ಮೀನುಗಾರಿಕೆ ಅಭಿವೃದ್ದಿಗೆ ಮತ್ಸ್ಯ ಸಂಪದ ಯೋಜನೆ ಜಾರಿ

By Kannadaprabha News  |  First Published Jul 25, 2020, 9:57 AM IST

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಯೋಜನೆಯಾಗಿದ್ದು, 2020-2025 ವರೆಗಿನ ಪಂಚವಾರ್ಷಿಕ ಯೋಜನೆಯಾಗಿರುತ್ತದೆ. ಜಿಲ್ಲೆಯಲ್ಲಿ ಜಲಾಶಯಗಳಿದ್ದು, ಒಳನಾಡು ಮೀನುಗಾರಿಕೆ ಇನ್ನಷ್ಟು ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶವಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾ​ಧಿಕಾರಿ ಜಿ.ಅನುರಾಧ ತಿಳಿಸಿದರು. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಶಿವಮೊಗ್ಗ(ಜು.25): ಕೇಂದ್ರ ಸರ್ಕಾರ ಹೊಸದಾಗಿ ಅನುಷ್ಟಾನಗೊಳಿಸಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಗರಿಷ್ಟ ಲಾಭ ಪಡೆದುಕೊಂಡು ಜಿಲ್ಲೆಯಲ್ಲಿ ಮೀನು ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾ​ಧಿಕಾರಿ ಜಿ.ಅನುರಾಧ ತಿಳಿಸಿದರು. ಜಿಲ್ಲಾ​ಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಯೋಜನೆಯಾಗಿದ್ದು, 2020-2025 ವರೆಗಿನ ಪಂಚವಾರ್ಷಿಕ ಯೋಜನೆಯಾಗಿರುತ್ತದೆ. ಜಿಲ್ಲೆಯಲ್ಲಿ ಜಲಾಶಯಗಳಿದ್ದು, ಒಳನಾಡು ಮೀನುಗಾರಿಕೆ ಇನ್ನಷ್ಟು ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶವಿದೆ. ಯೋಜನೆ ಸಮರ್ಪಕವಾಗಿ ಬಳಸಿಕೊಂಡು ಮೀನು ಮರಿ ಉತ್ಪಾದನೆ, ಹೊಸ ತಂತ್ರಜ್ಞಾನ ಅಳವಡಿಕೆ, ಮೀನುಗಾರಿಕೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಮೀನು ಮಾರುಕಟ್ಟೆಗಳ ನಿರ್ಮಾಣ, ಮೀನುಗಾರರ ಜೀವನೋಪಾಯ ಹಾಗೂ ಪೌಷ್ಟಿಕತೆಗೆ ಬೆಂಬಲ ನೀಡುವುದು, ಮೀನುಗಾರಿಕಾ ತರಬೇತಿ ನೀಡಲು ಸಾಧ್ಯವಿದೆ. ಈ ಕುರಿತು ಮೀನುಗಾರರಿಗೆ ಹೆಚ್ಚಿನ ಮಾಹಿತಿ ಒದಗಿಸುವ ಕಾರ್ಯ ಮಾಡಬೇಕು ಎಂದು ತಿಳಿಸಿದರು.

Latest Videos

undefined

2020-21ನೇ ಸಾಲಿಗೆ ಒಟ್ಟು ರು.3.13 ಕೋಟಿ ಯೋಜನಾ ವೆಚ್ಚದೊಂದಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಮೀನುಮರಿ ಪಾಲನೆ ಪ್ರತಿ ಹೆಕ್ಟೇರ್‌ ವಿಸ್ತೀರ್ಣಕ್ಕೆ ರು. 11 ಲಕ್ಷವಿದ್ದು ಸಾಮಾನ್ಯ ವರ್ಗದವರಿಗೆ ಶೇ.40 ಹಾಗೂ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದ ಹಾಗೂ ಮಹಿಳೆಯರಿಗೆ ಶೇ.60 ಸಹಾಯಧನ ಲಭ್ಯವಿದೆ ಎಂದರು.

ಹೀರೋ ಆಗುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕರಿಂದ ಆರೋಪ: ಈಶ್ವರಪ್ಪ

