ಕೊರೋನಾ ವೈರಸ್ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಎಂ.ಟಿ.ಸುಭಾಶ್ಚಂದ್ರ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದಾವಣಗೆರೆ(ಏ.12): ಕೊರೋನಾ ವೈರಸ್ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಎಂ.ಟಿ.ಸುಭಾಶ್ಚಂದ್ರ ಇಲ್ಲಿನ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜವಾಬ್ಧಾರಿಯುತ ಸ್ಥಾನದಲ್ಲಿರುವ ರೇಣುಕಾಚಾರ್ಯ ಸಾರ್ವಜನಿಕವಾಗಿ, ಮಾಧ್ಯಮಗಳ ಮುಂದೆ ಕೊರೋನಾ ಹರಡುವವರನ್ನು ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದು, ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡುವುದು ಐಪಿಸಿ ಸೆಕ್ಷನ್ 505(ಬಿ) ಉಲ್ಲಂಘನೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
undefined
ಕೊರೋನಾ ಚಿಕಿತ್ಸೆಗೆ ದೇಶದಲ್ಲಿ 586 ಆಸ್ಪತ್ರೆ!
ಹೊನ್ನಾಳಿ ಶಾಸಕರ ಇಂತಹ ಉಡಾಫೆ ಹೇಳಿಕೆಗಳು ಇದೇ ಹೊಸದಲ್ಲ. ಚುನಾಯಿತ ಪ್ರತಿನಿಧಿಯೊಬ್ಬರು ಇಂತಹ ಸಂದರ್ಭದಲ್ಲೂ ಹೀಗೆ ಹೇಳಿಕೆ ನೀಡಿ, ನಾಗರೀಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಒಂದು ಕೋಮವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನ ಶಾಸಕರ ಹೇಳಿಕೆಯಿಂದ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ದೇಶದ 200 ವೈದ್ಯ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ!
ಒಬ್ಬ ಶಾಸಕ ಯಾರನ್ನೇ ಆಗಲಿ ಗುಂಡಿಕ್ಕಿ ಕೊಲ್ಲು ಎಂಬುದು ನಾಗರೀಕ ಸಮಾಜದ ಲಕ್ಷಣವಲ್ಲ. ರೇಣುಕಾಚಾರ್ಯ ಹೇಳಿಕೆಯು ಸ್ಪಷ್ಟವಾಗಿ ಕಾನೂನನ್ನು ಉಲ್ಲಂಘಿಸುವ ಮತ್ತು ಪ್ರಚೋದನಾಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯಗೆ ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ, ಗೃಹ ಮಂತ್ರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟರಿಗೆ ಎಂ.ಟಿ.ಸುಭಾಶ್ಚಂದ್ರ ಒತ್ತಾಯಿಸಿದ್ದಾರೆ.