ಮಂತ್ರಿ ಗ್ರೀನ್ಸ್ ಅಪಾರ್ಟ್​ಮೆಂಟ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ

Published : Jun 08, 2019, 07:58 PM ISTUpdated : Jun 08, 2019, 10:38 PM IST
ಮಂತ್ರಿ ಗ್ರೀನ್ಸ್ ಅಪಾರ್ಟ್​ಮೆಂಟ್‌ನಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ

ಸಾರಾಂಶ

ಹೆಸರು ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್. ಈ ಅಪಾರ್ಟ್​ಮೆಂಟ್​ ನಲ್ಲಿ ದೊಡ್ಡ ದೊಡ್ಡ ಶ್ರೀಮಂತರೇ  ವಾಸಿಸುತ್ತಿದ್ದಾರೆ. ಇಂತಹ ಹೈಫೈ ಅಪಾರ್ಟ್​ಮೆಂಟ್​ ನಲ್ಲಿ ವೇಶ್ಯಾವಾಟಿಕೆ ದಂಧೆಯೂ ನಡೆಯುತ್ತಿತ್ತು. ಇದು ಅಚ್ಚರಿಯಾದರೂ ಅನಿಸಿದರೂ ಸತ್ಯ.  

ಬೆಂಗಳೂರು, [ಜೂನ್.08]: ಬೆಂಗಳೂರಿನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಅರುಣ್ ಕೋಟ್ಯಾನ್ [47] ಹಾಗೂ ಕರಣ್ ಬಂಧಿತ ಆರೋಪಿಗಳು. ಹೊರ ರಾಜ್ಯದಿಂದ ಹುಡುಗಿಯರನ್ನು ಕರೆತಂದು ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಮಂತ್ರಿ ಗ್ರೀನ್ಸ್ ಅಪಾರ್ಟ್ ಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. 

ಆನ್ ಲೈನ್ ಮೂಲಕ ಗಿರಾಕಿಗಳನ್ನು ಸಂಪರ್ಕಿಸಿ ದಂಧೆ ನಡೆಸುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಶುಕ್ರವಾರ ರಾತ್ರಿ ಅಮಾರ್ಟ್ ಮೆಂಟ್ ಮೇಲೆ ದಾಳಿ ಮಾಡಿದ್ದು, ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

Mysuru dasara 2026: ಮೈಸೂರು ದಸರಾಗೆ ಇಂದು ಗವಿಶ್ರೀಗಳಿಂದ ಚಾಲನೆ; ಇದೇ ಮೊದಲ ಬಾರಿ ಕಂಬಳ ಆಯೋಜನೆ
ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ! ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಮುನ್ನ ಓಡುತ್ತಾ ಎಲೆಕ್ಟ್ರಿಕ್ ಎಂಜಿನ್ ?