ನನ್ನ ಕ್ಷೇತ್ರದಲ್ಲಿರುವ ಮುಸ್ಲಿಮರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ. ಅವರು ನನಗೆ ಮತ ಹಾಕಲಿಲ್ಲ ಎಂದು ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯಗೆ ಸಂಕಷ್ಟ ಎದುರಾಗಿದೆ.
ಮಂಗಳೂರು(ಜ.26): ಮುಸ್ಲಿಂ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಶಾಸಕ ರೇಣುಕಾಚಾರ್ಯ ವಿರುದ್ಧ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಕ್ರಿಮಿನಲ್ ದೂರು ದಾಖಲಿಸಿದೆ.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ರೇಣುಕಾಚಾರ್ಯ ಅವರು ‘ನನ್ನ ಕ್ಷೇತ್ರದಲ್ಲಿರುವ ಮುಸ್ಲಿಮರ ಅಭಿವೃದ್ಧಿಗಾಗಿ ಕೆಲಸ ಮಾಡುವುದಿಲ್ಲ. ಅವರು ನನಗೆ ಮತ ಹಾಕಲಿಲ್ಲ. ಮಸೀದಿ ಮದರಸಗಳಲ್ಲಿ ಶಸ್ತ್ರಾಸ್ತಗಳನ್ನು ಸಂಗ್ರಹಿಸಿಡಲಾಗಿದೆ. ಮದರಸಗಳಲ್ಲಿ ಭಯೋತ್ಪಾದನೆ ಪೋಷಿಸಲಾಗುತ್ತಿದೆ’ ಎಂದು ಕೀಳು ಹೇಳಿಕೆ ನೀಡಿದ್ದರು. ಇದರ ವಿರುದ್ಧ ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'ಮುಸ್ಲಿಮರ ಬೆಂಬಲ ಬೇಡ, ಹೊನ್ನಾಳಿ-ನ್ಯಾಮತಿ ಕೇಸರಿಮಯ ಮಾಡ್ತೀನಿ!'
ರೇಣುಕಾಚಾರ್ಯ ಧರ್ಮಗಳ ನಡುವೆ ದ್ವೇಷ ಹಾಗೂ ಅಪನಂಬಿಕೆ ಹುಟ್ಟಿಸುತ್ತಿದ್ದು, ಮತೀಯ ಹಿಂಸಾಚಾರಗಳಿಗೆ ಪ್ರಚೋದನೆ ನೀಡಿದ್ದಾರೆ. ಮತ ಹಾಕದ ಮುಸ್ಲಿಮರ ಅಭಿವೃದ್ಧಿ ಮಾಡುವುದಿಲ್ಲ ಎನ್ನುವುದು ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ಹಾಗಾಗಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ ಎಂದು ಎಸ್‌ಡಿಪಿಐ ಪ್ರಕಟಣೆ ತಿಳಿಸಿದೆ.
'ಮುಸ್ಲಿಮರ ಕೇರಿಗೆ ಬಂದ ಹಣ ಹಿಂದುಗಳ ಕೇರಿಗೆ ನೀಡುವೆ'