ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ನಿತ್ಯವೂ ವಿನೂತನ ಪ್ರತಿಭಟನೆಗಳು ಮುಂದುವರೆದಿವೆ. ಅದೇ ರೀತಿ ಸೋಮವಾರ ಕನ್ನಡ ಸೇನೆ ಮತ್ತು ಬಿಜೆಪಿ ಕಾರ್ಯಕರ್ತರು ಬೇವು-ಬೆಲ್ಲ ಹಿಡಿದು ಪ್ರತಿಭಟನೆ ನಡೆಸಿ
ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ನಿತ್ಯವೂ ವಿನೂತನ ಪ್ರತಿಭಟನೆಗಳು ಮುಂದುವರೆದಿವೆ. ಅದೇ ರೀತಿ ಸೋಮವಾರ ಕನ್ನಡ ಸೇನೆ ಮತ್ತು ಬಿಜೆಪಿ ಕಾರ್ಯಕರ್ತರು ಬೇವು-ಬೆಲ್ಲ ಹಿಡಿದು ಪ್ರತಿಭಟನೆ ನಡೆಸಿ
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿ ಸತ್ಯಾಗ್ರಹವನ್ನು ಬೆಂಬಲಿಸಿ ಹೋರಾಟದಲ್ಲಿ ಪಾಲ್ಗೊಂಡು, ಕಾವೇರಿ ನದಿ ನೀರು ಹಂಚಿಕೆಯಲ್ಲಿ ತಮಿಳುನಾಡಿಗೆ ಬೆಲ್ಲ-ಕರ್ನಾಟಕಕ್ಕೆ ಬೇವು ಎಂಬಂತೆ ಚೊಂಬಿನಲ್ಲಿ ಬೇವು-ಬೆಲ್ಲ ಹಿಡಿದು ವಿನೂತನ ಹೋರಾಟ ನಡೆಸಿದರು
undefined
ರಾಜ್ಯ ಸರ್ಕಾರ ಕಾವೇರಿ ನದಿ ನೀರು ಪ್ರಾಧಿಕಾರ ಮತ್ತು ನಿರ್ವಹಣಾ ಸಮಿತಿ ಎದುರು ಸಮರ್ಪಕವಾಗಿ ವಾದ ಮಂಡಿಸುವಲ್ಲಿ ವಿಫಲವಾಗಿದೆ. ಇದರಿಂದಾಗಿ ತಮಿಳುನಾಡಿಗೆ ರಾತ್ರೋ ರಾತ್ರಿ ನೀರು ಹರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಬೆಲ್ಲ ಕೊಟ್ಟು ಕರ್ನಾಟಕದ ರೈತರಿಗೆ ಬೇವು ಕೊಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಎಷ್ಟೇ ಹೋರಾಟ ಮಾಡಿದರೂ ನಾವು ನಿರಂತರವಾಗಿ ನೀರು ಹರಿಸುತ್ತೇವೆ ಎಂದು ಹಠ ಹಿಡಿದಿದೆ. ತಕ್ಷಣವೇ ನೀರು ನಿಲ್ಲಿಸಬೇಕು. ಇಲ್ಲದಿದ್ದರೆ ಅಧಿಕಾರ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿದರು.
ರೈತರನ್ನು ಉಗ್ರಗಾಮಿಗಳ ರೀತಿಯಲ್ಲಿ ಬಂಧಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ದೂರಿದರು. ಕನ್ನಂಬಾಡಿ ಖಾಲಿ ಖಾಲಿ, ತಮಿಳುನಾಡು ಜಾಲಿ ಜಾಲಿ, ರೈತರ ಕಿವಿಗೆ ಹೂವಿಟ್ಟು, ರೈತರ ಕೈಗೆ ಜೊಂಬಿಟ್ಟ ಸರ್ಕಾರ ಎಂಬಿತ್ಯಾದಿ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ, ಮುಖಂಡರಾದ ಇಂಡುವಾಳು ಚಂದ್ರಶೇಖರ್, ಬೋರಯ್ಯ, ಸುನಂದಾ ಜಯರಾಂ, ಸಿ.ಟಿ. ಮಂಜುನಾಥ್, ಅಂಬುಜಮ್ಮ, ಕನ್ನಡಸೇನೆ ಮಂಜುನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಾವೇರಿ ಸಂಕಷ್ಟ ಸೂತ್ರದ ಬಗ್ಗೆ ನಿಖರ ಅಂಕಿ ಅಂಶಗಳಿಲ್ಲ
ಮಂಡ್ಯ (ಅ.03): ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಸಂಕಷ್ಟ ಸೂತ್ರ ಕುರಿತಂತೆ ನ್ಯಾಯಾಧೀಕರಣದ ಬಳಿ ನಿಖರ ಅಂಕಿ-ಅಂಶಗಳಿಲ್ಲ. ಈ ಕುರಿತಂತೆ ರಾಜ್ಯ ಸರ್ಕಾರ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸಂಕಷ್ಟ ಸೂತ್ರ ಸಿದ್ಧಪಡಿಸಿಕೊಂಡು ಮುನ್ನಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಸಂಕಷ್ಟ ಸೂತ್ರ ಸಿದ್ಧಪಡಿಸಿಕೊಂಡು ಕಾನೂನು ಹೋರಾಟ ನಡೆಸುವುದರಿಂದ ಮಾತ್ರ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯ.
