ಪರಿಸರಸ್ನೇಹಿ ದೀಪಾವಳಿ ಆಚರಿಸಿ : ಶಾಸಕ ರಂಜನ್‌

By Kannadaprabha News  |  First Published Oct 20, 2022, 9:15 AM IST
  • ಪ್ರಕೃತಿಗೆ ಧಕ್ಕೆಯುಂಟು ಮಾಡದೆ ಪರಿಸರಸ್ನೇಹಿ ದೀಪಾವಳಿ ಆಚರಿಸಿ: ಶಾಸಕ ರಂಜನ್‌
  • ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪರಿಸರಸ್ನೇಹಿ ದೀಪಾವಳಿ ಆಚರಣೆ ಜಾಗೃತಿ ಆಂದೋಲನ

ಸುಂಟಿಕೊಪ್ಪ (ಅ.20) : ಸುಂಟಿಕೊಪ್ಪ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ದೀಪಾವಳಿ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ‘ಪರಿಸರಸ್ನೇಹಿ ದೀಪಾವಳಿ ಆಚರಣೆ’ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ನಾಳೆಯಿಂದ 10 ದಿನ ಮಂಗ್ಳೂರು KSRTC ದೀಪಾವಳಿ ಪ್ಯಾಕೆಜ್‌ ಟೂರ್‌!

Tap to resize

Latest Videos

undefined

ಜಿಲ್ಲಾಡಳಿತ, ಜಿ.ಪಂ., ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಘಟಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್‌್ಸನ ಜಿಲ್ಲಾ ಸಂಸ್ಥೆ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ‘ನಮ್ಮ ನಡೆ ಹಸಿರೆಡೆಗೆ: ಗೋ ಗ್ರೀನ್‌’ ಅಭಿಯಾನದಡಿ ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಪೂರ್ವಭಾವಿಯಾಗಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಪ್ರಯುಕ್ತ ಪರಿಸರ ಜಾಗೃತಿ ಆಂದೋಲನ ಆಯೋಜಿಸಲಾಗಿತ್ತು. ಆಂದೋಲನದಲ್ಲಿ 850ಕ್ಕೂ ಹೆಚ್ಚು ಶಾಲಾ ಮಕ್ಕಳು ಜತೆಗೂಡಿ ಹಣತೆ ಹಚ್ಚೊಣ ಬನ್ನಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ, ಹಣತೆ ಹಚ್ಚೋಣ, ಪಟಾಕಿ ತ್ಯಜಿಸೋಣ, ಪರಿಸರ ಉಳಿಸೋಣ ಎಂಬ ಪರಿಸರ ಪ್ರತಿಜ್ಞಾ ವಿಧಿ ಸ್ವಿಕರಿಸುವ ಮೂಲಕ ಹಸಿರು ದೀಪಾವಳಿ ಆಚರಣೆಗೆ ಸಂಕಲ್ಪ ಮಾಡಿದರು.

ಮಣ್ಣಿನ ಹಣತೆಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌ ಮಾತನಾಡಿ, ಹಸಿರು ದೀಪಾವಳಿ ಹಬ್ಬದ ಸಂದರ್ಭ ಹಣತೆ( ದೀಪ) ಬೆಳಗಿಸಬೇಕು. ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ಮಾಲಿನ್ಯದ ದುಷ್ಪರಿಣಾಮಗಳ ಕುರಿತು ಜಿಲ್ಲೆಯಲ್ಲಿ ವೀದ್ಯಾರ್ಥಿಗಳು ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು. ಪರಿಸರಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಯನ್ನು ಸಿಡಿಸುವ ಮೂಲಕ ಮಾಲಿನ್ಯಮುಕ್ತ ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕಿದೆ. ನಾವು ಪ್ರಕೃತಿಗೆ ಯಾವುದೇ ಧಕ್ಕೆಯನ್ನುಂಟು ಮಾಡದೆ ಉತ್ತಮ ಪರಿಸರ ಸಂರಕ್ಷಣೆಗೆ ಕಟಿಬದ್ಧರಾಗಬೇಕು ಎಂದರು.

