಡಿ ಪ್ರಕರಣವನ್ನು ಬಾಗಲಕೋಟೆ ನಗರ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿದೆ.

ಶಾಸಕರ ವಿರುದ್ಧವೂ ಪ್ರಕರಣ ದಾಖಲಿಸಿ:

ಕರವೇ ಜಿಲ್ಲಾಧ್ಯಕ್ಷ ರಮೇಶ ಬದ್ನೂರ ತಮ್ಮ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿ, ದಿ.6ರಂದು ನಗರದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಿ ಬಾಗಲಕೋಟೆ ಶಾಸಕರು ರಾಷ್ಟ್ರೀಯ ವಿಪತ್ತು ಕಾಯ್ದೆ 2005ನ್ನು ಉಲ್ಲಂಘಿಸಿ ಗಂಭೀರ ಅಪರಾಧ ಎಸಗಿದ್ದು ಜಿಲ್ಲಾಡಳಿತ ಅವರ ವಿರುದ್ಧ ಸ್ವಇಚ್ಚೆಯಿಂದ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
 

click me!