ಈ ಸೂತ್ರವನ್ನು ಮುಂದಿಟ್ಟುಕೊಂಡು ಕಾವೇರಿ ನೀರು ನಿಯಂತ್ರಣ ಸಮಿತಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸುವಂತೆ ಸಲಹೆ ನೀಡಿದರು. ಸುಪ್ರೀಂಕೋರ್ಟ್ ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದರೆ ಕೇಂದ್ರದ ಮೇಲೆ ನಾವೆಲ್ಲರೂ ಸೇರಿ ಒತ್ತಡ ಹಾಕುವುದಕ್ಕೆ ಸಿದ್ಧರಿದ್ದೇವೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಹಿಂದೆ ಪ್ರಧಾನಮಂತ್ರಿಗಳಿಗೆ ಎಲ್ಲ ರೀತಿಯ ಅಧಿಕಾರವಿತ್ತು. ಆದರೆ, ಪ್ರಾಧಿಕಾರ ರಚನೆಯಾದ ನಂತರದಲ್ಲಿ ಪ್ರಧಾನಿಯವರ ಅಧಿಕಾರ ಮೊಟಕುಗೊಂಡಿದೆ. ಪ್ರಾಧಿಕಾರ ಮತ್ತು ಸುಪ್ರೀಂಕೋರ್ಟ್‌ನಲ್ಲಿ ನೀರು ಸಂಗ್ರಹದ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಬಹುದಾಗಿದೆ ಎಂದು ಹೇಳಿದರು.
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ತಮಿಳುನಾಡಿನ ಕುರುವೈ ಬೆಳೆಗೆ ಹಾಗೂ ಕರ್ನಾಟಕದ ಮುಂಗಾರು ಬೆಳೆಗೆ ಬೇಕಾಗಿರುವ ಪ್ರದೇಶದ ಎಕರೆವಾರು ಮಾಹಿತಿ ಹಾಗೂ ನೀರಿನ ಪ್ರಮಾಣ ನ್ಯಾಯಮಂಡಳಿ ಆದೇಶದಲ್ಲಿ ನಿಗದಿಯಾಗಿದೆ. ಜಲಾಶಯಗಳಲ್ಲಿರುವ ನೀರಿನ ಮಟ್ಟವನ್ನು ಆಧರಿಸಿ ನೀರು ಹರಿಸುವಂತೆ ಎಲ್ಲಿಯೂ ಹೇಳಿಲ್ಲ. ಇಂತಹ ಅನೇಕ ಅಂಶಗಳನ್ನು ಮುಂದಿಟ್ಟುಕೊಂಡು ಸಮರ್ಥ ವಾದ ಮಂಡಿಸುವಲ್ಲಿ ರಾಜ್ಯಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. 2012ರಲ್ಲಿ ಬರ ಪರಿಸ್ಥಿತಿ ಎದುರಾಗಿದ್ದ ಸಮಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆ ಸಮಯದಲ್ಲಿ ತಮಿಳುನಾಡಿಗೆ ನಾಲ್ಕು ವಾರದಲ್ಲಿ 12 ಟಿಎಂಸಿ ನೀರು ಹರಿಸುವಂತೆ ಸರ್ವೋಚ್ಛ ನ್ಯಾಯಾಲಯ ಆದೇಶಿಸಿತ್ತು