2 ವಾರದಿಂದ ಉಡುಪಿಯಲ್ಲಿ ಹೊಸ ಕೊರೋನಾ ಪ್ರಕರಣವಿಲ್ಲ: ಕೇಂದ್ರದಿಂದ ಪ್ರಶಂಸೆ

By Kannadaprabha News  |  First Published Apr 17, 2020, 11:19 AM IST

ಕೊರೋನಾ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತದ ತೆಗೆದುಕೊಂಡ ಕಟ್ಟುನಿಟ್ಟು ಕ್ರಮಗಳಿಂದಾಗಿ ಕಳೆದ 2 ವಾರಗಳಿಂದ ಜಿಲ್ಲೆಯ ಯಾವುದೇ ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.


ಉಡುಪಿ(ಏ.17): ಕೊರೋನಾ ನಿಯಂತ್ರಣಕ್ಕೆ ಉಡುಪಿ ಜಿಲ್ಲಾಡಳಿತದ ತೆಗೆದುಕೊಂಡ ಕಟ್ಟುನಿಟ್ಟು ಕ್ರಮಗಳಿಂದಾಗಿ ಕಳೆದ 2 ವಾರಗಳಿಂದ ಜಿಲ್ಲೆಯ ಯಾವುದೇ ಹೊಸ ಕೊರೋನ ಪ್ರಕರಣಗಳು ಪತ್ತೆಯಾಗಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮಯ ನಿಗದಿಪಡಿಸಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಲಾಗಿದೆ. ಅನಗತ್ಯ ವಾಹನ ಸಂಚಾರ ನಿರ್ಬಂಧಿಸಲಾಗಿದೆ, ವಲಸೆ ಕಾರ್ಮಿಕರಿಗೆ, ನಿರಾಶ್ರಿತರಿಗೆ, ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಬಾಡಿಗೆ ಇಲ್ಲದೇ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೂ ಆಹಾರದ ಕಿಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Latest Videos

undefined

ಅಂಬೇಡ್ಕರ್‌ ದಿನಾಚರಣೆ

ಮಂಗಳವಾರ ಭಾರತರತ್ನ ಡಾ.ಬಿ. ಆರ್‌. ಅಂಬೇಡ್ಕರ್‌ ಜನ್ಮದಿನಾಚರಣೆ ಅಂಗವಾಗಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದ ಅಂಬೇಡ್ಕ​ರ್‌ ಪ್ರತಿಮೆಗೆ ಜಿಲ್ಲಾಧಿಕಾರಿ ಆರ್‌. ಜಗದೀಶ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಲಾಕ್‌ಡೌನ್: ಶೌಚಾಲಯ, ಸ್ಮಶಾನದಲ್ಲಿ ದಿನ ಕಳೆದ ಯುವಕ

ಜಿ.ಪಂ. ಸಿಇಓ ಪ್ರೀತಿ ಗೆಹಲೋತ್‌, ಎಸ್ಪಿ ವಿಷ್ಣುವರ್ಧನ್‌, ಎಡಿಸಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್‌ ಫಡ್ನೇಕರ್‌, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

click me!