ಕಾವೇರಿ ವಿವಾದಕ್ಕೆ ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಒಂದು ಅರ್ಜಿ ಸಲ್ಲಿಸಬೇಕು.
ಮದ್ದೂರು (ಅ.23): ಕಾವೇರಿ ವಿವಾದಕ್ಕೆ ನ್ಯಾಯಾಲಯದಿಂದ ಪರಿಹಾರ ಸಿಗುವುದಿಲ್ಲ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಒಂದು ಅರ್ಜಿ ಸಲ್ಲಿಸಬೇಕು. ಒಂದು ಸ್ವತಂತ್ರ ಪರಿಶೀಲನಾ ಸಮಿತಿಯನ್ನು ನೇಮಕ ಮಾಡಬೇಕು. ಅವರು ನಮ್ಮ ರಾಜ್ಯಕ್ಕೆ ಸೇರಿದವರೂ ಆಗಿರಬಾರದು. ತಮಿಳುನಾಡಿಗೆ ಸೇರಿದವರೂ ಆಗಿರಬಾರದು. ಆ ಸಮಿತಿಯನ್ನು ರಾಜ್ಯಕ್ಕೆ ಕಳುಹಿಸಿ ನೀರಿನ ಪರಿಸ್ಥಿತಿ ಅಧ್ಯಯನ ಮಾಡಿ ವರದಿ ಪಡೆಯಬೇಕು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಸಮಿತಿ ನೀಡುವ ವರದಿಯಲ್ಲಿ ನಮ್ಮಲ್ಲಿ ಸಾಕಷ್ಟು ನೀರಿದೆ, ಸುಳ್ಳು ಹೇಳುತ್ತಿದ್ದೇವೆ ಎನ್ನುವುದಾದರೆ ನೀರು ಕೊಡಲೇಬೇಕು. ಇಲ್ಲದಿದ್ದರೆ ನಮ್ಮ ನೀರನ್ನು ನಮಗೆ ಬಿಟ್ಟುಕೊಡಬೇಕು. ನಾವು ತಮಿಳುನಾಡಿನವರಿಗೆ ನೀರನ್ನು ದಾನ ಮಾಡಿ ನಮ್ಮವರನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ ಎಂದರು. ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಸರಿಯಾದ ವಾದ ಮಂಡನೆಯಾಗುತ್ತಿಲ್ಲವೆಂಬ ಆರೋಪದ ಬಗ್ಗೆ ಕೇಳಿದಾಗ, ಒಬ್ಬ ನ್ಯಾಯಮೂರ್ತಿಯಾಗಿ ಆ ವಿಚಾರದಲ್ಲಿ ಇನ್ನೊಬ್ಬರನ್ನು ದೂಷಿಸುವುದಿಲ್ಲ ಎಂದರು.
10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸಿಂಹ ಸ್ವಪ್ನವಾಗಿದ್ದ ಶ್ವಾನ ಟಿಪ್ಪುವಿಗೆ ಭಾವನಾತ್ಮಕ ಬೀಳ್ಕೊಡುಗೆ!
ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರನ್ನು ಪ್ರಶ್ನಿಸಿದಾಗ, ಹಿಂದೆ ರಾಜಕೀಯ ಎನ್ನುವುದು ಒಂದು ಸೇವೆಯಾಗಿತ್ತು. ಈಗ ಅದು ವೃತ್ತಿಯಾಗಿದೆ. ಸುಲಭವಾಗಿ ದುಡ್ಡು ಮಾಡಬಹುದಾದ ಕ್ಷೇತ್ರವಾಗಿದೆ. ಪ್ರಸ್ತುತ ಸೇವೆಗೆ ಇಲ್ಲಿ ಜಾಗವೇ ಇಲ್ಲ. ಇದಕ್ಕಾಗಿಯೇ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು ರಾಜಕೀಯಕ್ಕೆ ಬರುತ್ತಿದ್ದಾರೆ. ಸೇವೆ ಮಾಡುವವರಷ್ಟೇ ರಾಜಕೀಯಕ್ಕೆ ಬರಬೇಕು. ವೃತ್ತಿ ಮಾಡಿಕೊಳ್ಳುವವರು ಬಂದರೆ ವ್ಯವಸ್ಥೆ ಅವ್ಯವಸ್ಥೆಯಾಗುತ್ತದೆ. ಇದನ್ನು ಸರಿಪಡಿಸಬೇಕಾದರೆ ಜನರು ಎಚ್ಚೆತ್ತುಕೊಳ್ಳಬೇಕು ಎಂದು ನುಡಿದರು.
ಚಾಕೋಲೆಟ್ ಪ್ರತಿಭಟನೆ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ಮುಂದುವರೆದಿದ್ದು, ಭಾನುವಾರ ಕೂಡ ಚಾಕೋಲೆಟ್ ಪ್ರದರ್ಶಿಸಿ ರಾಜ್ಯ ಹಾಗೂ ಸರ್ಕಾರ ಮೋಸ ಮಾಡಿವೆ ಎಂದು ಆರೋಪಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಸರ್ಕಾರಗಳು ಕಾವೇರಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಜನತೆಗೆ ಚಾಕಲೇಟ್ ನೀಡಿ ಮೋಸ ಮಾಡಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ ಎಂದರು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಚಾಕಲೇಟ್ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಸಿಂಹವಾಹನಾಲಂಕಾರದಲ್ಲಿ ಶೃಂಗೇರಿ ಶಾರದೆ: ಸಿಂಹಾರೂಢಾ ಸಿದ್ದದಾತ್ರೀ ಅಲಂಕಾರದಲ್ಲಿ ಹೊರನಾಡಿನ ಅನ್ನಪೂಣೇಶ್ವರಿ!
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಚಾ.ರಂ.ಶ್ರೀನಿವಾಸಗೌಡ, ರಾಜ್ಯ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿದಿದೆ. ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಏಜೆಂಟ್ ರೀತಿ ವರ್ತನೆ ಮಾಡುತ್ತಿದೆ. ನಮ್ಮ ನೀರಿಗೆ ಅತ್ಯಂತ ತೊಂದರೆ ಉಂಟು ಮಾಡುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಸತತವಾಗಿ ಕಳೆದ 39 ದಿನಗಳಿಂದ ವಿನೂತನ ಪ್ರತಿಭಟನೆ ನಡೆಸಿಕೊಂಡು ಬಂದಿದ್ದು, ಬಾನುವಾರವೂ ಕೂಡ ಸರ್ಕಾರಗಳು ಕಾವೇರಿ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಜನತೆಗೆ ಚಾಕಲೇಟ್ ನೀಡಿ ಮೋಸ ಮಾಡಿವೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗಿದೆ ಎಂದರು.