ಮೀನು ಕೃಷಿಕೊಳ ನಿರ್ಮಾಣ, ಸಾರಯುಕ್ತ ಮಣ್ಣಿನಲ್ಲಿ ಮೀನು ಉತ್ಪಾದನಾ ಕೊಳ ನಿರ್ಮಾಣ, ಮೀನು ಸಾಕಾಣಿಕೆಗೆ ಹೂಡಿಕೆ ಸಹಾಯ, ಬಯೋಪ್ಲಾಕ್‌ ಕೊಳ ನಿರ್ಮಾಣ, ಸಣ್ಣ ಮತ್ತು ಮಧ್ಯಮ ಗಾತ್ರದ ಅಲಂಕಾರಿಕ ಮೀನು ಉತ್ಪಾದನೆ ಮತ್ತು ಪಾಲನಾ ಕೇಂದ್ರ ನಿರ್ಮಾಣ, ರೀಸಕ್ರ್ಯೂಲೇಟರಿ ಅಕ್ವಕಲ್ಚರ್‌ ಸಿಸ್ಟಂ ನಿರ್ಮಾಣ, ಜಲಾಶಯಗಳಲ್ಲಿ ಕೇಜ್‌ಗಳ ಸ್ಥಾಪನೆ, ಜಲಾಶಯಗಳಲ್ಲಿ ಪೆನ್‌ಕಲ್ಚರ್‌ ನಿರ್ಮಾಣ, ಮಂಜುಗಡ್ಡೆ ಉತ್ಪಾದನಾ ಕಾರ್ಖಾನೆ, ಕೋಲ್ಡ್‌ ಸ್ಟೋರೇಜ್‌ ನಿರ್ಮಾಣ, ರೆಫ್ರಿಜರೇಟರ್‌ ವಾಹನ, ಇನ್ಸುಲೇಟೇಡ್‌ ವಾಹನ, ಮೋಟಾರ್‌ ಸೈಕಲ್‌ ಐಸ್‌ ಬಾಕ್ಸ್‌ ಖರೀದಿ, ಸೈಕಲ್‌ ಮತ್ತು ಐಸ್‌ಬಾಕ್ಸ್‌ ಖರೀದಿ, ಮೀನು ಮಾರಾಟ ಕಿಯೋಸ್ಕ್‌ ನಿರ್ಮಾಣ, ಮೀನು ಆರೋಗ್ಯ ತಪಾಸಣಾ ಪ್ರಯೋಗಾಲಯಗಳ ಸ್ಥಾಪನೆ, ಮೊಬೈಲ್‌ ಕ್ಲಿನಿಕ್‌ ಲ್ಯಾಬ್‌ಗಳು ಹಾಗೂ ಮತ್ಸ್ಯ ಸೇವಾ ಕೇಂದ್ರಗಳ ಸ್ಥಾಪನೆ ಹಾಗೂ ಮೀನುಗಾರರ ಜೀವನೋಪಾಯ ಹಾಗೂ ಪೌಷ್ಟಿಕತೆಗೆ ಒತ್ತು ನೀಡುವುದು, ಮೀನುಗಾರರಿಗೆ ಜೀವ ವಿಮಾ ಸೌಲಭ್ಯ ಕ್ರಿಯಾ ಯೋಜನೆಯಲ್ಲಿ ಕಲ್ಪಿಸಿರುವುದಾಗಿ ಮೀನುಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಷಡಕ್ಷರಿ ಹೇಳಿದರು.

ಮೀನುಗಾರರು, ಮೀನು ಕೃಷಿಕರು, ಮೀನು ಮಾರಾಟಗಾರರು, ಸ್ವಸಹಾಯ ಸಂಘಗಳು, ಮೀನುಗಾರಿಕೆ ಸಹಕಾರ ಸಂಘಗಳು, ಖಾಸಗಿ ಸಂಸ್ಥೆಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದ್ದು, ನಿಗದಿತ ನಮೂನೆಯಲ್ಲಿ ಅರ್ಜಿ ಆಗಸ್ಟ್‌ 5ರ ಒಳಗಾಗಿ ತಾಲೂಕು ಮೀನುಗಾರಿಕೆ ಇಲಾಖೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಮತ್ತು ತಾಲೂಕು ಮೀನುಗಾರಿಕೆ ಇಲಾಖೆ ಅ​ಕಾರಿಗಳ ಕಚೇರಿಗೆ ಹಾಗೂ ಇಲಾಖಾ ಜಾಲತಾಣ ಸಂಪರ್ಕಿಸಲು ತಿಳಿಸಿದರು.

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಯೋಜನೆಯಾಗಿದ್ದು, 2020-2025 ವರೆಗಿನ ಪಂಚವಾರ್ಷಿಕ ಯೋಜನೆಯಾಗಿರುತ್ತದೆ. ಜಿಲ್ಲೆಯಲ್ಲಿ ಜಲಾಶಯಗಳಿದ್ದು, ಒಳನಾಡು ಮೀನುಗಾರಿಕೆ ಇನ್ನಷ್ಟುಅಭಿವೃದ್ಧಿ ಪಡಿಸಲು ಉತ್ತಮ ಅವಕಾಶವಿದೆ. ಯೋಜನೆ ಸಮರ್ಪಕವಾಗಿ ಬಳಸಿಕೊಂಡು ಮೀನು ಮರಿ ಉತ್ಪಾದನೆ, ಹೊಸ ತಂತ್ರಜ್ಞಾನ ಅಳವಡಿಕೆ, ಮೀನುಗಾರಿಕೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಮೀನು ಮಾರುಕಟ್ಟೆಗಳ ನಿರ್ಮಾಣ, ಮೀನುಗಾರಿಕಾ ತರಬೇತಿ ನೀಡಲು ಸಾಧ್ಯವಿದೆ. - ಜಿ. ಅನುರಾಧ, ಅಪರ ಜಿಲ್ಲಾಧಿ
 

click me!