ಕರಾವಳಿಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 25 ಲಕ್ಷ ಲೀಟರ್ ಸೀಮೆಎಣ್ಣೆ ಬಿಡುಗಡೆ

By Gowthami K  |  First Published Jan 12, 2023, 6:00 PM IST

ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 25 ಲಕ್ಷ ಲೀಟರ್  ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ.


ಉಡುಪಿ (ಜ.12): ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500 ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಕೇಂದ್ರ ಸರಕಾರ ಬಿಡುಗಡೆಗೊಳಿಸಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5,472 ಕೆಎಲ್ ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತ ಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2,472 ಕೆಎಲ್ + 3,000 ಕೆಎಲ್ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. 

Tap to resize

Latest Videos

undefined

ಇಂದು ದಿನಾಂಕ 12.1.2023ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ 2,500 ಕೆಎಲ್ ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿ ಆದೇಶ ಮಾಡಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ 2022-23ರ ಸಾಲಿನ ಅವಧಿಯ ಹಂಚಿಕೆಗಿಂತಲೂ ಹೆಚ್ಚಿನ ಪ್ರಮಾಣದ ಸೀಮೆ ಎಣ್ಣೆಯನ್ನು ರಾಜ್ಯದ ಮೀನುಗಾರರಿಗೆ ಬಿಡುಗಡೆಗೊಳಿಸಿದೆ. ಒಟ್ಟಾರೆಯಾಗಿ 7,972 ಕೆಎಲ್  (5,472 ಕೆಎಲ್ + 2,500 ಕೆಎಲ್) ಸೀಮೆ ಎಣ್ಣೆ ಹಂಚಿಕೆಯನ್ನು 2022-23ನೇ ಸಾಲಿನಲ್ಲಿ ರಾಜ್ಯದ ಕರಾವಳಿ ಮೀನುಗಾರರು ಕೇಂದ್ರದಿಂದ ಪಡೆದುಕೊಂಡಿದ್ದಾರೆ.

ಕರಾವಳಿ ಪ್ರದೇಶದ ಮೀನುಗಾರರ ಅಗತ್ಯಕ್ಕೆ ತಕ್ಕಂತೆ ಕೇಂದ್ರ ಸರ್ಕಾರ ಸ್ಪಂದನೆಯನ್ನು ನೀಡಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವರಲ್ಲಿ ಮನವಿ ಮಾಡಲಾಗಿತ್ತು. ಕರಾವಳಿ ಪ್ರದೇಶದ ಜೀವನಾಧಾರ ಮೀನುಗಾರಿಕೆ. ಮೀನುಗಾರಿಕೆಯನ್ನೇ ಬಹುಪಾಲು ಜನರು ನಂಬಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ಮೀನುಗಾರರ ಮನವಿಯನ್ನು ಪರಿಗಣಿಸಬೇಕೆಂದು ಒತ್ತಾಯಪೂರ್ವಕವಾಗಿ ಶೋಭಾ ಕರಂದ್ಲಾಜೆಯವರು ಮನವಿ ಮಾಡಿದ್ದರು. 

ಸೀಮೆ ಎಣ್ಣೆ ನೀಡಲಾಗದಿದ್ರೆ ತೊಲಗಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಅದರಂತೆ ಕೇಂದ್ರದ ಪೆಟ್ರೋಲಿಯಂ ಸಚಿವ ಹರದೀಪ ಸಿಂಗ್ ಪುರಿಯವರು ಮನವಿಗೆ ಸ್ಪಂದಿಸಿ, ಮೀನುಗಾರರ ಬೇಡಿಕೆಯನ್ನು ಈಡೇರಿಸಿದ್ದಾರೆ.ಕೇಂದ್ರ ಪೆಟ್ರೋಲಿಯಂ ಸಚಿವ ಹರದೀಪ ಸಿಂಗ್ ಪುರಿಯವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಕರಾವಳಿ ಪ್ರದೇಶದ ಸಮಸ್ತ ಮೀನುಗಾರರ ಪರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು  ಧನ್ಯವಾದಗಳನ್ನು ತಿಳಿಸಿದ್ದಾರೆ.

Mangaluru News: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ: ನಳಿನ್‌

ನಾಡಿನ ಸಮಸ್ತ ಮೀನುಗಾರರ ಪರ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದಾ ತಮ್ಮೊಂದಿಗೆ ಇದೆ. ಕೇಂದ್ರ ಸರ್ಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು ಮೀನುಗಾರರಲ್ಲಿ ಮನವಿ ಮಾಡಿದ್ದಾರೆ.

click me!