ಜಿಲ್ಲೆಯಲ್ಲಿ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆದ ಪರಿಸರ ಸಂಘಟಕ ಟಿ.ಜಿ. ಪ್ರೇಮಕುಮಾರ್‌, ವಿಶೇಷ ಆಸಕ್ತಿ ಮತ್ತು ಉತ್ಸುಕತೆಯಿಂದ ಶಿಕ್ಷಕರ ತಂಡವು ಕಳೆದ ಹಲವಾರು ವರ್ಷಗಳಿಂದ ಕೊಡಗಿನಲ್ಲಿ ಹಸಿರು ದೀಪಾವಳಿ ಆಚರಣೆ ಮತ್ತು ಪರಿಸರ ಸ್ನೇಹಿ ಕಾರ್ಯಕ್ರಮಗಳ ಬ್ಗಗೆ ಜಾಗೃತಿ ಮೂಡಿಸುತ್ತಿರುವುದು ಪರಿಸರಕ್ಕೆ ಪೂರಕವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹಸಿರು ದೀಪಾವಳಿ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್‌ ಅಧಿಕಾರಿ ಟಿ.ಜಿ. ಪ್ರೇಮಕುಮಾರ್‌, ಪಟಾಕಿ ಸಿಡಿಸುವುದರಿಂದ ಹಣದ ದುಂದುವೆಚ್ಚದ ಜತೆಗೆ ಪರಿಸರ ಮತ್ತು ಆರೋಗ್ಯಕ್ಕೆ ಹಾನಿ, ವಾಯುಮಾಲಿನ್ಯ, ಶಬ್ದ ಮಾಲಿನ್ಯದ ಜತೆಗೆ ಹಾನಿಕಾರಕವಾದ ಅಂಧತ್ವದ ಅಪಾಯಗಳನ್ನು ಸೃಷ್ಟಿಸುವ ಮಾಲಿನ್ಯಕಾರ, ಪಟಾಕಿಯನ್ನು ಬಿಟ್ಟು ದೀಪಾವಳಿ ಆಚರಿಸಲು ವಿದ್ಯಾರ್ಥಿಗಳು ಕಂಕಣಬದ್ಧರಾಗಬೇಕಿದೆ ಎಂದರು. ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಭಾರತ್‌ ಸ್ಕೌಟ್ಸ್‌ ಮತ್ತು ಗೈv್ಸ…ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಅಪಾಯಕಾರಿ ಪಟಾಕಿ ಸಿಡಿಸುವುದರಿಂದ ಕಣ್ಣಿನ ದೋಷ, ಚರ್ಮದ ಕಾಯಿಲೆ, ಕ್ಯಾನ್ಸರ್‌ ಕಾಯಿಲೆ ಸೇರಿದಂತೆ ವಿಷಕಾರಿ ಅನಿಲ ಬಿಡುಗಡೆಗೊಂಡು ಪಕ್ಷಿ- ಪ್ರಾಣಿ ಜೀವ ಸಂಕುಲಕ್ಕೆ ತೊಂದರೆಯಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂತಮೇರಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ. ಅರುಳ್‌ ಸೆಲ್ವಕುಮಾರ್‌ ಮಾತನಾಡಿ, ಇಂತಹ ಪರಿಸರ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿN್ನೕಶ್‌ ಭೂತನಕಾಡು ಮಾತನಾಡಿ, ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ವಿಜ್ಞಾನ ಪರಿಷತ್ತಿನ ಸಂಘಟನೆ ಮೂಲಕ ಹಸಿರು ದೀಪಾವಳಿ ಆಚರಣೆಯನ್ನು ಯಶಸ್ವಿಯಾಗಿ ಸಂಘಟಿಸಿ ಆಚರಿಸುವ ಮೂಲಕ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು.

ನಂತರ ನಡೆದ ಪರಿಸರ ಸಂವಾದದಲ್ಲಿ ಮಾತನಾಡಿದ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ. ರಘುರಾಮ…, ಸರ್ಕಾರದ ನಿರ್ದೇಶನದಂತೆ ಹಸಿರು ದೀಪಾವಳಿ ಆಚರಿಸಲಾಗುತ್ತಿದ್ದು, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯು ಮಾಲಿನ್ಯ ಮತ್ತು ದುರಂತ ಸಂಭವಿಸುವುದನ್ನು ತಡೆಗಟ್ಟಲು ಇಂತಹ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಉದ್ಯೋಗಿಗಳಿಗೆ ಗುಡ್ ನ್ಯೂಸ್; ದೀಪಾವಳಿ ಬಳಿಕ ಇಪಿಎಫ್ ಖಾತೆಗೆ ಬಡ್ಡಿ ಕ್ರೆಡಿಟ್!

ಕೂಡಿಗೆ ಡಯಟ್‌ ಸಂಸ್ಥೆಯ ಪ್ರಾಂಶುಪಾಲ ಬಿ.ವಿ. ಮಲ್ಲೇಶಪ್ಪ, ಜಿಲ್ಲಾ ಪ್ರೌಢಶಾಲಾ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್‌, ಕಾರ್ಯದರ್ಶಿ ಎಚ್‌.ಜಿ. ಕುಮಾರ್‌, ಜಿಲ್ಲಾ ಸ್ಕೌಟ್ಸ್‌ ಸಂಸ್ಥೆಯ ಪ್ರಮುಖರಾದ ಜಿಮ್ಮಿ ಸಿಕ್ವೇರಾ, ಎಚ್‌.ಆರ್‌. ಮುತ್ತಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಕೆ. ಶ್ರೀನಿವಾಸ್‌, ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್‌, ಶಾಲಾ ಪ್ರಾಂಶುಪಾಲ ಆರ್‌. ಸೆಲ್ವರಾಜು, ಪರಿಷತ್ತಿನ ಪದಾಧಿಕಾರಿಗಳಾದ ಜಿ. ಶ್ರೀಹರ್ಷ, ಕೆ.ಎಸ್‌. ಅಶ್ವಿನಿ, ಎನ್‌.ಕೆ. ಮಾಲಾದೇವಿ, ಸಿಆರ್‌ಪಿ ಸೀಮಾ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಡಿ.ಪಿ. ಧರ್ಮಪ್ಪ, ದಯಾನಂದ ಪ್ರಕಾಶ್‌, ಬಿ.ಪಿ. ಉತ್ತಪ್ಪ, ಡಿ. ಚಂದನ ಇತರರು ಇದ್ದರು. ಶಿಕ್ಷಕಿ ಎನ್‌.ಕೆ. ಮಾಲಾದೇವಿ ಪರಿಸರ ಗೀತೆ ಹಾಡಿದರು. ಶಿಕ್ಷಕ ಜಿ. ಶ್ರೀಹರ್ಷ ವಂದಿಸಿದರು.

ಜಾಗೃತಿ ಅಭಿಯಾನ

ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಣತೆ ಹಚ್ಚೋಣ, ಹಸಿರು ದೀಪಾವಳಿ ಆಚರಿಸೋಣ, ಮಾಲಿನ್ಯಕಾರಿ ಪಟಾಕಿ ತ್ಯಜಿಸೋಣ ಮಾಲಿನ್ಯ ತಡೆಯೋಣ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ... ಎಂಬಿತ್ಯಾದಿ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದ ಜನರಲ್ಲಿ ಹಸಿರು ದೀಪಾವಳಿ ಆಚರಿಸುವಂತೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಿದರು.

click me!